ಉಡುಪಿ | ಕಾರಂತರ ಕಾದಂಬರಿ ಅಧ್ಯಯನ ಶಿಬಿರ : ಸಮಾರೋಪ ಸಮಾರಂಭ

Date:

ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇವರ ಸಹಯೋಗದಲ್ಲಿ ಡಾ.ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮವು ಗುರುವಾರ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ ಗಾಂವಕರ, ಸಾಹಿತ್ಯದ ಹಲವು ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಿದವರು ಕಾರಂತರು. ಅವರ ಬಗೆಗಿನ ಶಿಬಿರಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ಹೆಚ್ಚಿನ ರೀತಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಕಾಲೇಜಿನ ಇಂಗ್ಲೀಷ್ ವಿಭಾಗದ ಸಹ ಪ್ರಾಧ್ಯಾಪಕ ಡಾ.ವಿಷ್ಣುಮೂರ್ತಿ ಪ್ರಭು ಮಾತನಾಡಿದರು.

ಈ ಸಂದರ್ಭದಲ್ಲಿ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಟ್ರಸ್ಟ್ನ ಕಾರ್ಯಕ್ರಮದ ಸದಸ್ಯ ಸಂಚಾಲಕ ಜಿ.ಎಂ ಶರೀಫ್, ಬಾರ್ಕೂರಿನ ರುಕ್ಮಿಣಿ ಶೆಡ್ತಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹ ಪ್ರಾಧ್ಯಾಪಕ ಡಾ. ಪ್ರಸಾದ್ ರಾವ್, ಕಾಲೇಜಿನ ಇಂಗ್ಲೀಷ್ ವಿಭಾಗದ ಸಹ ಪ್ರಾಧ್ಯಾಪಕ ಡಾ.ವಿಷ್ಣುಮೂರ್ತಿ ಪ್ರಭು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...