ಶಿವಮೊಗ್ಗ | ಕಾಡುಹಂದಿ ದಾಳಿ ; ಪ್ರಾಣಾಪಾಯದಿಂದ ಪಾರಾದ ರೈತ

Date:

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಬಾರಂಗಿ ಹೋಬಳಿ ಕಾನೂರು ಗ್ರಾಮದ ರೈತ ರಾಮಪ್ಪ ಜಟ್ಟನಾಯ್ಕ (60) ಅವರ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಯ ತೀವ್ರತೆಯ ನಡುವೆಯೂ ಅವರು ಪ್ರಾಣಾಪಾಯದಿಂದ ಪಾರಾಗಿರುವುದು ಅಚ್ಚರಿಯ ಸಂಗತಿಯಾಗಿ ಪರಿಣಮಿಸಿದೆ.

ದುರ್ಗಮ ಪ್ರದೇಶವಾದ ಕಾನೂರು ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಕಾಡುಹಂದಿಯ ಹರಿತವಾದ ಕೋರೆಗಳಿಂದ ಹೊಟ್ಟೆ ಭಾಗದಲ್ಲಿ ಗಂಭೀರ ಗಾಯಗೊಂಡ ರಾಮಪ್ಪ ಜಟ್ಟನಾಯ್ಕ ಅವರು ಸ್ಥಳದಲ್ಲೇ ಕುಸಿದು ಬಿದ್ದರು.

ತಕ್ಷಣವೇ ಸ್ಥಳೀಯರು ಅವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಿದ್ದು, ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಗಾಯಗಳ ಗಂಭೀರತೆಯನ್ನು ಗಮನಿಸಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕ (ICU) ಗೆ ಸ್ಥಳಾಂತರಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...