ಬೀದರ್‌ ನೂತನ ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

Date:

ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸೋಮವಾರ ಸ್ವೀಕರಿಸಿದರು.

ಈ ಹಿಂದಿನ ಅಪರ ಜಿಲ್ಲಾಧಿಕಾರಿ ಶಿವಕುಮಾರ್‌ ಶೀಲವಂತ ಅವರ ವರ್ಗಾವಣೆಯಿಂದ ಖಾಲಿಯಾದ ಸ್ಥಳಕ್ಕೆ ಜೂನ್‌ ತಿಂಗಳಲ್ಲಿ ಪ್ರಕಾಶ ಉಳಾಗಡ್ಡಿ ಅವರು ವರ್ಗಾವಣೆಯಾಗಿ ಬಂದು ಅಧಿಕಾರ ಸ್ವೀಕರಿಸಿದರು. ಆದರೆ, ಒಂದು ತಿಂಗಳಲ್ಲೇ ಎಡಿಸಿ ಪ್ರಕಾಶ ಉಳ್ಳಾಗಡ್ಡಿ ಅವರು ಬೇರೆಡೆ ವರ್ಗಾವಣೆಯಾದರು.

ಎಡಿಸಿ ಪ್ರಕಾಶ ಉಳ್ಳಾಗಡ್ಡಿ ಅವರ ವರ್ಗಾವಣೆಯಿಂದ ಖಾಲಿಯಾದ ಜಾಗಕ್ಕೆ ಬೀದರ್‌ ವಿಶ್ವವಿದ್ಯಾಲಯ ಕುಲಸಚಿವರಾಗಿರುವ ಸುರೇಖಾ ಅವರು ಪ್ರಭಾರಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಮುಖ್ಯ ಆಡಳಿತಾಧಿಕಾರಿಯಾಗಿದ್ದ ಶಿವಾನಂದ ಬಿ.ಕರಾಳೆ ಅವರನ್ನು ಜುಲೈ 29ರಂದು ಬೀದರ್‌ ಅಪರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿತ್ತು.

ಇಂದು (ಆ.4) ಪ್ರಭಾರಿ ಅಪರ ಜಿಲ್ಲಾಧಿಕಾರಿ ಸುರೇಖಾ ಅವರು ನೂತನ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಇದನ್ನೂ ಓದಿ : ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ಸ್ವಾಗತ ಸಮಿತಿ ಅಧ್ಯಕ್ಷರಾಗಿ ಬಸವರಾಜ ಧನ್ನೂರ ನೇಮಕ

ಶಿವಾನಂದ ಬಿ.ಕರಾಳೆ ಅವರು 2010ನೇ ಸಾಲಿನ ಕೆಎಎಸ್ ಅಧಿಕಾರಿಯಾಗಿದ್ದು, ಈ ಹಿಂದೆ ಕಾರವಾರ ಜಿಲ್ಲೆಯ ಸಹಾಯಕ ಆಯುಕ್ತರಾಗಿ ಹಾಗೂ ಗದಗ, ಧಾರವಾಡ, ತುಮಕೂರ ಜಿಲ್ಲೆಗಳಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...