ಶಿವಮೊಗ್ಗ | ಬಿಜೆಪಿ ನಾಯಕರು ಹೋಗಿರುವುದು ಸತ್ಯಶೋಧನೆಗಲ್ಲ, ಕಡ್ಡಿ ಗೀರಲು: ಕಾಂಗ್ರೆಸ್

Date:

ಇತ್ತೀಚೆಗೆ ಶಿವಮೊಗ್ಗದಲ್ಲಿ ಮಿಲಾದುನ್ನಬಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಮತ್ತು ಘರ್ಷಣೆ ಘಟನೆಯು ರಾಜಕೀಯ ಆಯಾಮದಲ್ಲಿ ಚರ್ಚೆಯಾಗುತ್ತಿದೆ. ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್‌ ಕಿಡಿಕಾರುತ್ತಿದ್ದರೆ, ಘಟನೆ ಸಂಬಂಧ ಬಿಜೆಪಿ ಕೋಮು ದ್ವೇಷ ಹರಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ನಡುವೆ ಬಿಜೆಪಿ ನಾಯಕರು ಸತ್ಯಶೋಧನೆಗಾಗಿ ಶಿವಮೊಗ್ಗಗೆ ಗುರುವಾರ ಭೇಟಿ ನೀಡಿದ್ದಾರೆ. ಬಿಜೆಪಿ ನಾಯಕರ ಹೋಗಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್, “ಬಿಜೆಪಿ ನಾಯಕರು ಹೋಗಿರುವುದು ಸತ್ಯಶೋಧನೆಗಲ್ಲ, ಮತ್ತೊಂದು ಕಡ್ಡಿ ಗೀರಲು” ಎಂದು ಹೇಳಿದೆ.

ಬಿಜೆಪಿಗರ ಸತ್ಯಶೋಧನೆ ಬಗ್ಗೆ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, “ಶಾಂತ ಸ್ಥಿತಿಗೆ ಬಂದಿರುವ ಶಿವಮೊಗ್ಗಕ್ಕೆ ಬಿಜೆಪಿ ನಾಯಕರು ಹೋಗಿರುವುದು ಸತ್ಯ ಶೋಧನೆಗಲ್ಲ ಮತ್ತೊಮ್ಮೆ ಬೆಂಕಿ ಕಡ್ಡಿ ಗೀರಲುʼʼ ಎಂದು ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼʼಸತ್ಯ ಶೋಧನೆ ಮಾಡುವುದಕ್ಕೆ ಪೊಲೀಸರಿದ್ದಾರೆ. ಕಾನೂನಿದೆ. ಬಿಜೆಪಿಯವರ ಅಗತ್ಯವಿಲ್ಲ. ಬಿಜೆಪಿ ಯಾವ ತನಿಖಾ ಏಜೆನ್ಸಿಯೂ ಅಲ್ಲʼʼ ಎಂದು ಹೇಳಿದೆ.

ʼʼಪರಿಸ್ಥಿತಿಯನ್ನು ಹದಗೆಡಿಸಲು ಹೊಂಚು ಹಾಕಿರುವ ಬಿಜೆಪಿಗರ ಸಂಚನ್ನು ಯಶಸ್ವಿಯಾಗಲು ನಮ್ಮ ಸರ್ಕಾರ ಬಿಡುವುದಿಲ್ಲʼʼ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.

 

ನಳಿನ್ ಕುಮಾರ್ ಅವರ ನೇತೃತ್ವದಲ್ಲಿ ಸತ್ಯಶೋಧನಾ ತಂಡ ಶಿವಮೊಗ್ಗಗೆ ತೆರಳಿದೆ. ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳನ್ನು ಭೇಟಿ ಮಾಡಿ, ಮಾತನಾಡಿಸಿದೆ. ತಂಡದಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಮಾಜಿ ಸಚಿವ ಅಶ್ವತ್ ನಾರಾಯಣ್, ರವಿಕುಮಾರ್, ಕೆ.ಎಸ್ ಈಶ್ವರಪ್ಪ, ಸಂಸದ ರಾಘವೇಂದ್ರ ಸೇರಿದಂತೆ ಹಲವರು ಇದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...