ಶಿವಮೊಗ್ಗ | ಉಚಿತ ಸೋಲಾರ್ ಪಂಪ್‌ಸೆಟ್‌ ನೀಡಲು ಕೇಂದ್ರದ ಅನುದಾನಕ್ಕೆ ಎಎಪಿ ಆಗ್ರಹ

Date:

ರಾಜ್ಯದ ರೈತರಿಗೆ ಉಚಿತ ಸೋಲಾರ್ ಪಂಪ್‌ಸೆಟ್‌ ವಿತರಣೆ ಮಾಡಲು ರಾಜ್ಯ ಸರ್ಕಾರ ಭರಿಸುತ್ತಿರುವಷ್ಟೇ ಮೊತ್ತವನ್ನು ಕೇಂದ್ರವೂ ಹಣ ಬಿಡುಗಡೆ ಮಾಡಬೇಕು ಎಂದು ಆಮ್‌ ಆದ್ಮಿ ಪಕ್ಷ (ಎಎಪಿ) ಒತ್ತಾಯಿಸಿದೆ.

ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಎಎಪಿ ಜಿಲ್ಲಾಧ್ಯಕ್ಷ ಶಿವಕುಮಾರ್ ಗೌಡ, “ರಾಜ್ಯದಲ್ಲಿ ಒಟ್ಟು 34 ಲಕ್ಷ ಪಂಪ್‌ಸೆಟ್‌ಗಳಿದ್ದು, ಅವುಗಳಿಗೆ ಸೋಲಾರ್ ಅಳವಡಿಸಲು ಒಟ್ಟು 13,800 ಕೋಟಿ ರೂ. ಖರ್ಚಾಗುತ್ತದೆ ಎಂಬ ಅಂದಾಜಿದೆ. ರಾಜ್ಯ ಸರ್ಕಾರ ಪ್ರತಿವರ್ಷ 6,900 ಕೋಟಿ ರೂ. ಖರ್ಚು ಮಾಡುತ್ತಿದೆ. ಇನ್ನುಳಿದ 6,900 ಕೋಟಿ ರೂ. ಹಣವನ್ನು ಕೇಂದ್ರ ಸರ್ಕಾರ ಭರಿಸಬೇಕು. ರೈತರಿಗೆ ಸಂಪೂರ್ಣ ಉಚಿತವಾಗಿ ಸೋಲಾರ್ ಪಂಪ್‌ ವಿತರಣೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“ಇಂಧನ ಇಲಾಖೆಯಲ್ಲಿ ದೊಡ್ಡ ಮಟ್ಟದ ಹಗರಣ ನಡೆಯುತ್ತಿದೆ ಎನ್ನುವ ಅನುಮಾನ ಇದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಸಮ ಪ್ರಮಾಣದಲ್ಲಿ ಜಿಎಸ್‌ಟಿ ಪಡೆಯುತ್ತಿವೆ. ಅಂತೆಯೇ, ರಾಜ್ಯದ ಅಭಿವೃದ್ಧಿಗೂ ಕೂಡ ಎರಡೂ ಸರ್ಕಾರಗಳು ಸಮನಾಗಿ ಬಂಡವಾಳ ಹಾಕಬೇಕು. ಸೋಲಾರ್ ಪಂಪ್‌ಸೆಟ್‌ಗೆ ಶೇಕಡಾ 30ರಷ್ಟು ಸಹಾಯ ಧನ ನಾವು ಕೊಡುತ್ತೇವೆ. ಶೇಕಡಾ 50ರಷ್ಟು ಹಣವನ್ನು ರಾಜ್ಯ ಸರ್ಕಾರ ಭರಸಲಿ ಎಂದು ಕೇಂದ್ರ ಹೇಳುವುದು ಸರಿಯಲ್ಲ. ಹೀಗಾಗಿದರೆ, ಉಳಿದ ಹಣವನ್ನು ರೈತರೂ ಭರಸಬೇಕಾಗುತ್ತದೆ. ಇದು ನ್ಯಾಯಯುತವಲ್ಲ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2013-2014ರಲ್ಲಿ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿದ್ದಾಗ ಡಿಕೆ ಶಿವಕುಮಾರ್ ಇಂಧನ ಸಚಿವರಾಗಿದ್ದರು. ಆಗ ರಾಜ್ಯದ ರೈತರಿಗೆ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡಲು ಸಹಾಯ ಮಾಡುತ್ತೇವೆ. ರೈತರಿಗೆ 24 ಗಂಟೆ ವಿದ್ಯುತ್ ಸಿಗುವಂತೆ ಮಾಡುತ್ತೇವೆ ಎಂದಿfದರು. ಅವರು ಆ ಭರವಸೆ ನೀಡಿ 10 ವರ್ಷಗಳಾಗಿವೆ. ಆದರೆ ಈ ವರೆಗೂ ರಾಜ್ಯದಲ್ಲಿ ಎಷ್ಟು ರೈತರಿಗೆ ಸೋಲಾರ್ ಪಂಪ್ ವಿತರಿಸಿದ್ದಾರೆ ಎಂಬುದನ್ನು ವಿವರಿಸಲಿ” ಎಂಂದಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಎಎಪಿ ಜಿಲ್ಲಾ ಮಾಧ್ಯಮ ವಾಕ್ತರ ಸುರೇಶ್ ಕೌಟೆಕಾರ್, ಜಿಲ್ಲಾಧ್ಯಕ್ಷ ಶಿವಕುಮಾರ್ ಗೌಡ, ಜಿಲ್ಲಾ ಪ್ರಧಾನಾ ಕಾರ್ಯದರ್ಶಿ, ನಜೀರ್ ಅಹಮದ್ ಮತ್ತಿತರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...