ಹಾಸನ ವೈದ್ಯಕೀಯ ಕಾಲೇಜಿನ ಐಸಿಯುನಲ್ಲಿ ಅಗ್ನಿ ಅವಘಡ; ನವಜಾತ ಶಿಶುಗಳ ರಕ್ಷಣೆ

Date:

ಹಾಸನದ ವೈದ್ಯಕೀಯ ಕಾಲೇಜು ಆಸ್ಪತ್ರೆ(ಹಿಮ್ಸ್‌)ನಲ್ಲಿ ಭಾನುವಾರ ಮಧ್ಯಾಹ್ನ ಬೆಂಕಿ ಅವಘಡ ಸಂಭವಿಸಿದ್ದು, ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.

ಹಾಸನದ ಜಿಲ್ಲಾಸ್ಪತ್ರೆಯೂ ಆಗಿರುವ ಹಿಮ್ಸ್‌ನ ನವಜಾತ ಶಿಶುಗಳ ಐಸಿಯು ವಾರ್ಡಿನ ಹವಾ ನಿಯಂತ್ರಿತ ಸಿಲಿಂಡರ್‍‌ನ ಸ್ಟೆಬಿಲೈಸರ್ ಸ್ಫೋಟಗೊಂಡ ಪರಿಣಾಮ ಈ ಘಟನೆ ನಡೆದಿದೆ.

ವಾರ್ಡಿನಲ್ಲಿದ್ದ 24 ಶಿಶುಗಳನ್ನು ಕೂಡಲೇ ಬೇರೆಡೆಗೆ ಸ್ಥಳಾಂತರಿಸಿದ ಪರಿಣಾಮ ಹೆಚ್ಚಿನ ಅವಘಡ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನೆಯಿಂದಾಗಿ ನವಜಾತ ಶಿಶುಗಳ ಪೋಷಕರು ಆತಂಕಿತರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

hims news

ಈ ಬಗ್ಗೆ ಈ ದಿನ.ಕಾಮ್‌ ಜೊತೆಗೆ ಮಾತನಾಡಿದ ಹಿಮ್ಸ್‌ನ ವೈದ್ಯಕೀಯ ಅಧೀಕ್ಷಕ ಡಾ. ಕೃಷ್ಣಮೂರ್ತಿ, “ಮಧ್ಯಾಹ್ನ ಹವಾನಿಯಂತ್ರಿತ ಸಿಲಿಂಡರ್ ನ ಸ್ಟೆಬಿಲೈಸರ್ ಸ್ಫೋಟಗೊಂಡಿದೆ. ಇದರಿಂದ ವಾರ್ಡಿನಲ್ಲಿ ಹೊಗೆ ತುಂಬಿಕೊಂಡಿತ್ತು. ತತ್ ಕ್ಷಣವೇ ವಾರ್ಡ್ ನ ಕಿಟಕಿ ಬಾಗಿಲಿನ ಗಾಜುಗಳನ್ನು ಒಡೆದು ಐಸಿಯುನಲ್ಲಿದ್ದ 24 ನವಜಾತ ಶಿಶುಗಳು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಎಲ್ಲ ಶಿಶುಗಳು ಸುರಕ್ಷಿತವಾಗಿವೆ. ಪೋಷಕರು ಆತಂಕಿತರಾಗುವ ಅವಶ್ಯಕತೆ ಇಲ್ಲ” ಎಂದು ತಿಳಿಸಿದರು.

ಸ್ಥಳಕ್ಕೆ ಹಿಮ್ಸ್‌ನ ನಿರ್ದೇಶಕ ಡಾ.ರವಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...