ಶಿವಮೊಗ್ಗ | ಕೃಷಿ ಹೊಂಡಕ್ಕೆ ಬಿದ್ದು ಯುವಕರಿಬ್ಬರು ಸಾವು

Date:

ಶಿವಮೊಗ್ಗ ಗ್ರಾಮಾಂತರದಲ್ಲಿ ಜಮೀನೊಂದರ ಕೃಷಿ ಹೊಂಡಕ್ಕೆ ಯುವಕರಿಬ್ಬರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ದಾರುಣ ಘಟನೆ, ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಯಡವಾಲ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.ಯಡವಾಲ ಗ್ರಾಮದ ನಿವಾಸಿ ಗೌತಮ್ (22) ಹಾಗೂ ಶಿವಮೊಗ್ಗದ ಕುಂಬಾರಗುಂಡಿ ಬಡಾವಣೆ ನಿವಾಸಿ ಚಿರಂಜೀವಿ (22) ಮೃತಪಟ್ಟವರೆಂದು ಗುರುತಿಸಲಾಗಿದೆ.ಘಟನೆಯಲ್ಲಿ ಹೊಂಡಕ್ಕೆ ಬಿದ್ದಿದ್ದ ಮತ್ತೋರ್ವ ಯುವಕ ಈಜಿ ದಡ ಸೇರಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

1001788654

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ತಂಡ ಆಗಮಿಸಿದೆ. ಕೃಷಿ ಹೊಂಡದಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ಮೃತ ದೇಹಗಳನ್ನು ರವಾನಿಸಲಾಗಿದೆ.ಲಭ್ಯ ಮಾಹಿತಿ ಅನುಸಾರ, ಮೃತ ಗೌತಮ್ ಅವರ ಕುಟುಂಬಕ್ಕೆ ಸೇರಿದ ತೋಟದ ಪಕ್ಕದ ಜಮೀನೊಂದರ ಬಳಿ ಘಟನೆ ನಡೆದಿದೆ. ರಾತ್ರಿ ಗೌತಮ್ ಸುಮಾರು 10 ಜನ ಸ್ನೇಹಿತರ ಜೊತೆಗೂಡಿ ತೋಟಕ್ಕೆ ಹೋಗಿದ್ದಾರೆ.ಈ ವೇಳೆ ಕೃಷಿ ಹೊಂಡದಲ್ಲಿ ನೀರು ತರಲು ಹೋದ ಯುವಕ, ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದು ಈತನ ರಕ್ಷಣೆಗೆ ಹೋದ ಮತ್ತೋರ್ವನು ನೀರು ಪಾಲಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.ಇವರಿಬ್ಬರ ರಕ್ಷಣೆಗೆ ತೆರಳಿದ್ದ ಮತ್ತೋರ್ವ ಯುವಕ ಈಜಿ ದಡ ಸೇರಿದ್ದಾನೆ ಎಂದು ಹೇಳಲಾಗುತ್ತಿದೆ.

ಪೊಲೀಸರ ತನಿಖೆಯ ನಂತರವಷ್ಟೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...