ಶಿವಮೊಗ್ಗ | ಗೋಪಾಲಗೌಡ ಸ್ವಾಮಿ ವಿವೇಕಾನಂದ ಬಡಾವಣೆಗಳಿಗೆ ಮೂಲಭೂತ ಸೌಕರ್ಯಕ್ಕೆ ಕ್ಷೇಮಾಭಿವೃದ್ಧಿ ಸಂಘ ಒತ್ತಾಯ

Date:

ಬೀದಿ ದೀಪ, ಪಾರ್ಕ್, ಡ್ರೈನೇಜ್ ವ್ಯವಸ್ಥೆ ಸೇರಿದಂತೆ ಇತರ ಮೂಲಭೂತ ಸೌಕರ್ಯಗಳನ್ನು ಗೋಪಾಲಗೌಡ ಹಾಗೂ ಸ್ವಾಮಿ ವಿವೇಕಾನಂದ ಅವಳಿ ಬಡಾವಣೆಗಳಿಗೆ ಕಲ್ಪಿಸಲು ಒತ್ತಾಯಿಸಿ ಶಿವಮೊಗ್ಗದ ಗೋಪಾಲಗೌಡ ಹಾಗೂ ಸ್ವಾಮಿ ವಿವೇಕಾನಂದ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಮುಖಂಡರು ಹಾಗೂ ನಿವಾಸಿಗಳು ಶಿವಮೊಗ್ಗದ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.

1003740871

ಈ ವೇಳೆ ಮಾತನಾಡಿದ ನಿವಾಸಿಗಳು “ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆ ಹಾಗೂ ಸ್ವಾಮಿ ವಿವೇಕಾನಂದ ಬಡಾವಣೆಯು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಾಣವಾದ ವಿಶಾಲ ಪ್ರದೇಶವನ್ನೊಳಗೊಂಡ ಪ್ರತಿಷ್ಠಿತ ಬಡಾವಣೆಯಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಹಾನಗರ ಪಾಲಿಕೆಗೆ ಹಸ್ತಾಂತರವಾಗಿದ್ದು, ನಿರೀಕ್ಷಿತ ಮಟ್ಟದ ಅಭಿವೃದ್ಧಿಯಾಗಿರುವುದಿಲ್ಲ. ಆದ್ದರಿಂದ ತಾವುಗಳು ನಿವಾಸಿಗಳ ಬಹುದಿನದ ಬೇಡಿಕೆಗೆ ಪೂರಕವಾಗಿ ಸ್ಪಂದಿಸಿ ಆದ್ಯತೆ ಮೇರೆಗೆ ಈ ಎರಡು ಅವಳಿ ಬಡಾವಣೆಯ ಅಭಿವೃದ್ಧಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ವಿನಂತಿಸಿದರು.

1003740873

“ಈ ಮುಂದಿನ ಪ್ರಮುಖ ಬೇಡಿಕೆಗಳಾದ ಗೋಪಾಲಗೌಡ ಬಡಾವಣೆಯ ದೇವಂಗಿ ಹೈಲೆಟ್ಸ್ ಅಪಾರ್ಟಮೆಂಟ್ ಪಕ್ಕದ ರಸ್ತೆ ಡಾಂಬರೀಕರಣ ಮಾಡಬೇಕು, ಬಂಟರ ಭವನ ಹತ್ತಿರದ ರಾಜಕಾಲುವೆ ರಸ್ತೆಯು ಕುಸಿದು ವಾಹನ ಸವಾರರಿಗೆ ತೊಂದರೆಯಾಗುತ್ತಿದ್ದು, ಸದರಿ ರಸ್ತೆ ಕಾಮಗಾರಿ ಕೈಗೊಳ್ಳುವುದು. ಎ ಬ್ಲಾಕ್‌ ಪುರಂಧರ ಪಾರ್ಕ್‌ನಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಶೌಚಾಲಯ ನಿರ್ಮಿಸುವುದು. ಗುಡ್‌ಲಕ್ ಸರ್ಕಲ್‌ನ ಎ ಬ್ಲಾಕ್‌ಗೆ ಹೊಂದಿಕೊಂಡಿರುವ ಮೊದಲನೆ ರಸ್ತೆ ಕಾಮಗಾರಿಗೆ ಆದ್ಯತೆ ನೀಡುವುದು. ಪಾರ್ಕ್‌ಗಳನ್ನು ಅಭಿವೃದ್ಧಿ ಪಡಿಸಿ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೀದಿ ದೀಪಗಳ ನಿರ್ವಹಣೆ ಇಲ್ಲದೆ ದೀಪಗಳು ಹಾಳಾಗಿದ್ದು, ಕತ್ತಲೆಯಲ್ಲಿ ಕೆಲವೆಡೆ ನಡೆದಾಡಬೇಕಾಗಿದೆ.‌ ಈ ಬಗ್ಗೆ ತುರ್ತು ಕ್ರಮ ವಹಿಸುವುದು. ಎರಡು ಬಡಾವಣೆಗಳು ವಿಶಾಲ ಪ್ರದೇಶ ಹೊಂದಿದ್ದು, ಪೌರಕಾರ್ಮಿಕರ ಕೊರತೆಯಿಂದ ಸ್ವಚ್ಚತೆ ಕಷ್ಟಸಾಧ್ಯವಾಗಿರುವುದರಿಂದ ಹೆಚ್ಚುವರಿ ಕಾರ್ಮಿಕರನ್ನು ನೇಮಿಸುವುದು. ರಾಜಕಾಲುವೆ ಅವೈಜ್ಞಾನಿಕವಾಗಿದ್ದು, ಮಳೆಗಾಲದಲ್ಲಿ A, B, C ಬ್ಲಾಕ್‌ಗಳಿಗೆ ನೀರು ನುಗ್ಗುವುದರಿಂದ ನಿವಾಸಿಗಳು ಆತಂಕ ಪಡುವಂತಾಗಿದೆ. ವೈಜ್ಞಾನಿಕವಾಗಿ ಕಾಮಗಾರಿ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಸ್ವಾಮಿ ವಿವೇಕಾನಂದ ಬಡಾವಣೆಯ ಎಲ್ಲಾ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಡಾಂಬರೀಕರಣ ಹಾಗೂ ಬಾಕ್ಸ್ ಡೈನೇಜ್ ಕಾಮಗಾರಿ ಕೈಗೊಳ್ಳುವುದು ಮತ್ತು ರಸ್ತೆಗಳಿಗೆ ನಾಮ ಫಲಕ ಅಳವಡಿಸಬೇಕು ಎಂದು ಒತ್ತಾಯಿಸಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಹೆದ್ದಾರಿ ವಿವಾದದಲ್ಲಿ ಸರ್ಕಾರ ಮೌನ: ಬಲಿಯಾಗುತ್ತಿರುವುದು ವಾಹನ ಸವಾರರ ಜೀವನ

ಮನವಿ ಸಲ್ಲಿಸುವ ವೇಳೆ ಗೋಪಾಲಗೌಡ ಬಡಾವಣೆ ಹಾಗೂ ಸ್ವಾಮಿ ವಿವೇಕಾನಂದ ಕ್ಷೇಮಾಭಿವೃದ್ಧಿ ಸಂಘ ಹಾಗೂ ಬಡಾವಣೆಯ ಮುಖಂಡರು, ನಿವಾಸಿಗಳು ಹಾಜರಿದ್ದರು.‌
.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...