ಶಿವಮೊಗ್ಗ | ದಲಿತ ಸಂಘರ್ಷ ಸಮಿತಿ ಹಾಗೂ ಜಮಾತೆ ಇಸ್ಲಾಂನಿಂದ ರಂಜಾನ್ ಇಫ್ತಾರ್ ಕೂಟ

Date:

ಪವಿತ್ರ ರಂಜಾನ್ ಮಾಸದ ಅಂಗವಾಗಿ ಶಿವಮೊಗ್ಗ ನಗರದ ದಲಿತ ಸಂಘರ್ಷ ಸಮಿತಿ (ಪ್ರೊ.ಕೃಷ್ಣಪ್ಪ ಸ್ಥಾಪಿತ) ಕಛೇರಿಯಲ್ಲಿ ಜಮಾತೆ ಇಸ್ಲಾಂ ಹಿಂದ್, ದಲಿತ ಸಂಘರ್ಷ ಸಮಿತಿಯಿಂದ ಮಂಗಳವಾರ ಸಂಜೆ ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು. ಸಮಾಜದಲ್ಲಿ ಸಾಮರಸ್ಯ, ಸಹಬಾಳ್ವೆ ಮತ್ತು ಶಾಂತಿಯ ಸಂದೇಶವನ್ನು ಬಲಪಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

1003808205

ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘಟನೆಯ ಮಹಮ್ಮದ್ ಇಲಿಯಾಜ್, “ಸಮಾಜದಲ್ಲಿ ಶಾಂತಿ, ಸಹಬಾಳ್ವೆ, ಸಮಾನತೆ ಮತ್ತು ಪರಸ್ಪರ ಗೌರವ, ಮೌಲ್ಯಗಳನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ, ಇದನ್ನೇ ಕುರಾನ್ ಹೇಳುತ್ತದೆ. ಸಮಾಜದಲ್ಲಿ ಸಂಕಷ್ಟದಲ್ಲಿರುವವರಿಗೆ, ಬಡವರಿಗೆ, ಹಸಿದವರಿಗೆ ಸಹಾಯ ಮಾಡುವ ಮೂಲಕ, ಅವರ ನೋವು ಅರಿಯುವ ಪ್ರಯತ್ನ ರಂಜಾನ್ ಹಬ್ಬದ ಉಪವಾಸದ ಮಹತ್ವ. ಸಮಾಜದಲ್ಲಿ ಹಸಿದವರಿಗೆ, ಬಡವರಿಗೆ ಸಹಾಯ ಮಾಡುವ ಮೂಲಕ ಅವರನ್ನು ಬಡತನದಿಂದ ಮೇಲೆತ್ತುವ ಕಾರ್ಯ ಮಾಡಬೇಕು ಎಂದು ಕುರಾನ್ ಹೇಳುತ್ತದೆ. ಇದನ್ನೇ ಅಂದು ಪ್ರವಾದಿ ಮಹಮ್ಮದ್ ಪೈಗಂಬರ್ ಮಾಡಿ ತೋರಿಸಿದ್ದರು. ಇಂತಹ ಇಫ್ತಾರ್ ಕೂಟಗಳು ವಿವಿಧ ಸಮುದಾಯಗಳ ನಡುವಿನ ಸ್ನೇಹವನ್ನು ಮತ್ತಷ್ಟು ಬಲಪಡಿಸುತ್ತವೆ” ಎಂದು ತಿಳಿಸಿದರು.

1003808207

ನಿವೃತ್ತ ನ್ಯಾಯಾಧೀಶರಾದ ಸೆಲ್ವಕುಮಾರ್ ಮಾತನಾಡಿ “ಸಮಾನತೆ, ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳನ್ನು ಉಳಿಸುವ ಅಗತ್ಯವಿದೆ. ಇಂತಹ ಇಫ್ತಾರ್ ಕಾರ್ಯಕ್ರಮವು ಸಮಾಜದಲ್ಲಿ ಸಾಮರಸ್ಯವನ್ನು ಬಲಪಡಿಸುವ ಉತ್ತಮ ಪ್ರಯತ್ನ.‌ ಎಲ್ಲಾ ಧರ್ಮಗಳೂ ಸಮಾನತೆ, ಶಾಂತಿಯನ್ನೇ ಹೇಳುತ್ತವೆ. ಉಪವಾಸದ ಜೊತೆಗೆ ಆತ್ಮ ಶುದ್ಧಿಗಾಗಿ ರಂಜಾನ್ ಅಗತ್ಯ” ಎಂದು ಅಭಿಪ್ರಾಯಪಟ್ಟರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003808208

ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಗುರುಮೂರ್ತಿ ಮಾತನಾಡಿ, “ಎರಡನೇ ಬಾರಿಗೆ ಇಫ್ತಾರ್ ಕೂಟ ನಮ್ಮ ಕಛೇರಿಯಲ್ಲಿ ಆಯೋಜಿಸುತ್ತಿರುವುದು ಸಂತೋಷ ತಂದಿದೆ. ಬುದ್ಧ, ಬಸವ, ಅಂಬೇಡ್ಕರ್ ಶಾಂತಿಗೆ ಹೆಸರಾದವರು. ಮನುಷ್ಯ ಮನುಷ್ಯರ ಮಧ್ಯೆ ಬಾಂಧವ್ಯ ಇಲ್ಲ.‌ ಸಣ್ಣ ಸಣ್ಣ ಘಟನೆಗಳನ್ನು ಧರ್ಮ ಹಾಗೂ ರಾಜಕೀಕರಣಗೊಳಿಸಲಾಗುತ್ತಿದೆ.‌ ಧರ್ಮದ ಹೆಸರಿನಲ್ಲಿ ರಾಜಕೀಯ ನಿಲ್ಲಬೇಕು.‌ ಅಂಬೇಡ್ಕರ್ ಎಲ್ಲರಿಗೂ ಸಮಾನ ಮತದಾನದ ಹಕ್ಕು ಕೊಡಿಸಿದ್ದಾರೆ. ಆದರೆ ಅವರು ಕಂಡ ಸಮಾನತೆ ಕನಸು ನನಸಾಗಿಲ್ಲ.‌ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡರೆ ಶಾಂತಿ ಸಾಧ್ಯ” ಎಂದು ಆಶಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಾದಿಗ ಸಂಘಟನೆಗಳ ಒಕ್ಕೂಟದಿಂದ ಒಳಮೀಸಲಾತಿಯ ನೇಮಕಾತಿಗೆ‌ ಒತ್ತಾಯಿಸಿ ಬಂದ್

ಕಾರ್ಯಕ್ರಮದಲ್ಲಿ ಮುಖಂಡರಾದ ಅಜಾಜ್, ವಕೀಲ ಲಿಯಾಖತ್, ಜಫ್ರುಲ್ಲಾ ಹಾಗೂ ವಿವಿಧ ಸಮುದಾಯಗಳ ಮುಖಂಡರು, ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು, ಮುಸ್ಲಿಂ ಸಮಾಜದ ಮುಖಂಡರು ಹಾಗೂ ಸ್ಥಳೀಯರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...