ಶಿವಮೊಗ್ಗ | ಮಲೆನಾಡು ಕರಾವಳಿ ಜನಪರ ಒಕ್ಕೂಟ ಆಯೋಜಿಸಿದ್ದ ಎರಡು ದಿನಗಳ ಶಿಬಿರ ಯಶಸ್ವಿ

Date:

ನಮ್ಮ ರಾಜಕೀಯ ಮತ್ತು ಸಾಮಾಜಿಕ ಜೀವನದಲ್ಲಿ ಗಾಢವಾದ ವೈಚಾರಿಕ ಮತ್ತು ಸಾಂವಿಧಾನಿಕ ಹಿನ್ನೆಲೆ, ನಿರ್ಧಿಷ್ಟ ಗುರಿ ಹಾಗೂ ಸ್ಪಷ್ಟತೆ ಇರಬೇಕು ಎಂದು ಮಲೆನಾಡು ಕರಾವಳಿ ಜನಪರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಮುರೊಳ್ಳಿಯವರು ತಿಳಿಸಿದರು.

ಶಿವಮೊಗ್ಗ ಜಿಲ್ಲೆ ಕುಪ್ಪಳ್ಳಿಯ ಹೇಮಾಂಗಣದಲ್ಲಿ ಮಲೆನಾಡು ಕರಾವಳಿ ಜನಪರ ಒಕ್ಕೂಟದಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ನಾಯಕತ್ವ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಮಲೆನಾಡು-ಕರಾವಳಿಯ ಜನರ ಬದುಕು, ಭಾವನೆ, ಶ್ರದ್ಧೆ, ನಂಬಿಕೆಗಳ ಗಟ್ಟಿ ಧ್ವನಿ ಈ ಒಕ್ಕೂಟವಾಗಿದೆ. ಸಾಂಸ್ಕೃತಿಕ ಆಸಕ್ತರೂ ನಮ್ಮ ಒಕ್ಕೂಟಕ್ಕೆ ಬೇಕಾಗಿದೆ” ಎಂದು ಪ್ರಾಸ್ತಾವಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಂದಿನ ದಿನಗಳಲ್ಲಿ ಮಾದಕ ದ್ರವ್ಯ ವಿರೋಧಿ ಶಿಬಿರಗಳನ್ನು ಕಾಲೇಜುಗಳಲ್ಲಿ ನಡೆಸುವಂತೆ ತೀರ್ಮಾನಿಸಿದ್ದೇವೆ. ಕುವೆಂಪು ಮತ್ತು ಕಾರಂತರನ್ನು ಒಳಗೊಳ್ಳುವ “ಕಾಡು ಮತ್ತು ಕಡಲು” ಅಭಿಯಾನಕ್ಕೆ ಮೊದಲ ಭಾಗವಾಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ತರಬೇತಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದೇವೆ. ಮಲೆನಾಡು-ಕರಾವಳಿಗೆ ಹೈಕೋರ್ಟ್ ಬೆಂಚ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಬೇಕು ಎಂಬುವುದು ಒಕ್ಕೂಟದ ಒತ್ತಾಯವಾಗಿದೆ. ಸಾಂಸ್ಕೃತಿಕ-ಸಾಹಿತ್ಯಿಕ, ಸಾಮರಸ್ಯ, ಸಮನ್ವಯ, ಸಹಬಾಳ್ವೆಯಿಂದ ಕೂಡಿದ ಸುಂದರವಾದ ನಾಳೆಯನ್ನು ಬಿಟ್ಟು ಹೋಗುವುದು ನಮ್ಮ ಉದ್ದೇಶ” ಎಂದು ಅಭಿಪ್ರಾಯಪಟ್ಟರು.

ಮಕಜ ಒಕ್ಕೂಟ

ಮೊದಲ ಗೋಷ್ಠಿಯಲ್ಲಿ ಚಿಂತಕ ಎಂ ಜಿ ಹೆಗಡೆ ಮಾತನಾಡಿ, “ಸಂವಿಧಾನದಲ್ಲಿ ಉಪಾಸನೆಯ ಶಬ್ಧವಿದೆ. ಭಾರತ ಬಹುಮುಖಿ ಸಂಸ್ಕೃತಿಯ ದೇಶವಾಗಿದೆ. ನಾವು ಗಾಂಧಿ ಮತ್ತು ಅಂಬೇಡ್ಕರ್ ಇಬ್ಬರನ್ನೂ ಒಟ್ಟಾಗಿ ಕೊಂಡೊಯ್ಯಬೇಕಾಗಿದೆ. ನಿರ್ಧಿಷ್ಟವಾದ ಅಸ್ಪೃಶ್ಯತೆ ಮತ್ತು ಅಸಮಾನತೆಯನ್ನು ವಿರೋಧಿಸಬೇಕು. ನಂಬಿಕೆಯನ್ನು ವಿರೋಧ ಮಾಡಬಾರದು” ಎಂದರು.

ಎರಡನೇ ಗೋಷ್ಠಿಯಲ್ಲಿ ಚಿಂತಕ ಲಕ್ಷ್ಮೀಶ್ ಗಬ್ಬಲಡ್ಕ ಮಾತನಾಡಿ, “ಪ್ರತಿಕ್ರಿಯಾತ್ಮಕ ಮತ್ತು ಸ್ಪರ್ಧಾತ್ಮಕ ನಡವಳಿಕೆಗಳೆರಡೂ ಅಪಾಯಕಾರಿ. ತನ್ನನ್ನು ಮೀರಿಸುವ ವ್ಯಕ್ತಿತ್ವ ರೂಪಿಸುವವನೇ ನಾಯಕ” ಎಂದು ಹೇಳಿದರು.

ಮೂರನೇ ಗೋಷ್ಠಿಯಲ್ಲಿ ವಕೀಲರು ಹಾಗೂ ಹೋರಾಟಗಾರ ರವೀಂದ್ರನಾಥ್ ನಾಯಕ್ ಮಾತನಾಡಿ, “ಅರಣ್ಯ ಹಕ್ಕು ಕಾಯ್ದೆ ಅರಣ್ಯವಾಸಿಗಳ ಪರವಾಗಿದ್ದರೂ ಅನುಷ್ಠಾನದಲ್ಲಿ ವೈಫಲ್ಯವಾಗಿದೆ. ಮೂರು ತಲೆಮಾರಿನ ದಾಖಲೆಗಳನ್ನು ಕೇಳುತ್ತಿದ್ದಾರೆ. ಹೀಗಾಗಿ ತಮ್ಮ ಭೂಮಿಗಾಗಿ ಹಾಕಿದ ಅರಣ್ಯವಾಸಿಗಳ ಅರ್ಜಿಯನ್ನು ತಿರಸ್ಕರಿಸಲಾಗಿದೆ. ಅರಣ್ಯವಾಸಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಕಾನೂನು ತಿಳುವಳಿಕೆ ನೀಡಬೇಕು. ಅರ್ಜಿ ವಿಲೇವಾರಿ ಆಗುವವರೆಗೂ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಬಾರದು. ಅರಣ್ಯ ನಿವಾಸಿಗಳ ಹಕ್ಕುಗಳ ಬೇಡಿಕೆಯೊಂದಿಗೆ “ಲಕ್ಷ-ವೃಕ್ಷ” ಗಿಡ ನೆಡುವ ಕಾರ್ಯಕ್ರಮದಲ್ಲಿ ಮೂರೂವರೆ ಲಕ್ಷ ಗಿಡಗಳನ್ನೂ ನೆಟ್ಟಿದ್ದೇವೆ” ಎಂದರು.

ಮಕಜ ಒಕ್ಕೂಟ

ಎಂ ಎಲ್ ಮೂರ್ತಿ ಮಾತನಾಡಿ, “ಕಲ್ಯಾಣ ಕರ್ನಾಟಕದ ಜನರ ಅಭಿವೃದ್ಧಿಗೆ ಜಾರಿಗೆ ಬಂದ 371ಜೆ ಕಲಂನಡಿ ಉದ್ಯೋಗಾವಕಾಶ, ಮುಂಬಡ್ತಿ ವಿಷಯದಲ್ಲಿ ಅನ್ಯಾಯವಾಗಯತ್ತಿದೆ. ನ್ಯಾಯಕ್ಕಾಗಿ ಹೋರಾಡಬೇಕಾಗಿದೆ. ಮಲೆನಾಡು-ಕರಾವಳಿಯನ್ನು ವಿಶೇಷ ಕೃಷಿ-ಸಾಂಸ್ಕೃತಿಕ ವಲಯವಾಗಿ ಘೋಷಿಸಬೇಕು. ನಾವು ಗಾಂಧಿ ಮತ್ತು ಅಂಬೇಡ್ಕರ್ ಕೊಟ್ಟ ಮಾರ್ಗವನ್ನೇ ಅನುಸರಿಸಿಕೊಂಡು ಹೋಗಬೇಕು” ಎಂದರು.

ಎರಡನೇ ಗೋಷ್ಠಿಯಲ್ಲಿ ನ್ಯಾಯಮೂರ್ತಿ ನಾಗಮೋಹನದಾಸ್ ಭಾರತದ ಇತಿಹಾಸ ಮತ್ತು ಸಂವಿಧಾನದ ಮೌಲ್ಯವನ್ನು ವಿವರಿಸುತ್ತಾ, “ದೇಶವನ್ನು ಅರಿಯದೆ ಸಂವಿಧಾನವನ್ನು ತಿಳಿಯಲು ಸಾಧ್ಯವಿಲ್ಲ. ದೇಶವೆಂದರೆ ಜನರು. ಭಾರತದ ಇತಿಹಾಸವನ್ನು ಪ್ರಾಚೀನ, ಮಧ್ಯಕಾಲೀನ, ಆಧುನಿಕ ಇತಿಹಾಸ ಎಂದು ಮೂರು ಭಾಗಗಳಲ್ಲಿ ಅರಿತುಕೊಳ್ಳಬಹುದು. ಇದರಿಂದ ದೇಶವನ್ನು ಅರ್ಥಮಾಡಿಕೊಳ್ಳಬಹುದು. ಎಲ್ಲ ಕ್ಷೇತ್ರಗಳಲ್ಲೂ ಹಣದ ಪ್ರಭಾವ ಕಡಿಮೆ ಮಾಡಲು ಪ್ರಯತ್ನಿಸಬೇಕು” ಎಂದರು.

ಶಿಬಿರಕ್ಕೆ ಚಿಕ್ಕಮಂಗಳೂರು, ಉಡುಪಿ, ಶಿವಮೊಗ್ಗ, ದಕ್ಷಿಣಕನ್ನಡ, ಉತ್ತರಕನ್ನಡ, ಕೊಡಗು, ಹಾಸನ ಜಿಲ್ಲೆಗಳಿಂದ ಆಗಮಿಸದ್ದ ನೂರಾರು ಮಂದಿ‌ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸಿಡಬ್ಲ್ಯೂಆರ್‌ಸಿ ಸೂಚನೆ

ಮಲೆನಾಡಿನ ಜನರನ್ನು ಕಾಡುತ್ತಿರುವ ಅರಣ್ಯ ಪ್ರದೇಶದ ನಿವಾಸಿಗಳ ಒಕ್ಕೆಲಿಬ್ಬಿಸುವಿಕೆ, ಕೃಷಿಕರು ಹಾಗೂ ಕಾಫಿ ಬೆಳೆಗಾರರು ಅನುಭವಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ‌ ಒದಗಿಸುವ ನಿಟ್ಟಿನಲ್ಲಿ ಈ‌ ಭಾಗದ ಜನ ಹೋರಾಟಗಳಲ್ಲಿ ಪಾಲ್ಗೊಳ್ಳುವಿಕೆ ಹಾಗೂ ಮಾಹಿತಿ ನೀಡಿದರು. ಕರಾವಳಿಯಲ್ಲಿ ಜನ ಅನುಭವಿಸುತ್ತಿರುವ ಗಂಭೀರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು. ಪ್ರಮುಖವಾಗಿ ಕರವಾಳಿ ಹಾಗೂ ಮಲೆನಾಡನ್ನು ಅವರಿಸಿಕೊಂಡಿರುವ ಡ್ರಗ್ಸ್ ಪಿಡುಗಿನ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದ ನಿರ್ಧಾರ ಕೈಗೊಂಡರು.

ಚಿಂತಕಿ ರಾಧಾ ಸುಂದರೇಶ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಶಾಸಕ ಟಿ ಡಿ ರಾಜೇಗೌಡ, ಮ.ಕ.ಜ. ಒಕ್ಕೂಟದ ಸಂಚಾಲಕ ಅನಿಲ್ ಹೊಸಕೊಪ್ಪ, ವಕೀಲ ಮನೋರಾಜ್ ಸೇರಿದಂತೆ ಹಲವು ಮಂದಿ ಚಿಂತಕರು ಎರಡು ದಿನಗಳ ಅಧ್ಯಯನ ಶಿಬಿರದಲ್ಲಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...