ಶಿವಮೊಗ್ಗ | ಮಹಿಳೆಗೆ 7.20 ಲಕ್ಷ ರೂ ಸೈಬರ್ ವಂಚನೆ

Date:

ಶಿವಮೊಗ್ಗ, ಸುಲಭವಾಗಿ ಹಣ ಗಳಿಸುವ ಆಮಿಷವೊಡ್ಡಿ, ಟೆಲಿಗ್ರಾಂ ಮೂಲಕ ಪರಿಚಯವಾದ ಅಪರಿಚಿತ ವ್ಯಕ್ತಿಗಳ ಗುಂಪೊಂದು ನಗರದ ಮಹಿಳೆಯೊಬ್ಬರಿಂದ ಬರೋಬ್ಬರಿ 7,20,735.70 ಹಣವನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

ಶಿವಮೊಗ್ಗದ ಮಹಿಳೆಯೊಬ್ಬರಿಗೆ ಟೆಲಿಗ್ರಾಂನಲ್ಲಿ ಅಪರಿಚಿತ ವ್ಯಕ್ತಿಗಳು ಸಂದೇಶ ಕಳುಹಿಸಿದ್ದು, ನಾವು ಅಮೇಜಾನ್​ ನಂತಹ ಪ್ರಸಿದ್ಧ ಕಂಪನಿಗಳೊಂದಿಗೆ ಸಹಭಾಗಿತ್ವ ಹೊಂದಿದ್ದು, ಪ್ರೀಪೇಯ್ಡ್ ಟಾಸ್ಕ್‌ಗಳನ್ನು ಪೂರ್ಣಗೊಳಿಸಿದರೆ ಶೇ. 30ರಷ್ಟು ಲಾಭಾಂಶ ನೀಡುವುದಾಗಿ ಆಮಿಷವೊಡ್ಡಿದ್ದರು.

ಇದನ್ನು ನಂಬಿದ ಮಹಿಳೆ ಮೊದಲಿಗೆ ವಂಚಕರು ಹೇಳಿದ ಯುಪಿಐ ಐಡಿಗಳಿಗೆ ಸ್ವಲ್ಪ ಹಣ ಹಾಕಿದ ನಂತರ, ಟಾಸ್ಕ್ ಪೂರ್ಣಗೊಳಿಸಿದ್ದಕ್ಕೆ ಲಾಭಾಂಶದ ಹಣವನ್ನು ವಂಚನೆಗೊಳಗಾದವರ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದರು. ಈ ಮೂಲಕ ವಿಶ್ವಾಸಗಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ಅಪರಿಚಿತರು ಒಂದು ಲಿಂಕ್ ಕಳುಹಿಸಿ, ಅದನ್ನು ಕ್ಲಿಕ್ ಮಾಡಿದಾಗ ಹೆಚ್ಚಿನ ಲಾಭಾಂಶದ ಹಣ ಕಾಣುವಂತೆ ಮಾಡಿದ್ದಾರೆ. ಇದನ್ನು ನಂಬಿದ ಮಹಿಳೆ ಹೆಚ್ಚು ಲಾಭದ ಆಸೆಯಿಂದ ಹಂತ ಹಂತವಾಗಿ ಅವರು ನೀಡಿದ ವಿವಿಧ ಯುಪಿಐ ಐಡಿಗಳು ಹಾಗೂ ಬ್ಯಾಂಕ್ ಖಾತೆಗಳಿಗೆ ಹಣವನ್ನು ವರ್ಗಾಯಿಸಿದ್ದಾರೆ. ವಂಚನೆಗೆ ಒಳಗಾದವರು ತಮ್ಮ ಹಣವನ್ನು ವಾಪಸ್ ಕೇಳಿದಾಗ, ವಂಚಕರು ನಿಮ್ಮ ಟ್ರೇಡಿಂಗ್ ಖಾತೆಯ ಸಿಬಿಲ್ ಸ್ಕೋರ್ ಕಡಿಮೆಯಾಗಿದೆ’ ಅಥವಾ ‘ಟಾಸ್ಕ್‌ನಲ್ಲಿ ತಪ್ಪು ಆಗಿದೆ’ ಎಂದು ಸಬೂಬು ಹೇಳಿ ಮತ್ತೆ ಹಣ ಹಾಕುವಂತೆ ಮಾಡಿದ್ದಾರೆ. ಕೊನೆಗೆ ಮಹಿಳೆಯ ಬಳಿ ಇದ್ದ ಸಂಪೂರ್ಣ ಹಣ ಖಾಲಿಯಾದಾಗ, ತಾನು ಮೋಸ ಹೋಗಿರುವುದು ಅರಿವಾಗಿದೆ.

ಕೂಡಲೇ ಸ್ನೇಹಿತರು ಹಾಗೂ ಸಂಬಂಧಿಕರೊಂದಿಗೆ ಚರ್ಚಿಸಿ, ಹಣ ವಾಪಸ್ ಬರುವ ನಿರೀಕ್ಷೆಯಲ್ಲಿ ಸ್ವಲ್ಪ ದಿನ ಕಾದು, ತಡವಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.

ಅಪರಿಚಿತ ವ್ಯಕ್ತಿಗಳ ಗುಂಪು ಟೆಲಿಗ್ರಾಂ ಗ್ರೂಪ್‌ಗಳಿಗೆ ಸೇರಿಸುವ ಮೂಲಕ ಮತ್ತು ಟ್ರೇಡಿಂಗ್ ಎಂದು ನಂಬಿಸಿ ಒಟ್ಟು 7,20,735.70 ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಎಂದು ಆರೋಪಿಸಿ ಮಹಿಳೆ ಶಿವಮೊಗ್ಗದ ಸಿ ಇ ಎನ್​ ಕ್ರೈಂ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...