ಚಿಕ್ಕಮಗಳೂರು | ಎಸ್ಟೇಟ್ ಮಾಲೀಕನಿಂದ ವಿಶೇಷ ಚೇತನ ಮಹಿಳೆಯ ಅಂಗಡಿ ಧ್ವಂಸ

Date:

ಕಾಫಿ ಎಸ್ಟೇಟ್ ಬಳಿಯ ರಸ್ತೆ ಬದಿಯಲ್ಲಿ ವಿಶೇಷ ಚೇತನ ಮಹಿಳೆ ಇಟ್ಟಿದ್ದ ಪೆಟ್ಟಿಗೆ ಅಂಗಡಿಯನ್ನು ಎಸ್ಟೇಲ್ ಮಾಲೀಕ ಧ್ವಂಸಗೊಳಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಬಕ್ಕಿ ಗ್ರಾಮದಲ್ಲಿ ವಿಶೇಷ ಚೇತನ ಮಹಿಳೆಗಾಗಿ ಆತನ ಪತಿ ರಾಜು ಎಂಬವರು ಇತ್ತೀಚೆಗೆ ಅಂಗಡಿ ತೆರೆದಿದ್ದರು. ಅಂಗಡಿ ತೆರೆಯಲು ಗ್ರಾಮ ಪಂಚಾಯತಿಯ ಅನುಮತಿಯನ್ನೂ ಪಡೆದಿದ್ದರು. ಆದರೆ, ಅಲ್ಲಿನ ಎಸ್ಟೇಟ್ ಮಾಲೀಕ ವಿದ್ಯಾಶ್ರೀ ಸತ್ಯೇಂದ್ರ ಏಕಾಏಕಿ ಅಂಗಡಿಗೆ ನುಗ್ಗಿ, ಅಲ್ಲಿದ್ದ ಸಾಮಗ್ರಗಿಳನ್ನು ಹೊರಗೆಸೆದು, ಧ್ವಂಸ ಮೆರೆದಿದ್ದಾನೆ ಎಂದು ಆರೋಪಿಸಲಾಗಿದೆ.

ದರ್ಪ ಮೆರೆದ ಸತ್ಯೇಂದ್ರನ ವಿರುದ್ಧ ಸಂತ್ರಸ್ತೆ ಮೂಡಿಗೆರೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...