ಶಿವಮೊಗ್ಗ | ಸರ್ಕಾರಿ ಉರ್ದು ಶಾಲೆಯ ತಡೆಗೋಡೆ ಕುಸಿತ; ಅಧಿಕಾರಿಗಳ ನಿರ್ಲಕ್ಷ್ಯ

Date:

ಶಿವಮೊಗ್ಗ ನಗರದ ಹೃದಯ ಭಾಗದ ಕರ್ನಾಟಕ ಸಂಘದ ಹಿಂಭಾಗ ಇರುವ ಶತಮಾನೋತ್ಸವ ಆಚರಿಸಿರುವ, ಹಾಗೂ ಇಂದಿನ ಬಹಳಷ್ಟು ಗಣ್ಯರು ಓದಿರುವ ಶಾಲೆಯ ಪ್ರಸ್ತುತ ಹಂತ ದುಃಸ್ಥಿತಿಗೆ ತಲುಪಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆ ನಿರ್ಲಕ್ಷ್ಯ ವಹಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

“ಈ ಶಾಲೆಯ ಆವರಣದಲ್ಲಿ ಕನ್ನಡ, ಉರ್ದು ಹಾಗೂ ತಮಿಳು ಮಾದ್ಯಮ ಶಾಲೆ, ಪಿಯು ಕಾಲೇಜು ಮತ್ತು ಪದವಿ ಕಾಲೇಜು ಹೀಗೆ ಎಲ್ಲ ಶಾಲಾ ಕಾಲೇಜುಗಳು ಒಂದೇ ಆವರಣದಲ್ಲಿ ಬರುವ ಆವರಣದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಹೇಳಲಸಾಧ್ಯವಾಗಿದೆ” ಎಂದು ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದಾರೆ.

ತಡೆಗೋಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿವಮೊಗ್ಗ ನಗರದ ಹೃದಯ ಭಾಗದಲ್ಲಿ ಇರುವ ಉರ್ದು ಪ್ರೌಢ ಶಾಲೆಯ ತಡೆಗೋಡೆ ಕುಸಿದಿದ್ದು, ಗೇಟ್ ಕೂಡ ಇಲ್ಲದಂತಾಗಿದೆ. ಇದರಿಂದ ಶಾಲೆ-ಕಾಲೇಜುಗಳು ಮುಗಿದ ಬಳಿಕ ಈ ಆವರಣದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತವೆ. ಜತೆಗೆ ಪುಂಡರ ಹಾವಳಿಗಳು ಹೆಚ್ಚಾಗಿದೆ. ಹೀಗಿದ್ದರೂ ಕೂಡ ಸ್ಥಳೀಯ ಆಡಳಿತವಾಗಲಿ, ಶಿಕ್ಷಣ ಇಲಾಖೆಯಾಗಲಿ, ಮಹಾನಗರ ಪಾಲಿಕೆಯಾಗಲಿ ಶಾಲೆಯತ್ತ ಗಮನ ಹರಿಸದೆ ನಿರ್ಲಕ್ಷ ವಹಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ” ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

“ಶಾಲೆಯ ಆವರಣದ ತಡೆಗೋಡೆ ಬಹಳ ಹಳೆಯದಾಗಿದ್ದು ಹಾಗೂ ಮಳೆ ಬಂದು ಶಿಥಿಲಗೊಂಡು ಕುಸಿದು ಹಲವು ತಿಂಗಳುಗಳೇ ಕಳೆದಿವೆ. ತಡೆಗೋಡೆ ಪಕ್ಕದಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ ಅವರ ಪ್ರತಿಮೆ ಹಿಂಭಾಗ ಶಾಲಾ ಆವರಣದ ಒಳ ಬರಲು ಜಾಗವಿದ್ದು, ಮತ್ತೆ ಶಾಲೆಗೆ ಗೇಟ್ ಇಲ್ಲದ ಕಾರಣ
ಶಾಲಾ ವೇಳೆಯ ನಂತರ ಅಕ್ರಮ ಚಟುವಟಿಕೆಯ ತಾಣವಾಗಿದೆ” ಎಂದು ಸಾರ್ವಜನಿಕರು ಆರೋಪಿಸಿದರು.

ಶಾಲೆ ತಡೆಗೋಡೆ

ಈ ವಿಷಯಕ್ಕೆ ಸಂಬಂಧಿಸಿದಂತೆ ಈ ದಿನ.ಕಾಮ್ ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ‌ ನಾಗರಾಜ್ ಅವರನ್ನು ಸಂಪರ್ಕಿಸಿದೆ. ಬಳಿಕ ಅವರು ಮಾತನಾಡಿ, “ಈ ಶಾಲಾ ಆವರಣ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುತ್ತಿದ್ದು, ಒಂದು ವರ್ಷದ ಹಿಂದೆಯೇ ತಡೆಗೋಡೆ ಕುಸಿದಿದೆ. ಇದನ್ನು ರಿಪೇರಿ ಮಾಡಿಸಿಕೊಡಿ ಎಂದು ವರ್ಷದ ಹಿಂದೆಯೇ, ಮಹಾನಗರ ಪಾಲಿಕೆ ಗಮನಕ್ಕೆ ತಂದಿದ್ದು, ಮನವಿಯನ್ನೂ ಸಲ್ಲಿಸಿದ್ದೇವೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಭೂಹಗರಣ ಹೆಚ್ಚಳ; ಕಡತ ವಿಚಾರಣೆ ವೇಳೆ 750 ಎಕರೆ ಅಕ್ರಮ ಜಮೀನು ಪತ್ತೆ

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಇದಕ್ಕೆ ಅನುದಾನ ಬಿಡುಗಡೆಯಾಗದ ಕಾರಣ ತಡೆಗೋಡೆ, ಗೇಟ್ ಮತ್ತು ಬಂದೋಬಸ್ತ್‌ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗುತ್ತಿಲ್ಲವೆಂದು ಹೇಳುತ್ತಿದೆ. ಹಾಗಾಗಿ ಇದು ಸಮಸ್ಯೆಯಾಗಿ ಉಳಿದಿದೆ. ಮತ್ತೊಮ್ಮೆ ಈ ಕುರಿತು ಮಹಾನಗರ ಪಾಲಿಕೆ ಗಮನಕ್ಕೆ ತರಲಾಗುವುದು” ಎಂದು ತಿಳಿಸಿದರು.

ಸಂಜೆ ಶಾಲಾ ಸಮಯದ ನಂತರ ಅತಿಕ್ರಮ ಪ್ರವೇಶ ಆಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಗುವುದು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಗಮನಕ್ಕೆ ಮತ್ತೊಮ್ಮೆ ಈ ವಿಷಯ ತಿಳಿಸಲಾಗುವುದು” ಎಂದು ಭರವಸೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...