ಶಿವಮೊಗ್ಗ | ಜೆಡಿಎಸ್, ಬಿಜೆಪಿಯವರು ಪ್ರಜ್ವಲ್ ವಿಚಾರದಲ್ಲಿ ಯಾಕೆ ಸಂತ್ರಸ್ತರ ಮನೆಗೆ ಹೋಗುತ್ತಿಲ್ಲ? : ಮಧು ಬಂಗಾರಪ್ಪ

Date:

ಶಿವಮೊಗ್ಗ, ಸಂಸದ ಬಿ ವೈ ರಾಘವೇಂದ್ರ ಕೊಳೆ ರೋಗದ ಬಗ್ಗೆ ಸಂಸತ್‌ನಲ್ಲಿ ಮಾತನಾಡುವುದಿಲ್ಲ. ಅರಣ್ಯ ಇಲಾಖೆಯ ಬಗ್ಗೆ ಮಾತನಾಡುವುದಿಲ್ಲ. ರಾಜ್ಯಕ್ಕೆ ಬರಬೇಕಾದ ತೆರಿಗೆ ಬಗ್ಗೆ ಮಾತನಾಡುವುದಿಲ್ಲ. ದೆಹಲಿಗೆ ಹೋಗಿ ಮಂತ್ರಿಗಳ ಬಳಿ ಫೋಟೋ ತೆಗೆಸಿಕೊಂಡು ಬರುತ್ತಿದ್ದಾರೆ.

ರಾಹುಲ್ ಗಾಂಧಿ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ ಎಂದು ಸಚಿವ ಮಧು ಬಂಗಾರಪ್ಪ ಸಂಸದರ ಬಗ್ಗೆ ಕಿಡಿಕಾರಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಂಸದ ರಾಘವೇಂದ್ರ ವಿರುದ್ಧ ಕಿಡಿ ಆದರು. ಸಂಸದರು ಖೇಲೋ ಇಂಡಿಯಾ ಅಂತ ಹಾಕಿಕೊಂಡಿದ್ದಾರೆ. ಕೇಂದ್ರ ಸರ್ಕಾರದವರು ಬೇಟಿ ಬಚಾವೋ ಬೇಟಿ ಪಡಾವೋ ಎಂಬ ಯೋಜನೆ ಮಾಡಿದ್ದಾರೆ. ಅವರು ಜನರನ್ನು ಮಂಗ ಮಾಡುತ್ತಿದ್ದಾರೆ. ಭಾವನಾತ್ಮಕವಾಗಿ ಮಾತನಾಡುತ್ತಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ನನ್ನ ಬಗ್ಗೆ ಫೇಸ್ ಬುಕ್‌ನಲ್ಲಿ ತನ್ನ ಮತ್ತು ಸರಕಾರದ ಬಗ್ಗೆ ಕೆಟ್ಟದಾಗಿ ಬರೆದಿದ್ದರ ಬಗ್ಗೆ ಪ್ರಸ್ತಾಪಿಸಿ, ನನ್ನ ಇಲಾಖೆಯಲ್ಲಿ ಇಂದಿನ ಶಿಕ್ಷಕರ ಕೊರತೆಗೆ ಕಾರಣ ನಿಮ್ಮದೇ ಬಿಜೆಪಿ ಸರ್ಕಾರ. ನಿಮ್ಮ ಬಿಜೆಪಿಯಲ್ಲಿ ಎಷ್ಟು ಜನರನ್ನು ನೇಮಕ ಮಾಡಿಕೊಂಡಿದ್ದೀರಿ ಎಂಬುದನ್ನು ತಿಳಿಸಿ. ಬಿಜೆಪಿಯಲ್ಲಿ ೪,೫೦೦ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದಾರಷ್ಟೇ ಎಂದರಲ್ಲದೆ,. ಕೇಂದ್ರದ ಪಠ್ಯಕ್ರಮದಲ್ಲಿ ಆಪರೇಷನ್ ಸಿಂಧೂರ್ ಬಗ್ಗೆ ಪಾಠ ಇಟ್ಟಿದ್ದಾರೆ. ಅದನ್ನು ಬಿಟ್ಟು ಸಿಂಧೂರ್ ಘಟನೆ ಯಾಕೆ ನಡೆಯಿತು ಎಂದು ತಿಳಿಸಬೇಕಿದೆ ಎಂದರು.

ಶಿಕ್ಷಣ ಇಲಾಖೆಯಲ್ಲಿ ಶಿಕ್ಷಣದ ಕೊರತೆಯನ್ನು ಹೋಗಲಾಡಿಸಿ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ಅಡ್ಡಿಯಾಗದಂತೆ ತಕ್ಷಣದ ಕ್ರಮವಾಗಿ 13 ಸಾವಿರ ಶಿಕ್ಷಕರನ್ನು ನಿಯೋಜಿಸಲಾಗಿದೆ. ಶೀಘ್ರದಲ್ಲಿ 18500ಶಿಕ್ಷಕರ ನೇಮಕಾತಿಗೂ ಕ್ರಮಕೈಗೊಳ್ಳಲಾಗಿದೆ ಎಂದ ಅವರು, ಸರ್ವರಲ್ಲೂ ಸಮಾನತೆ ಕಾಣುವ ಹಿನ್ನೆಲೆಯಲ್ಲಿ ಕೈಗೊಳ್ಳಲಿರುವ ಜಾತಿಗಣತಿಯನ್ನು ಅಕ್ಟೋಬರ್ ಮಾಸಾಂತ್ಯದೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ.

ಧರ್ಮಸ್ಥಳ ವಿಚಾರ:

ಎಸ್‌ಐಟಿ ವರದಿ ಬಂದಿಲ್ಲ, ಆಗಲೇ ಬಿಜೆಪಿಯಿಂದ ಯಾತ್ರೆ ನಡೆದಿದೆ. ಬಿಜೆಪಿಯವರು ಧರ್ಮಸ್ಥಳದ ವಿಚಾರದಲ್ಲಿ ಆತುರವಾಗಿ ಮಾತನಾಡುತ್ತಿದ್ದಾರೆ. ಜೆಡಿಎಸ್ ಹಾಗೂ ಬಿಜೆಪಿಯವರು ಪ್ರಜ್ವಲ್ ವಿಚಾರದಲ್ಲಿ ಯಾಕೆ ಸಂತ್ರಸ್ತರ ಮನೆಗೆ ಹೋಗುತ್ತಿಲ್ಲ? ಎಂದು ಪ್ರಶ್ನಿಸಿದ ಅವರು, ಇಂದು ಧರ್ಮ ಎಂದವರು, ನಾಳೆ ಧರ್ಮವನ್ನೇ ಹಾಳು ಮಾಡುತ್ತಾರೆ.

ಹಿಂದೆ ಟ್ರಂಪ್ ಅಂತ ಹೋದವರು ಈಗ ಚೀನಾದ ಪರವಾಗಿ ಹೋಗುತ್ತಿದ್ದಾರೆ. ಮತ ಕಳವು ಮೂಲಕ ಬಿಜೆಪಿಯವರು ಪ್ರಜಾಪ್ರಭುತ್ವವನ್ನು ಕೊಲೆ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಪತ್ರಿಕಾಗೋಷ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು, ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ಮುಖಂಡರಾದ ಶ್ರೀನಿವಾಸ ಕರಿಯಣ್ಣ, ಕಲಗೋಡು ರತ್ನಾಕರ, ಖಲೀಂವುಲ್ಲಾ, ದೇವಿಕುಮಾರ್, ರಮೇಶ್ ಶೆಟ್ಟಿ , ಶೇಷಾದ್ರಿ, ರಮೇಶ್ ಹೆಗ್ಡೆ, ಜಿ ಡಿ ಮಂಜುನಾಥ, ಶರತ್ ಮರಿಯಪ್ಪ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...