ಶಿವಮೊಗ್ಗ | ಅಡುಗೆ ಸಹಾಯಕಿಗೆ ಜಾತಿ ನಿಂದನೆ; ಪ್ರಕರಣ ದಾಖಲಿಸಿದರೂ ಕ್ರಮ ಕೈಗೊಳ್ಳದ ಪೊಲೀಸ್‌ ಇಲಾಖೆ; ಆರೋಪ

Date:

ಅಡುಗೆ ಸಹಾಯಕಿಗೆ ಜಾತಿ ನಿಂದನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಶಾಲಾಭಿವೃದ್ಧಿ ಸಮಿತಿಯವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಚಿಕ್ಕಗೊಪ್ಪೇನಹಳ್ಳಿ ಗ್ರಾಮಸ್ಥರು ಮತ್ತು ಸಂತ್ರಸ್ಥೆಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯ ಭದ್ರಾವತಿ ಡಿವೈಎಸ್‌ಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದು, “ಗ್ರಾಮದ ಎ ಕೆ ಕಾಲೋನಿ ನಿವಾಸಿ ರೂಪಾ, ಅಕ್ಷರ ದಾಸೋಹ ಮಾರ್ಗಸೂಚಿ ಅನ್ವಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಡುಗೆ ಸಹಾಯಕಿಯಾಗಿ ನೇಮಕವಾಗಿದ್ದಾರೆ. ಶಾಲಾಭಿವೃದ್ಧಿ ಸಮಿತಿಯವರು ರೂಪಾ ಅವರಿಗೆ ಬೆದರಿಕೆ ಒಡ್ಡಿ, ಜಾತಿ ನಿಂದನೆ ಮಾಡಿದ್ದಾರೆ. ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಸುರೇಶ್ ಈ ದಿನ.ಕಾಮ್ ಜೊತೆ ಮಾತನಾಡಿ, “ನಾವು ಎರಡು ವಿಷಯವನ್ನು ಇಟ್ಟುಕೊಂಡು ಪ್ರತಿಭಟನೆ ಮಾಡುತ್ತಿದ್ದೇವೆ. ಇತ್ತೀಚೆಗೆ ಖ್ಯಾತ ಬಹುಬಾಷಾ ನಟ ಪ್ರಕಾಶ್ ರಾಜ್ ಅವರು ಸಂವಾದ ಕಾರ್ಯಕ್ರಮ ನಡೆಸಿದ್ದು, ಅವರು ಕಾರ್ಯಕ್ರಮ ಮುಗಿಸಿ ಹೋದ ಬಳಿಕ ಕೆಲವರು ಕಾರ್ಯಕ್ರಮ ನಡೆದ ಸ್ಥಳದಲ್ಲಿ ಗಂಜಲ ಹಾಕಿ ತೊಳೆದು ಅವಮಾನ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಸು ದಾಖಲು ಮಾಡಿದ್ದರೂ ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಗರದ ಎ ಕೆ ಕಾಲೋನಿಯ ಶಾಲೆಯಲ್ಲಿ ಬಿಸಿಯೂಟದ ಸಹಾಯಕಿಯಾಗಿ ಎಸ್ ಸಿ(ಮಾದಿಗ) ಸಮುದಾಯಕ್ಕೆ ಸೇರಿದ ಮಹಿಳೆ ಕೆಲಸಕ್ಕೆ ನೇಮಕವಾಗಿದ್ದು, ಆ ಮಹಿಳೆ ಅಡುಗೆ ಮಾಡಿದರೆ ಊಟ ಮಾಡುವುದಿಲ್ಲವೆಂದು ಜಾತಿ ನಿಂದನೆ ಮಾಡಿದ್ದಾರೆ. ಈ ಬಗ್ಗೆ ಈಗಾಗಲೇ ಶಾಲೆಯ ಎಸ್‌ಡಿಎಂಸಿಯ ಒಂಬತ್ತು ಮಂದಿ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯಿದೆ(ಅಟ್ರಾಸಿಟಿ) ಅಡಿ ಪ್ರಕರಣ ದಾಖಲು ಮಾಡಿದರೂ ಕೂಡ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಬೇಸರ ತಂದಿದೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಡಿವೈಎಸ್‌ಪಿ ನಾಗರಾಜ್‌, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಬಿಇಒ ಎ ಕೆ ನಾಗೇಂದ್ರಪ್ಪ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿದರು.

ಬಾಲಕೃಷ್ಣ, ಸುರೇಶ್‌, ಸುಧೀಂದ್ರ, ಮಂಜುನಾಥ್‌, ಚನ್ನಪ್ಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲೆನಾಡಿನ ಅಡಕೆ ಇಳುವರಿ ಕುಂಠಿತ: ಸಂಕಷ್ಟದಲ್ಲಿರುವ ಬೆಳೆಗಾರರ ಕೈ ಹಿಡಿಯುವುದೇ ಸರ್ಕಾರ?

ಮಲೆನಾಡು ರೈತರು ಶ್ರಮಜೀವಿಗಳು. ಅಡಕೆ ಅವರ ಜೀವನಾಧಾರ. ರೋಗ ನಿಯಂತ್ರಣಕ್ಕೆ ವೈಜ್ಞಾನಿಕ...

ಶಿವಮೊಗ್ಗ | ಜಿಲ್ಲಾಡಳಿತದಿಂದ ಉದ್ಯೋಗ ಮೇಳ; ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಆದ್ಯತೆ

2026 ಫೆಬ್ರವರಿ 27ರ ಶುಕ್ರವಾರ ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇಲಾಖೆಯ...

ಸಾಮಾನ್ಯರ ತರಹ ಕಾಣುವ ಅಸಾಮಾನ್ಯ ಕೋಣಂದೂರು ಲಿಂಗಪ್ಪ

ನಂಬಿದ ಸಿದ್ಧಾಂತದ ಬದುಕಿನೊಳಗೆ ಸರಳತೆಯನ್ನು ರೂಢಿಸಿಕೊಳ್ಳಲು ಕೆಲವರಿಗಷ್ಟೇ ಆಗುತ್ತದೆ. ಎಲ್ಲಾ ಮಾನವೀಯ...

ಶಿವಮೊಗ್ಗ | ಆಗುಂಬೆ ಸುರಂಗ ಯೋಜನೆ ವಿರೋಧಿಸಿಬ್ಯಾನರ್: ಸಾಮಾಜಿಕ ಜಾಲತಾಣದಲ್ಲಿ ಚರ್ಚೆ

"ಆಗುಂಬೆ ನರಕವಾಗಿಸುವ ಸುರಂಗ ಯೋಜನೆಗೆ ನಮ್ಮ ಧಿಕ್ಕಾರ, ಸಮಸ್ತ ಆಗುಂಬೆ ಗ್ರಾಮಸ್ಥರು"...