ಮತಕ್ಕಾಗಿ ಮಾತ್ರ ಮೋದಿ, ಯಡಿಯೂರಪ್ಪ ಮುಖ ತೋರಿಸುತ್ತೀರಿ: ಬಿಜೆಪಿ ವಿರುದ್ಧ ರೇಣುಕಾಚಾರ್ಯ ಮತ್ತೆ ವಾಗ್ದಾಳಿ

Date:

  • ರಾಜ್ಯಕ್ಕೆ ಹಾಗೂ ಬಿಜೆಪಿಗೆ ನಿಮ್ಮ ಕೊಡುಗೆ ಏನು?
  • ರಾಜ್ಯ ಪ್ರವಾಸ ಮಾಡಲು ಬಿಎಸ್‌ವೈ ಯಾಕೆ ಬೇಕು?

ಮತ ಪಡೆಯುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮುಖ ತೋರಿಸುತ್ತೀರಿ. ರಾಜ್ಯಕ್ಕೆ ಹಾಗೂ ಪಕ್ಷಕ್ಕೆ ನಿಮ್ಮ ಕೊಡುಗೆ ಏನು ಎಂದು ರಾಜ್ಯ ಬಿಜೆಪಿ ನಾಯಕರನ್ನು ಎಂಪಿ ರೇಣುಕಾಚಾರ್ಯ ಪ್ರಶ್ನಿಸಿದ್ದಾರೆ.

ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಪಕ್ಷದಿಂದ ಸಮನ್ಸ್​​ ಪಡೆದ ಬೆನ್ನಲ್ಲೇ ಎಂಪಿ ರೇಣುಕಾಚಾರ್ಯ ಮತ್ತೆ ವಾಗ್ದಾಳಿ ಮುಂದುವರಿಸಿದ್ದಾರೆ.

ಶನಿವಾರ ಬೆಂಗಳೂರಿನಲ್ಲಿ ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿ ಅವರನ್ನು ಭೇಟಿಯಾದ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ನನ್ನ ಹೋರಾಟ ಹಾಗೂ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಮಗೆ ಅಪಮಾನ ಮಾಡಿದವರ ಬಗ್ಗೆ ಸುಮ್ಮನಿರಲು ಆಗುವುದಿಲ್ಲ ಎಂದು ಯಡಿಯೂರಪ್ಪ ಅವರಿಗೆ ಹೇಳಿದ್ದೇನೆ. ಅವರಿಗೆ ವಯಸ್ಸಾಯಿತು ಎಂದು ಅಧಿಕಾರದಿಂದ ಕೆಳಗಿಳಿಸಲಾಯಿತು. ಹಾಗಿದ್ದರೆ ರಾಜ್ಯ ಪ್ರವಾಸ ಮಾಡಲು ಯಡಿಯೂರಪ್ಪ ಯಾಕೆ ಬೇಕು?” ಎಂದು ಹರಿಹಾಯ್ದರು.

“ಯಡಿಯೂರಪ್ಪ ಅವರ ಮಾತಿಗೆ ಯಾವಾಗಲೂ ಗೌರವ ಇದೆ. ಇನ್ಮುಂದೆ ಬಹಿರಂಗವಾಗಿ ಎಲ್ಲ ವಿಚಾರ ಮಾತಾಡುವುದಿಲ್ಲ. ಹಾಗಂತ ನನ್ನನ್ನು ಟಾರ್ಗೆಟ್ ಮಾಡಲು ಯಾರಿಂದಲೂ ಆಗಲ್ಲ. ನನಗೆ ಯಡಿಯೂರಪ್ಪ, ನರೇಂದ್ರ ಮೋದಿ ಹಾಗೂ ಪಕ್ಷದ ಆಶೀರ್ವಾದವಿದೆ. ಯಾರಿಗೂ ಹೆದರುವುದಿಲ್ಲ, ನನ್ನನ್ನು ತುಳಿಯಲು ಯಾರಿಂದಲೂ ಆಗಲ್ಲ” ಎಂದು ಪರೋಕ್ಷವಾಗಿ ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...