ಶಿವಮೊಗ್ಗ | ಪಂಜಿನ ಮೆರವಣಿಗೆ ಮೂಲಕ ಯುವನಿಧಿ ಕಾರ್ಯಕ್ರಮಕ್ಕೆ ಚಾಲನೆ

Date:

ಪಂಜಿನ ಮೆರವಣಿಗೆ ಮೂಲಕ ಶಿವಮೊಗ್ಗದಲ್ಲಿ ಯುವನಿಧಿ ಕಾರ್ಯಕ್ರಮಕ್ಕೆ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಮತ್ತು ಶಿವಮೊಗ್ಗ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಐದನೇ ಗ್ಯಾರಂಟಿ ಯುವನಿಧಿ ಯೋಜನೆ ಕಾರ್ಯಕ್ರಮ ಅನುಷ್ಠಾನ ಹಿನ್ನೆಲೆಯಲ್ಲಿ ಜಿಲ್ಲಾ ಎನ್‌ಎಸ್‌ಯುಐ ಘಟಕ ಯುವ ಜ್ಯೋತಿ ಜಾಥಾ ನಡೆಸಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ‌ ನೇತೃತ್ವದ ಕಾಂಗ್ರೆಸ್ ಸರ್ಕಾರ, ಎಲ್ಲ ವರ್ಗದ ಜನರಿಗೂ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಉದ್ಯೋಗ ಅರಸುತ್ತಿರುವ ಯುವ ಜನರಿಗೆ ಆರ್ಥಿಕ ನೆರವು ನೀಡಲು ಯುವ ನಿಧಿ ಯೋಜನೆ ಜಾರಿಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪದವಿ ಮತ್ತು ಡಿಪ್ಲೊಮಾ ಪೂರ್ಣಗೊಳಿಸಿ‌ ಕೆಲಸ‌ ಹುಡುಕುತ್ತಿರುವ ಯುವಜನತೆ ಸರ್ಕಾರದ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ಯುವ ಜನರಿಗಾಗಿ‌ ಸರ್ಕಾರ ಯೋಜನೆ ಜಾರಿಗೊಳಿಸಿದ್ದು, ಅರ್ಹ ವಿದ್ಯಾರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿ‌ ಸಲ್ಲಿಸಿ ಪ್ರಯೋಜನೆಯ ಪ್ರಯೋಜನ ಪಡೆಯಬೇಕು ಎಂದು ಎನ್‌ಎಸ್‌ಯುಐ ಪದಾಧಿಕಾರಿಗಳು ಹೇಳಿದರು.

ಈ ವೇಳೆ ಮಾತನಾಡಿದ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ‌ಯುವನಿಧಿ ಯೋಜನೆ ಕುರಿತು ಜಾಗೃತಿ ಮೂಡಿಸುವ ಆಶಯದಿಂದ ಶಿವಮೊಗ್ಗ ಜಿಲ್ಲಾ‌ ಎನ್‌ಎಸ್‌ಯುಐ ಘಟಕ ಯುವ ಜ್ಯೋತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲಾ ಮಟ್ಟದಲ್ಲಿ ಎನ್‌ಎಸ್‌ಯುಐ ಉತ್ತಮ‌‌ ಕೆಲಸ‌ ಮಾಡುತ್ತಿರುವುದು ಶ್ಲಾಘನೀಯ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ‌ ಮಧು ಬಂಗಾರಪ್ಪ ಮಾತನಾಡಿ, ಸಿಎಂ ಸಿದ್ದರಾಮಯ್ಯ ಜನವರಿ‌ 12ರಂದು‌ ಶಿವಮೊಗ್ಗ ಕಾರ್ಯಕ್ರಮದಲ್ಲಿ ಯುವನಿಧಿ‌ ಯೋಜನೆಗೆ ಚಾಲನೆ ನೀಡಲಿದ್ದು, ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳು ಹಾಗೂ ಪದವಿ ವಿದ್ಯಾರ್ಥಿಗಳು ಯೋಜನೆಯ ಅನುಷ್ಠಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ಯುವ ಜ್ಯೋತಿ ಜಾಥಾವು ಶಿವಮೊಗ್ಗ ನಗರದ ಜೈಲ್ ವೃತ್ತದಿಂದ ಟಿ.ಸೀನಪ್ಪ ಶೆಟ್ಟಿ (ಗೋಪಿ ವೃತ್ತ) ವೃತ್ತದವರೆಗೂ ಸಾಗಿತು. ನೂರಾರು ಎನ್‌ಎಸ್‌ಯುಐ ಕಾರ್ಯಕರ್ತರು ಜಾಥಾದಲ್ಲಿ ಪಾಲ್ಗೊಂಡಿದ್ದರು. ಯುವ ನಿಧಿ ಯುವಕರ ಆಶಾನಿಧಿ ಸೇರಿದಂತೆ ವಿವಿಧ ಘೋಷಣೆಗಳನ್ನು ಪ್ರದರ್ಶಿಸಲಾಯಿತು.

ಕಾಂಗ್ರೆಸ್ ಮುಖಂಡ ರಮೇಶ್ ಹೆಗ್ಡೆ, ಎಚ್.ಸಿ. ಯೋಗೀಶ್, ಆರ್. ಪ್ರಸನ್ನಕುಮಾರ್, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ್,‌ ಮಧುಸೂದನ್, ಕೆ.ಚೇತನ್, ಚರಣ್, ಹರ್ಷಿತ್, ರವಿ ಕಾಟಿಕೇರೆ, ಕಲೀಂ ಪಾಷಾ, ದೇವೆಂದ್ರಪ್ಪ, ಸಂತೆಕುಡೂರು ವಿಜಯ್, ಧೀರಜ್, ರಂಗೇ ಗೌಡರು, ಗಿರೀಶ್ ಮತ್ತಿತರರು ಜಾಥಾದಲ್ಲಿ ಹೆಜ್ಜೆ ಹಾಕಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...