ಶಿವಮೊಗ್ಗ | ಅಕ್ರಮ ದಂದೆ ಮಾಹಿತಿ ಗೊತ್ತಿದ್ದರೆ ತಿಳಿಸಿ: ಎಸ್‌ಪಿ ಮಿಥುನ್ ಕುಮಾರ್

Date:

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನಲ್ಲಿ ಇಸ್ಪೀಟು, ಕ್ರಿಕೆಟ್ ಬೆಟ್ಟಿಂಗ್, ಒಸಿ, ಮಟ್ಕಾ ದಂಧೆ ಹೆಚ್ಚಿರುವ ಬಗ್ಗೆ ಎಸ್​.ಪಿ. ಮಿಥುನ್ ಕುಮಾರ್ ಪ್ರತಿಕ್ರಿಯಿಸಿದ್ದು, ಇಂತಹ ವಿಚಾರದಲ್ಲಿ ಯಾವುದೇ ಮುಲಾಜು ನೋಡದೇ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಜಿರೋ ಟಾಲರೆನ್ಸ್​ನಲ್ಲಿ ಇಂತಹ ಸಂಘಟಿತ ಅಪರಾಧಗಳನ್ನು ಭೇದಿಸಲಾಗುವುದು. ಅಲ್ಲದೆ, ಈ ಬಗ್ಗೆ ಸಾರ್ವಜನಿಕರು ಪೊಲೀಸ್ ಇಲಾಖೆಗೆ ಮಾಹಿತಿ ಇದ್ದರೇ ನೀಡಿ ಎಂದಿದ್ದಾರೆ.

ಇನ್ನೂ ನಿನ್ನೆ ನಡೆದ ಹಲ್ಲೆಯ ಘಟನೆಗೆ ಸಂಬಂಧಿಸಿದಂತೆ, ಗೋಕುಲ್ ಕೃಷ್ಣ ನೀಡಿದ ಹೇಳಿಕೆ ಆಧರಿಸಿ, ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದ್ದು, ಈ ಸಂಬಂಧ ತನಿಖೆ ನಡೆಸಲಾಗುತ್ತದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಶಿವಮೊಗ್ಗದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಭದ್ರಾವತಿಯಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದಿದ್ದಾರೆ. ಬಿಜೆಪಿ ಕಾರ್ಯಕರ್ತನ ಕಾರು ಒಡೆದ ಪ್ರಕರಣದಲ್ಲಿ ಮೂವರನ್ನ ಅರೆಸ್ಟ್ ಮಾಡಲಾಗಿದೆ. ಈ ಘಟನೆ ಕಾರಣ ತಿಳಿದುಬಂದಿಲ್ಲ. ಕೇಸ್‌ ವಿಚಾರಣಾ ಹಂತದಲ್ಲಿದೆ. ತನಿಖೆ ಬಳಿಕ ಮಾಹಿತಿ ನೀಡಲಾಗುವುದು ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...