ಶಿವಮೊಗ್ಗ | ಅಕ್ರಮ ಕಟ್ಟಡ ಜಾಗ ಮಂಜೂರಿ ಹಕ್ಕುಪತ್ರ ನಕಲಿ; ಎಎಪಿ ಆರೋಪ

Date:

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಇರುವ ಸರ್ಕಾರಿ ಜಾಗಗಳು, ಜಮೀನುಗಳು ಹಾಗೂ ಯಾರದ್ದೋ ಜಮೀನನ್ನು ಇನ್ನಾರಿಗೋ ಬರೆದುಕೊಡಲಾಗುತ್ತಿದೆ. ಹೊಸನಗರ ಕಂದಾಯ ಇಲಾಖೆಯ ಕೆಲವು ಸಿಬ್ಬಂದಿಗಳು ಅವ್ಯವಹಾರ ನಡೆಸುತ್ತಿದ್ದಾರೆ ಎಂದು ಎಎಪಿ ಆರೋಪಿಸಿದೆ.

ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಎಎಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಜೀರ್ ಅಹಮದ್, “ಹೊಸನಗರ ತಾಲೂಕು ಕಚೇರಿಯಲ್ಲಿ ಅನಧಿಕೃತವಾಗಿ ಕೆಲವು ಬ್ರೋಕರ್‌ಗಳು ಸಾರ್ವಜನಿಕರಿಂದ ಹಣ ಪಡೆದು ಕೆಲಸ ಮಾಡಿಸಿಕೊಡುತ್ತಿದ್ದಾರೆ. ಈ ಬಗ್ಗೆ ತಾಲೂಕು ದಂಢಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ, ಅವರು ಉಡಾಪೆಯ ಉತ್ತರ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಹೊಸನಗರ ತಾಲೂಕಿನ ಕಸಬಾ ಹೋಬಳಿ ವರಕೋಡು ಗ್ರಾಮದ ಸರ್ವೆ ನಂಬರ್ 47ರಲ್ಲಿ 40*60 [2400 ಚದರ ಅಡಿ] ಅಳತೆಯ ಅಕ್ರಮ ಕಟ್ಟಡಕ್ಕೆ 15/11/2023ರಂದು ಮಂಜೂರಾತಿ ಹಕ್ಕುಪತ್ರ ನೀಡಲಾಗಿದೆ. ಆದರೆ, ಹಕ್ಕುಪತ್ರದಲ್ಲಿ 27/09/2002 ದಿನಾಂಕ ಹಾಕಲಾಗಿದೆ. ಇದಕ್ಕೆ ಸಂಬಂಧಿಸಿದ ಸರ್ವೆ ಇಲಾಖೆಯ ಜಿಪಿಎಸ್ ಸರ್ವೆ ಹಾಗೂ ಅರ್ಜಿಗಳ ಸೀರಿಯಲ್ ನಂಬರುಗಳು ಹಾಗೂ ಎಸ್‌ಬಿಐ ಚಲನ್ ಸಂಖ್ಯೆ ಕೂಡ ದೊರೆತಿವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂತಹ ಪ್ರಕರಣಗಳು ಕಳೆದ 2 ವರ್ಷದಿಂದ ಬಂದಿವೆ. ಹಲವಾರು ಸಂತ್ರಸ್ತರು ನಮ್ಮ ಗಮನಕ್ಕೆ ತಂದಿದ್ದಾರೆ. ಆದರೆ, ಅಧಿಕೃತ ದಾಖಲಾತಿಗಳು ನಮಗೆ ಲಭ್ಯವಾಗಿರಲಿಲ್ಲ. ಈಗ ನಮಗೆ ದಾಖಲೆಗಳು ಲಭ್ಯವಾಗಿವೆ. ಆರ್.ಟಿ.ಐ ಮುಖೇನ ಮುಖ್ಯ ದಾಖಲೆಗಳನ್ನು ಪಡೆದು ಪರಿಶೀಲಿಸಿದ್ದೇವೆ. ನಕಲಿ ದಾಖಲೆಗಳು ಪತ್ತೆಯಾಗಿವೆ” ಎಂದು ತಿಳಿಸಿದ್ದಾರೆ.

“ನಕಲಿ ಖಾತೆಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದೇವೆ. ಅಕ್ರಮದ ವಿರುದ್ಧ ಕಂದಾಯ ಮಂತ್ರಿಗಳು ಹಾಗೂ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶಿವಕುಮಾ‌ರ್ ಗೌಡ, ಸುರೇಶ್ ಕೌಟೇಕರ್, ಗಣೇಶ್ ಸೋಗೋಡು, ಹಸನಬ್ಬ, ಈಶ್ವರಪ್ಪ ಗೌಡ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...