ಶಿವಮೊಗ್ಗ | ಆನವೇರಿ ಮೊರಾರ್ಜಿ ವಸತಿ ಶಾಲೆಯಲ್ಲಿ ಸಮಸ್ಯೆಗಳ ಸರಮಾಲೆ; ವಿದ್ಯಾರ್ಥಿಗಳ ಸಂಕಷ್ಟ

Date:

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಆನವೇರಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸುಮಾರು 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ವಸತಿ ನಿಲಯದಲ್ಲಿ ನೀರು, ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ವರ್ಷ ಪಿಯುಸಿ ತರಗತಿಯೂ ಆರಂಭವಾಗಿದ್ದು, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಆದರೆ ಹಾಸ್ಟೆಲ್ ಕೊಠಡಿಗಳ ಸರಿಯಾದ ನಿರ್ವಹಣೆ ಇಲ್ಲದಿರುವುದರಿಂದ ಅವು ಹಾಳಾಗುತ್ತಿವೆ ಸಮಸ್ಯೆಗಳ ಸರಮಾಲೆ ಬಗ್ಗೆ ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

1003860998
ಶೌಚಾಲಯ ದುಸ್ಥಿತಿ

ವಿಶೇಷವಾಗಿ ಹೆಣ್ಣುಮಕ್ಕಳ ಸ್ನಾನಗೃಹಗಳಿಗೆ ಹಾಗೂ ಹಾಸ್ಟೆಲ್ ಬಾಗಿಲುಗಳಿಗೆ ಲಾಕ್ ವ್ಯವಸ್ಥೆ ಇಲ್ಲದಿರುವುದು ವಿದ್ಯಾರ್ಥಿನಿಯರ ಸುರಕ್ಷತೆಗೆ ಆತಂಕ ಉಂಟುಮಾಡಿದೆ.
ಇದರ ಜೊತೆಗೆ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಇಲ್ಲದಿರುವುದು, ಊಟದ ಗುಣಮಟ್ಟ ಕಡಿಮೆಯಿರುವುದು ಹಾಗೂ ಅನ್ನದಲ್ಲಿ ನುಸಿ ಹುಳಗಳು ಇರುವುದಾಗಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಶೌಚಾಲಯಗಳ ಸ್ವಚ್ಛತೆ ಸಮರ್ಪಕವಾಗಿಲ್ಲದ ಕಾರಣ ಅವು ತುಂಬಿಕೊಂಡಿದ್ದು ಆರೋಗ್ಯ ಸಮಸ್ಯೆಗಳ ಭೀತಿ ಹೆಚ್ಚಿಸಿದೆ. ಈ ಹಿಂದೆ ಒಬ್ಬ ವಿದ್ಯಾರ್ಥಿನಿ ಆರೋಗ್ಯ ಸಮಸ್ಯೆಯಿಂದ ಮೃತಪಟ್ಟಿದ್ದಾಳೆ ಎನ್ನುವ ಮಾತುಗಳೂ ಕೇಳಿಬರುತ್ತಿವೆ. ಅಲ್ಲದೆ ಶಿಕ್ಷಕರ ನಡುವೆ ಹೊಂದಾಣಿಕೆ ಕೊರತೆಯಿಂದ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ ಸಿಗುತ್ತಿಲ್ಲ ಎಂಬ ಆರೋಪವೂ ಕೇಳಿಬರುತ್ತಿದ್ದು, ರಾತ್ರಿ ವೇಳೆ ಸರಿಯಾದ ಬೆಳಕಿನ ವ್ಯವಸ್ಥೆಯ ಕೊರತೆಯೂ ವಿದ್ಯಾರ್ಥಿಗಳಲ್ಲಿ ಆತಂಕ ಉಂಟುಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003860997

ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸಮಸ್ಯೆ ಉಂಟಾಗಿರುವ ಬಗ್ಗೆ ಮಾಹಿತಿ ತಿಳಿದ ತಕ್ಷಣ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಓ) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಲೆಯ ಪರಿಸ್ಥಿತಿ, ವಸತಿ ಗೃಹಗಳ ವ್ಯವಸ್ಥೆ, ಕುಡಿಯುವ ನೀರು ಹಾಗೂ ಊಟದ ಗುಣಮಟ್ಟ ಸೇರಿದಂತೆ ಹಲವು ವಿಷಯಗಳನ್ನು ಸಿಇಓ ಪರಿಶೀಲಿಸಿದರು.

ಈ ವೇಳೆ ವಿದ್ಯಾರ್ಥಿಗಳೊಂದಿಗೆ ನೇರವಾಗಿ ಮಾತನಾಡಿ ಅವರ ಸಮಸ್ಯೆಗಳು ಮತ್ತು ಅಸೌಕರ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಮಕ್ಕಳು ತಮಗೆ ಎದುರಾಗುತ್ತಿರುವ ಸಮಸ್ಯೆಗಳನ್ನು ವಿವರಿಸಿದ್ದು, ಅದನ್ನು ಗಮನದಿಂದ ಆಲಿಸಿದ ಸಿಇಓ ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಪೋಷಕರು ಮತ್ತು ಸ್ಥಳೀಯರು ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಗಳನ್ನು ಪರಿಶೀಲಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...