ಶ್ರಾವಣ ಮಾಸ | ಜು.24 ರಿಂದ ಬೀದರ್ ಜಿಲ್ಲೆಯ 22 ಕಡೆಗಳಲ್ಲಿ ಪ್ರವಚನ : ಬಸವಲಿಂಗ ಪಟ್ಟದ್ದೇವರು

Date:

ಶ್ರಾವಣ ಮಾಸದ ಅಂಗವಾಗಿ ಪಟ್ಟಣ ಸೇರಿ ಬೀದರ್ ಜಿಲ್ಲೆಯಲ್ಲದೇ ನೆರೆಯ ರಾಜ್ಯದ 22 ಕಡೆಗಳಲ್ಲಿ ಪ್ರವಚನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ತಿಳಿಸಿದರು.

ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಬಸವಕಲ್ಯಾಣ ಅನುಭವ ಮಂಟಪದ ವತಿಯಿಂದ ಪ್ರವಚನ ಆಯೋಜಿಸಲಾಗುತ್ತಿದ್ದು ಜು.24 ರಿಂದ ಎಲ್ಲ ಕಡೆಗಳಲ್ಲಿ ಪ್ರವಚನ
ಉದ್ಘಾಟನೆಗೊಳ್ಳಲಿದೆ. ಮಠಾಧೀಶರು, ಉಪನ್ಯಾಸಕರು, ಸಾಹಿತಿಗಳು, ಶಿಕ್ಷಕರು ವಿವಿಧ ವಿಷಯಗಳ ಮೇಲೆ ಪ್ರವಚನದ ಮೂಲಕ ಜ್ಞಾನದ ದಾಸೋಹ ಉಣಬಡಿಸಲಿದ್ದಾರೆ ಭಕ್ತರು ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

ʼಭಕ್ತರಲ್ಲಿನ ಅಜ್ಞಾನ ಕಳೆದು ಬಸವ ಜ್ಞಾನ, ಬಸವ ಭಕ್ತಿ, ಬಸವ ಬೀಜ ಬಿತ್ತುವುದು, ಸಕಾರಾತ್ಮಕ ಚಿಂತನೆಗಳನ್ನು ಬೆಳೆಸುವ
ಸದಾಶಯದೊಂದಿಗೆ ಜಿಲ್ಲೆಯ ವಿವಿಧೆಡೆ ಶ್ರಾವಣ ಮಾಸ ಪ್ರವಚನದ ಏರ್ಪಡಿಸಲಾಗುತ್ತಿದೆ. ಜಿಲ್ಲೆಯ ಸದ್ಭಕ್ತರು ಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡೆದು ಕೊಳ್ಳಬೇಕು’ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ʼಭಾಲ್ಕಿ ಪಟ್ಟಣದಲ್ಲಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ತಿಂಗಳ ಪರ್ಯಂತ ನಡೆಸಿ ಕೊಡುವ ವಚನ ದರ್ಶನ ಪ್ರವಚನದ ಜತೆಗೆ ಬಸವ ಪಂಚಮಿ, ರಕ್ಷಾ ಬಂಧನ, ಸ್ವಾತಂತ್ರ‍್ಯ ದಿನಾಚರಣೆ, ಸುದೈವಿ ಮಕ್ಕಳ ಜನ್ಮದಿನ ಸೇರಿದಂತೆ ವಿವಿಧ ಅರ್ಥಪೂರ್ಣ ಕಾರ್ಯಕ್ರಮಗಳು ಜರುಗಲಿವೆʼ ಎಂದು ಹೇಳಿದರು.

ʼಭಾಲ್ಕಿ ಪಟ್ಟಣದಲ್ಲಿ ಕಳೆದ ನಾಲ್ಕು ದಶಕಗಳಿಂದ ಶ್ರಾವಣ ಮಾಸದಲ್ಲಿ ನಿರಂತರವಾಗಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಪ್ರವಚನ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದಾರೆ. ಬಸವಲಿಂಗ ಪಟ್ಟದ್ದೇವರು ಬಸವಾದಿ ಶರಣರ ಕುರಿತು ಕಳೆದ ನಾಲ್ಕು ದಶಕದಿಂದ ಪ್ರವಚನ ನಡೆಸಿಕೊಂಡು ಬರುತ್ತಿದ್ದಾರೆ. ಈ ಬಾರಿಯು ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಪೂಜ್ಯರು ಪ್ರತಿದಿನ ವಚನ ದರ್ಶನ ವಿಷಯದ ಮೇಲೆ ಬೆಳಕು ಚೆಲ್ಲಲ್ಲಿದ್ದಾರೆʼ ಎಂದು ಮಾಹಿತಿ ನೀಡಿದರು.

ಜು.25ಕ್ಕೆ ಪ್ರವಚನ ಉದ್ಘಾಟನೆಗೊಳ್ಳಲಿದ್ದು ಪ್ರತಿದಿನ ಸಾಯಂಕಾಲ 6 ರಿಂದ 7 ಗಂಟೆ ವರೆಗೆ ಪ್ರವಚನದ ಮೂಲಕ ಅಧ್ಯಾತ್ಮದ ಜ್ಞಾನವನ್ನು ಧಾರೆಯೆರಿಯಲ್ಲಿದ್ದಾರೆ. ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ : ಆಪರೇಷನ್ ಸಿಂಧೂರ, ಪಹಲ್ಗಾಮ್ ದಾಳಿ ಬಗ್ಗೆ ಲೋಕಸಭೆಯಲ್ಲಿ 16 ಗಂಟೆಗಳ ಚರ್ಚೆಗೆ ಕೊನೆಗೂ ಸರ್ಕಾರ ಅಸ್ತು

ಸುದ್ದಿಗೋಷ್ಠಿಯಲ್ಲಿ ಮಹಾಲಿಂಗ ಸ್ವಾಮೀಜಿ, ಪ್ರವಚನ ಸೇವಾ ಸಮಿತಿ ಅಧ್ಯಕ್ಷ ಗುಂಡಪ್ಪ ಸಂಗಮಕರ್ ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...