ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ಕೇಂದ್ರ ಸರ್ಕಾರದ ಶ್ರಮಶಕ್ತಿ ನೀತಿ -2025 ಕರಡು ಪ್ರತಿಯನ್ನು ದಹಿಸಿ ಪ್ರತಿಭಟಿಸುವ ಸಿಐಟಿಯು ರಾಜ್ಯ ಸಮಿತಿ ಕರೆಯನ್ನು ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯಿತು.
ಸಿಐಟಿಯು ಜಿಲ್ಲಾ ಅಧ್ಯಕ್ಷರಾದ ಶಶಿಧರ ಗೊಲ್ಲ ಹಾಗೂ ಇಂಟಕ್ ಜಿಲ್ಲಾಧ್ಯಕ್ಷ ಕಿರಣ್ ಹೆಗ್ಡೆ ಅವರು ಕರಡು ಪ್ರತಿಯನ್ನು ಸುಡುವುದರ ಮೂಲಕ ಮೋದಿ ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ವಿ, ಜಿಲ್ಲಾ ಕೋಶಾಧಿಕಾರಿ ಕವಿರಾಜ್ ಎಸ್ ಕಾಂಚನ್, ಕಟ್ಟಡ ಕಾರ್ಮಿಕರ ಸಂಘಟನೆಯ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ನಾಯಕ್, ಉಮೇಶ್ ಕುಂದರ್, ಮೋಹನ ಉಡುಪಿ, ಸುನಂದ ಮೊದಲಾದವರು ಭಾಗವಹಿಸಿದ್ದರು.





