ಶಿವಮೊಗ್ಗ | ಅನಂತಕುಮಾರ್ ಹೆಗಡೆ ಪ್ರತಿಕೃತಿ ದಹಿಸಿ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಏಕವಚನ ಪ್ರಯೋಗ ಮತ್ತು ಅವಹೇಳನಕಾರಿ ಹೇಳಿಕೆ ನೀಡಿದ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಖಂಡಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಶಿವಮೊಗ್ಗದ ಕಾಂಗ್ರೆಸ್‌ ಭವನದಿಂದ ಮಹಾವೀರ ವೃತ್ತವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ಮಹಾವೀರ ವೃತ್ತದಲ್ಲಿ ಅನಂತಕುಮಾರ್ ಹೆಗಡೆ ಪ್ರತಿಕೃತಿ ದಹಿಸುವಮೂಲಕ ಪ್ರತಿಭಟನೆ ನಡೆಸಿತು.

ಈ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್‌, ಬಿಜೆಪಿಯವರು ಎಲೆಕ್ಷನ್ ಸನಿಹ ಇದ್ದಾಗ ಮಾನಸಿಕ ಸ್ತೀಮಿತ ಕಳೆದುಕೊಳ್ಳುತ್ತಾರೆ. ಹಾಗೇ ಸಂಸದ ಅನಂತಕುಮಾರ್, 4ವರ್ಷಗಳಿಂದ ಇಲ್ಲದವರು ಇವಾಗ ಮುಖ್ಯಮಂತ್ರಿಗಳ ವಿರುದ್ಧ ಏಕವಚನದಲ್ಲಿ ಅವಹೇಳನಕರಿಯಾಗಿ ಮಾತನಾಡಿದ್ದಾರೆ. ಇವರನ್ನು ಬಂಧಿಸಬೇಕು ಎಂದರು.

ಸಂಸದ ಅನಂತ ಕುಮಾರ್‌ ಹೆಗಡೆ, ಮುಖ್ಯಮಂತ್ರಿ ಸಿದ್ದರಾಮಯ್ಯ‌ರವರ ವಿರುದ್ಧ ಏಕ ವಚನ ಬಳಸಿ ಗೊಂದಲ ಸೃಷ್ಠಿಸಲು ಯತ್ನಿಸಿದ್ದಾರೆ. ಕೋಮು ಗಲಭೆ ಸೃಷ್ಠಿಸಿ ಬೆಂಕಿ ಹಚ್ಚುವ ಪ್ರಯತ್ನ ನಡೆದಿದೆ ಎಂದು ದೂರಿದ ಅವರು, ನಾವೆಲ್ಲರೂ ರಾಮನ ಭಕ್ತರು. ಬಿಜೆಪಿ ರೀತಿ ಡೋಂಗಿ ಭಕ್ತರಲ್ಲ ಎಂದು ಗರಂ ಆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾವೆಲ್ಲರೂ ರಾಮನ ಪೂಜಿಸುತ್ತೇವೆ. ಬಿಜೆಪಿಯವರು ರಾಮ ಮಂದಿರ ವಿಚಾರದಲ್ಲಿ ರಾಜಕೀಯ ಮಾಡೋದು ಬಿಡಬೇಕು ಮತ್ತು ರಾಜೀವ್ ಗಾಂಧಿ ಕಾಲದಲ್ಲಿ ಅಯೋಧ್ಯ ರಾಮ ಮಂದಿರ ತೆರೆಸಿದ್ದು ಕಾಂಗ್ರೆಸ್ ಪಕ್ಷ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ವಾಕ್ತರರಾದ ರಮೇಶ್ ಹೆಗಡೆ, ಕಲೀಮ್ ಪಾಶ, ಸೌಗಂಧಿಕಾ ರಘುನಾಥ್, ಚೇತನ್, ರಮೇಶ್, ಚಂದ್ರಭೂಪಲ, ಕಾಶಿ ವಿಶ್ವನಾಥ್, ಕೆ.ರಂಗನಾಥ್, ಗಿರೀಶ್ ಇನ್ನು ಮುಂತಾದವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...