ವಿಜಯಪುರ ಅಭಿವೃದ್ಧಿಯಲ್ಲಿ ಶಿವಾನಂದ ಪಾಟೀಲರ ಪಾತ್ರ ಎಳ್ಳಷ್ಟೂ ಇಲ್ಲ: ಮಾಜಿ ಸಚಿವ ಎಸ್‌ ಕೆ ಬೆಳ್ಳುಬ್ಬಿ

Date:

ವಿಜಯಪುರ ಮತಕ್ಷೇತ್ರದ ಅಭಿವೃದ್ಧಿ ನನ್ನ ಹೋರಾಟದ ಫಲ. ಜಿಲ್ಲೆಯ ಕೊರ್ತಿ ಕೊಲ್ಹಾರ ಸೇತುವೆ ನಿರ್ಮಾಣಕ್ಕಾಗಿ ನಡೆದ ಹೋರಾಟ, ನೀರಾವರಿ ಯೋಜನೆ ಅನುಷ್ಠಾನಗೊಳಿಸುವಲ್ಲಿ ಹಾಗೂ ಹೊಸ ತಾಲೂಕುಗಳ ರಚನೆಯಲ್ಲಿ ಸಚಿವ ಶಿವಾನಂದ ಪಾಟೀಲರ ಪಾತ್ರ ಎಳ್ಳಷ್ಟೂ ಇಲ್ಲ, ಈ ಕುರಿತು ಮಾತನಾಡುವ ಯಾವ ಹಕ್ಕು ಸಹ ಅವರಿಗೆ ಇಲ್ಲ ಎಂದು ಮಾಜಿ ಸಚಿವ ಎಸ್‌ ಕೆ ಬೆಳ್ಳುಬ್ಬಿ ಹೇಳಿದರು.

ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೊರ್ತಿ ಕೊಲ್ಹಾರ ಸೇತುವೆ, ಮುಳವಾಡ ಏತ ನೀರಾವರಿ ಮೊದಲನೇ ಹಂತ ಹೀಗೆ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ನಾನು ಹೋರಾಟದ ಮೂಲಕ ಹಾಗೂ ನಂತರ ಬಸವನ ಬಾಗೇವಾಡಿ ಶಾಸಕನಾಗಿದ್ದ ಅವಧಿಯಲ್ಲಿ ಸಾಕಾರಗೊಳಿಸಿದ್ದೇನೆ. ಆದರೆ ಈ ಸಾಧನೆಯನ್ನು ತಮ್ಮ ಸಾಧನೆಯ ಲೇಬಲ್ ಹಚ್ಚಿಕೊಳ್ಳುವುದನ್ನು ಸಚಿವ ಶಿವಾನಂದ ಪಾಟೀಲ ಬಿಡಬೇಕು” ಎಂದು ಒತ್ತಾಯಿಸಿದರು.

“ಈ ಹಿಂದೆ ಸಣ್ಣ ಸೇತುವೆ ಮಳೆಗಾಲ ಸಮಯದಲ್ಲಿ ಬಂದ್ ಆಗುತ್ತಿತ್ತು. ಶಾಶ್ವತವಾಗಿ ಸೇತುವೆ ಮುಳುಗುವ ಹಂತಕ್ಕೂ ಬಂದಿತ್ತು, ಆಗ ಶಾಶ್ವತ ಸೇತುವೆ ನಿರ್ಮಾಣಕ್ಕಾಗಿ ಒಂದು ದೊಡ್ಡ ಹೋರಾಟ ಮಾಡಿದೆ. ಕೊಲ್ಹಾರದಿಂದ ವಿಜಯಪುರ ನಗರಕ್ಕೆ ನೀರು ಸಂಪರ್ಕ ಬಂದ್ ಮಾಡಿ ದೊಡ್ಡಮಟ್ಟದ ಹೋರಾಟ ನಡೆದಿತ್ತು. ಈ ವೇಳೆ ನಮ್ಮನ್ನು ಬಂಧಿಸಲು ಆಗಮಿಸಿದ ಪೊಲೀಸ್ ಅಧಿಕಾರಿಗಳು ಈ ಸೇತುವೆ ಅನಿವಾರ್ಯತೆ ಮನಗಂಡು ಬಂಧಿಸಲಿಲ್ಲ. ಈ ಹೋರಾಟಕ್ಕೆ ಅನೇಕ ಬಾರಿ ಶಾಸಕರಾಗಿದ್ದ ದಿವಂಗತ ಬಿ ಎಸ್ ಪಾಟೀಲ ಮನಗೂಳಿಯವರೂ ಕೂಡ ಬೆಂಬಲಿಸಲಿಲ್ಲ. ಹಾಲಿ ಸಚಿವರಾಗಿರುವ ಶಿವಾನಂದ ಪಾಟೀಲರು ಕೂಡ ಅಂದು ಈ ಹೋರಾಟಕ್ಕೆ ಬಂದಿರಲಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ? ಬೆಳಗಾವಿ | ಅತ್ಯಾಚಾರ ಆರೋಪ: ಮೇಖಳಿಯ ಲೋಕೇಶ್ವರ ಸ್ವಾಮೀಜಿ ವಿರುದ್ಧ ಪೋಕ್ಸೋ, ಬಂಧನ

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ, ಮುಖಂಡ ರಾದ ಕಲ್ಲಪ್ಪ ಸೊನ್ನದ, ಇಸ್ಮಾಯಿಲ್ ತಹಶೀಲ್ದಾರ್, ಪರಶುರಾಮ ಗಣಿ‌ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...