ಶಿವಮೊಗ್ಗ | ಅವೈಜ್ಞಾನಿಕ ವಾರ್ಡ್ ವಿಂಗಡಣೆ; ಸರಿಪಡಿಸುವಂತೆ ಜೆಡಿಎಸ್ ಆಗ್ರಹ

Date:

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಹೊಸದಾಗಿ ಸೃಷ್ಟಿಸಿರುವ ವಾರ್ಡ್‌ಗಳ ವಿಂಗಡಣೆ ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಕೂಡಲೇ ಪರಿಶೀಲಿಸಿ ಸರಿಪಡಿಸುವಂತೆ ಜೆಡಿಎಸ್‌ ಜಿಲ್ಲಾ ಘಟಕ ಆಗ್ರಹಿಸಿದೆ.

ಪಾಲಿಕೆ ಆಯುಕ್ತರ ಅಧಿಕೃತ ಜ್ಞಾಪನದಂತೆ ವಿಂಗಡಿಸಲಾಗಿರುವ ಹೊಸ ವಲಯ 01ರ ಕಚೇರಿ ನಗರದ ವಿನೋಬನಗರ ಪೊಲೀಸ್ ಚೌಕಿ ಬಳಿ ಇದ್ದು, ಹೊರಡಿಸಲಾಗಿರುವ ಹೊಸ ಆದೇಶದಂತೆ ಇದರ ವ್ಯಾಪ್ತಿಗೆ ವಾರ್ಡ್ ನಂ. 1, 2, 3, 4, 6, 7, 8, 9, 32, 33, 34 ಬರಲಿವೆ. ಸದರಿ ವಾರ್ಡುಗಳ ಪೈಕಿ 32, 33, ಹಾಗೂ 34 ಕ್ರಮವಾಗಿ ಟಿಪ್ಪು ನಗರ, ಸವಾಯಿ ಪಾಳ್ಯ ಹಾಗೂ ವಿದ್ಯಾನಗರ ದಕ್ಷಿಣ ಆಗಿದ್ದು, ಇವು ತುಂಗಾ ನದಿ ದಡದಲ್ಲಿರುವ ಪ್ರದೇಶಗಳಾಗಿವೆ.

ವಲಯ 1ರ ಕಚೇರಿ ವಿನೋಬನಗರದಿಂದ ಸುಮಾರು 5-6 ಕಿಮೀ ದೂರದಲ್ಲಿದೆ. ಹಾಗೆಯೇ ವಲಯ 03ರ ವ್ಯಾಪ್ತಿಗೆ ಬರುವಂತಹ ವಾರ್ಡ್ 12, 13, 14, 15, 16, 17, 18, 19, 23, 24, 25, 27, ಹಾಗೂ 28 ರ ಪೈಕಿ 18 ಮತ್ತು 19 ಕ್ರಮವಾಗಿ ವಿನೋಬನಗರ ದಕ್ಷಿಣ ಹಾಗೂ ಶರಾವತಿ ನಗರ ಆಗಿರುತ್ತದೆ. ವಲಯ 03 ರ ಕಚೇರಿ ಇರುವ ಪ್ರದೇಶಕ್ಕೂ ವಿನೋಬನಗರ ವಾರ್ಡ್ 18 ಹಾಗೂ ಶರಾವತಿ ನಗರ ವಾರ್ಡ್ 19ಕ್ಕೂ ಸುಮಾರು 5-6 ಕಿಮಿ ದೂರವಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದುವರೆದು ವಿನೋಬನಗರದಲ್ಲೇ ಇರುವ ವಲಯ 01 ರ ಕಚೇರಿ ವ್ಯಾಪ್ತಿಗೆ ಬರುವ ವಾರ್ಡ್ 18 ವಿನೋಬನಗರ ದಕ್ಷಿಣ ಹಾಗೂ ವಾರ್ಡ್ 19 ಶರಾವತಿ ನಗರ ಪ್ರದೇಶಗಳನ್ನು ವಲಯ 03ಕ್ಕೆ ಹಾಗೂ ವಲಯ 03 ರ ಕಚೇರಿ ವ್ಯಾಪ್ತಿಗೆ ಬರುವ ವಾರ್ಡ್ 32 ಟಿಪ್ಪು ನಗರ, ವಾರ್ಡ್ 33 ಸವಾಯಿ ಪಾಳ್ಯ ಹಾಗೂ ವಾರ್ಡ್ 34 ವಿದ್ಯಾನಗರ ದಕ್ಷಿಣ ಪ್ರದೇಶಗಳನ್ನು ವಲಯ 01ಕ್ಕೆ ಅದ್ಯಾವ ತಾಂತ್ರಿಕ ಕಾರಣಗಳಿಂದಾಗಿ ಸೇರಿಸಲಾಗಿದೆಯೋ ಗೊತ್ತಿಲ್ಲ. ಆದರೆ ಇದರಿಂದ ನಗರದ ನಾಗರಿಕರಿಗೆ ತೊಂದರೆ ಆಗುತ್ತಿದೆ ಎಂದು ಜೆಡಿಎಸ್ ಮುಖಂಡರು ಆರೋಪಿಸುತ್ತಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ಹೊಸ ವಲಯಗಳನ್ನು ಸೃಜಿಸುವಾಗ ಭೌಗೋಳಿಕವಾಗಿ ಶಿವಮೊಗ್ಗ ನಗರವನ್ನು ಪರಿಗಣಿಸಿ ಸಾರ್ವಜನಿಕ ಹಿತದೃಷ್ಟಿಯಲ್ಲಿ ಕ್ರಮಕೈಗೊಳ್ಳಬೇಕಿತ್ತು. ಆದರೆ ಹೊರಡಿಸಲಾಗಿರುವ ಪಾಲಿಕೆ ಅದೇಶದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಈ ಕುರಿತು ಯಾವುದೇ ಹಂತದಲ್ಲಿ ಚಿಂತನೆ ನಡೆಸಿರುವುದು ಕಂಡುಬಂದಿಲ್ಲ ಎಂದು ಅವರು ಆಕ್ಷೇಪಿಸಿದ್ದಾರೆ.

1001371075

ಇದೊಂದು ಅವೈಜ್ಞಾನಿಕ ಕ್ರಮವಾಗಿದ್ದು ಇದರಿಂದ ನಾಗರಿಕರಿಗೆ ಆಗುತ್ತಿರುವ ತೊಂದರೆಗಳನ್ನು ಸರಿಪಡಿಸಿ ವಿನೋಬನಗರ ವಾರ್ಡ್ 18 ಹಾಗೂ ಶರಾವತಿ ನಗರ ವಾರ್ಡ್ 19 ಗಳನ್ನು ವಲಯ 01 ರ ವ್ಯಾಪ್ತಿಗೆ ಹಾಗೂ ಟಿಪ್ಪು ನಗರ ವಾಡ್ 32, ಸವಾಯಿ ಪಾಳ್ಯ ವಾರ್ಡ್ 33 ಹಾಗೂ ವಿದ್ಯಾನಗರ ವಾರ್ಡ್ 34 ಇವುಗಳನ್ನು ವಲಯ 03 ರ ವ್ಯಾಪ್ತಿಗೆ ಸೇರಿಸಿ ಸಾರ್ವಜನಿಕ ಹಿತದೃಷ್ಟಿಯಲ್ಲಿ ಸರಿಪಡಿಸಿ ಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ/ಆದೇಶ ನೀಡಬೇಕು ಎಂದು ನಾಗರಿಕರ ಪರವಾಗಿ ಜೆಡಿಎಸ್‌ ವಿನಂತಿಸಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ದೀಪಕ್ ಸಿಂಗ್ ಇವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ.

ಇದನ್ನೂ ಓದಿ: ಶಿವಮೊಗ್ಗ | ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಈ ವೇಳೆ ಶಿವಮೊಗ್ಗ ನಗರದ ಮಾಜಿ ಶಾಸಕ ಕೆ ಬಿ ಪ್ರಸನ್ನ ಕುಮಾರ್, ಜೆಡಿಎಸ್ ಮುಖಂಡರಾದ ಉಮಾಶಂಕರ್ ಉಪಾಧ್ಯಯ, ಕೃಷ್ಣ, ವೆಂಕಟೇಶ್, ವಿಜಯ್ ಕುಮಾರ್, ನಗರ ಯುವ ಜೆಡಿಎಸ್ ಅಧ್ಯಕ್ಷ ಸಂಜಯ್ ಕಶ್ಯಪ್, ದಯಾನಂದ್ ಸಾಲಾಗಿ, ಮಾಧವ ಮೂರ್ತಿ, ಸಿದ್ದೇಶ್, ಗೋವಿಂದ ರಾಜ್, ಗೋಪಿ ಮೊದಲಿಯರ್, ನಿಹಾಲ್ ಖಾನ್, ನೀಲು, ರುದ್ರೇಶ್, ಮೂರ್ತಿ, ಪ್ರಪುಲ, ಚಂದ್ರಶೇಖರ್, ಚನ್ನು, ಬಸಪ್ಪ, ಪುಷ್ಪ, ಲಕ್ಷ್ಮಿ, ಸರಿತ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...