ರಾಯಚೂರು | ಮುದಗಲ್‌ ಸರ್ಕಾರಿ ಆಸ್ಪತ್ರೆಯಲ್ಲಿ ವ್ಯೆದ್ಯರ ಕೊರತೆ; ರೋಗಿಗಳ ಪರದಾಟ

Date:

ಜನರ ಆರೋಗ್ಯ ಕಾಪಾಡಬೇಕಾದ ಲಿಂಗಸಗೂರು ತಾಲ್ಲೂಕಿನ ಮುದಗಲ್ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯೆದ್ಯರಿಲ್ಲ ರೋಗಗಸ್ಥವಾಗಿದ್ದು, ಇದರಿಂದ ರೋಗಿಗಳು ಚಿಕಿತ್ಸೆಗಾಗಿ ನಿತ್ಯ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಉಳ್ಳವರು ಖಾಸಗಿ ಆಸ್ಪತ್ರೆಗಳಿಗೆ ಹೋಗುತ್ತಾರೆ. ಆದರೆ, ಬಡವರಿಗೆ ಸರ್ಕಾರಿ ಆಸ್ಪತ್ರೆಗಳೇ ಗತಿ ಎಂಬಂತಾಗಿದೆ. ತುರ್ತು ಸಂದರ್ಭಗಳಲ್ಲಿ ಚಿಕಿತ್ಸೆಗೆ ಬಂದ ರೋಗಿಗಳಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಯಲ್ಲಿ ವೈದ್ಯರಿರುವುದಿಲ್ಲ. ಇದರಿಂದ ಕೆಲವರು ಜೀವ ಕಳೆದುಕೊಂಡ ಘಟನೆಗಳು ನಡೆದಿವೆ ಎಂಬ ಆರೋಪ ಜನರದ್ದು.

ಮುದಗಲ್ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4.30ರವರೆಗೆ ಮಾತ್ರ ವೈದ್ಯರಿರುತ್ತಾರೆ. ಸಂಜೆ ನಂತರ ರೋಗಿಗಳಿಗೆ ಚಿಕಿತ್ಸೆ ನೀಡುವರು ಗ್ರೂಪ್ ಡಿ ನೌಕರರು. ಆಸ್ಪತ್ರೆಯಲ್ಲಿ ರಾತ್ರಿ ವೇಳೆ ವ್ಯೆದ್ಯರ ಕೊರತೆ ಕಾಡುತ್ತಿದ್ದು, ರೋಗಿಗಳಿಗೆ ಸೂಕ್ತ ವ್ಯೆದ್ಯಕೀಯ ಸೇವೆ ಲಭಿಸುವುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುವ ಸರ್ಕಾರಿ ವೈದ್ಯರು ಖಾಸಗಿ ಕ್ಲಿನಿಕ್‌ ತೆರೆದಿದ್ದಾರೆ. ಆಸ್ಪತ್ರೆಗಿಂತ ಹೆಚ್ಚಿನ ಸಮಯ ತಮ್ಮ ಖಾಸಗಿ ಆಸ್ಪತ್ರೆಯಲ್ಲಿ ಕಳೆಯುತ್ತಾರೆ. ರೋಗಿಗಳನ್ನು ಸರ್ಕಾರಿ ಆಸ್ಪತ್ರೆಗಿಂತ ತಮ್ಮ ಖಾಸಗಿ ಕ್ಲಿನಿಕ್‌ಗೆ ಬರಬೇಕೆಂಬ ಉದ್ದೇಶವಿದೆ ಎನ್ನುವುದು ಸ್ಥಳೀಯರು ಹೇಳುತ್ತಾರೆ.

ಈ ಬಗ್ಗೆ ಚಂದಾವಲಿ ಎಂಬುವರು ಮಾತನಾಡಿ, ʼಹೊಲದಲ್ಲಿ ಮನೆ ಕಟ್ಟಿಸಿಕೊಂಡು ಜೀವನ ಸಾಗಿಸುತ್ತಿದ್ದೇನೆ. ಇತ್ತೀಚೆಗೆ ಆಕಸ್ಮಿಕವಾಗಿ ಜ್ವರ ಕಾಣಿಸಿಕೊಂಡಿತು, ತಕ್ಷಣ ಮುದಗಲ್ ಆಸ್ಪತ್ರೆಗೆ ತೆರಳಿದರೆ‌ ʼಡಾಕ್ಟರ್‌ ಇಲ್ಲʼ ಎಂದು ಡಿ ಗ್ರೂಪ್‌ ನೌಕರರೊಬ್ಬರು ಹೇಳಿದರು. ಹೀಗೆ ತುರ್ತು ಚಿಕಿತ್ಸೆಗೆಂದು ಹೋದರೆ ಯಾರೊಬ್ಬರೂ ವ್ಯೆದ್ಯರಿಲ್ಲದೇ ಇರುವುದು ವಿಪರ್ಯಾಸದ ಸಂಗತಿ. ಇದರಿಂದ ಸಾರ್ವಜನಿಕರು ಆಸ್ಪತ್ರೆಗೆ ರೋಗಿಗಳು ನಿತ್ಯ ಅಲೆದಾಡಬೇಕಾಗಿದೆʼ ಎಂದರು.

ಎಸ್‌ಡಿಪಿಐ ಮುಖಂಡ ರಫಿ ಕರಾಟೆ ಮಾತನಾಡಿ, ʼಆಸ್ಪತ್ರೆಯಲ್ಲಿ ಹಗಲಿನಲ್ಲೇ ಮಾತ್ರ ವೈದ್ಯರು ಸೇವೆಗೆ ಸಿಗುತ್ತಾರೆ. ರಾತ್ರಿಯಾದರೆ ಯಾರೊಬ್ಬರೂ ವ್ಯೆದ್ಯರು ಇರಲ್ಲ. ಸರ್ಕಾರಿ ವ್ಯೆದ್ಯರೇ ಖಾಸಗಿ ಆಸ್ಪತ್ರೆ ತೆರೆದು ಸ್ಕ್ಯಾನಿಂಗ್ ಸೇರಿದಂತೆ ವಿವಿಧ ಪರೀಕ್ಷೆಗಳ ಹೆಸರಿನಲ್ಲಿ ರೋಗಿಗಳಿಂದ ದುಬಾರಿ ಹಣ ಪಡೆದು ಮೋಸ ಮಾಡುತ್ತಿದ್ದಾರೆʼ ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? 5 ಎಕರೆ ಹಿಂತಿರುಗಿಸಲು ನಿರ್ಧರಿಸಿದ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಸಿದ್ಧಾರ್ಥ ವಿಹಾರ​ ಟ್ರಸ್ಟ್

ಮುದಗಲ್ ಪಟ್ಟಣದ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಜನರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಆಸ್ಪತ್ರೆ ನಿರ್ಮಿಸಲಾಗಿದೆ. ಆದರೆ ತುರ್ತು ಸಂದರ್ಭದಲ್ಲಿ ಹೋದರೆ ವ್ಯೆದ್ಯರ ಕೊರತೆ ಕಾಡುತ್ತಿದೆ. ಈ ಬಗ್ಗೆ ಚುನಾಯಿತ ಜನಪ್ರತಿನಿಧಿಗಳು, ಅಧಿಕಾರಿಗಳು ಕೂಡಲೇ ಗಮನಹರಿಸಿ ಅಗತ್ಯ ವ್ಯೆದ್ಯರ ನೇಮಕ ಮಾಡಬೇಕುʼ ಎಂದು ಆಗ್ರಹಿಸಿದರು.

mdrafi
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...