ಶ್ರೀರಂಗಪಟ್ಟಣ | ಕರಿಘಟ್ಟದಲ್ಲಿ ಶೇಷಾದ್ರಿಪುರಂ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ಶ್ರಮದಾನ

Date:

ಪುರಾತನವಾದ ಗುಡಿಗಳು ಹಾಗೂ ಮಂಟಪಗಳು ಮತ್ತು ಅಲ್ಲಿನ ಪರಿಸರವನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ. ಪ್ಲಾಸ್ಟಿಕ್‌ನಿಂದ ಪರಿಸರ ಮಾಲಿನ್ಯವಾಗುತ್ತಿದೆ. ಪ್ಲಾಸ್ಟಿಕ್‌ ಬಳಕೆಯನ್ನು ಆದಷ್ಟು ಕಡಿಮೆ ಮಾಡಬೇಕು ಎಂದು ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಘವೇಂದ್ರ ತಿಳಿಸಿದರು.

ಭಾನುವಾರ, ಶ್ರೀರಂಗಪಟ್ಟಣ ಬಳಿಯ ಕರಿಘಟ್ಟದಲ್ಲಿ ಮೈಸೂರಿನ ಕಡಕೋಳ ಶೇಷಾದ್ರಿಪುರಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ರೋಟರಿ ಸಂಸ್ಥೆ, ಶ್ರೀರಂಗಪಟ್ಟಣ ಮತ್ತು ಅಚೀವರ್ಸ್ ಅಕಾಡೆಮಿ ಆಯೋಜಿಸಿದ್ದ ‘ಸದೃಢ ದೇಹ – ಪ್ಲಾಸ್ಟಿಕ್ ಮುಕ್ತ ಪರಿಸರ’ ಅಭಿಯಾನ (ಪ್ಲಾಸ್ಟಿಕ್ ಮುಕ್ತ ಕರಿಘಟ್ಟ) ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. “ಪರಿಸರವನ್ನು ಉಳಿಸಿ ಉತ್ತಮವಾದ ವಾತಾವರಣ ನಿರ್ಮಾಣ ಆಗಬೇಕು. ಇದಕ್ಕೆ ಎಲ್ಲ ಸಾರ್ವಜನಿಕರು ಕೈ ಜೋಡಿಸಬೇಕು. ಪ್ಲಾಸ್ಟಿಕ್‌ನಿಂದ ಪರಿಸರ ತುಂಬಾ ಹಾಳಾಗುತ್ತಿದೆ. ಕರಿಘಟ್ಟಕ್ಕೆ ಬರುವ ಪ್ರವಾಸಿಗರು ಪ್ಲಾಸ್ಟಿಕ್ ಕವರುಗಳನ್ನು ಎಲ್ಲೆಂದರಲ್ಲಿ ಬಿಸಾಡದೆ, ಕಸದ ತೊಟ್ಟಿಯಲ್ಲಿ ಹಾಕಬೇಕು” ಎಂದು ಹೇಳಿದರು.

ಕಾಲೇಜುಗಳ ವಿದ್ಯಾರ್ಥಿಗಳು ಕರಿಘಟ್ಟ ಗುಡಿಯ ಪಕ್ಕದಲ್ಲಿರುವ ಪುರಾತನ ಮಂಟಪದ ಸುತ್ತ ಬೆಳೆದಿದ್ದ ಗಿಡ ಗಂಟೆಗಳನ್ನು ಕತ್ತರಿಸಿ ಸ್ವಚ್ಛ ಮಾಡದರು. ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತೆರವುಗೊಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಭಿಯಾನದಲ್ಲಿ ಕಾಲೇಜು ವಿದ್ಯಾರ್ಥಿಗಳಾದ ಕರ್ಣ, ಹೃದಯ್, ದರ್ಶನ್, ಪುನೀತ್, ಅನನ್ಯ, ಧನುಷ್, ಪೂರ್ವಜ್, ಮನು, ಪಾಲಹಳ್ಳಿ ರವಿ, ಇನ್ನು ಮುಂತಾದವರು ಸೇರಿ ಈ ಶ್ರಮದಾನದಲ್ಲಿ ಪಾಲ್ಗೊಂಡರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...