ಸಿದ್ದಾಪುರ | 112 ಸಿಬ್ಬಂದಿಯ ಸಮಯಪ್ರಜ್ಞೆ; ತಪ್ಪಿದ ಭಾರಿ ಅನಾಹುತ

Date:

ಸಿದ್ದಾಪುರ: ತಾಲೂಕಿನ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ನಡೆದಿದ್ದು, ಈ ವೇಳೆ ರಸ್ತೆಗೆ ಚೆಲ್ಲಿದ್ದ ಡೀಸೆಲ್‌ನಿಂದ ಉಂಟಾಗಬಹುದಾಗಿದ್ದ ದೊಡ್ಡ ಅನಾಹುತವನ್ನು 112 ತುರ್ತು ಸೇವೆಯ ಸಿಬ್ಬಂದಿಗಳು ಸಮಯಪ್ರಜ್ಞೆ ಮೆರೆಯುವ ಮೂಲಕ ತಪ್ಪಿಸಿದ್ದಾರೆ.

ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಲಾರಿ ರಸ್ತೆಗೆ ಉರುಳಿದ ರಭಸಕ್ಕೆ ಅದರ ಇಂಧನ ಟ್ಯಾಂಕ್ ಒಡೆದು ರಸ್ತೆಯುದ್ದಕ್ಕೂ ಡೀಸೆಲ್ ಹರಡಿತ್ತು.

ಇದರಿಂದಾಗಿ ಇಡೀ ರಸ್ತೆ ಜಾರುವಂತಾಗಿದ್ದು, ದ್ವಿಚಕ್ರ ವಾಹನ ಸವಾರರು ಸ್ಕಿಡ್ ಆಗಿ ಬೀಳುವ ಹಾಗೂ ಇತರ ವಾಹನಗಳು ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗುವ ಭೀತಿ ಎದುರಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ 112 ತುರ್ತು ವಾಹನದ ಚಾಲಕ ಅರುಣ ರಾವಳ ಹಾಗೂ ಸಿಬ್ಬಂದಿ ವಿನಾಯಕ್ ಎಲ್ ಅವರು ತಕ್ಷಣವೇ ಕಾರ್ಯಪ್ರವೃತ್ತರಾಗಿ. ಪರಿಸ್ಥಿತಿಯ ಗಂಭೀರತೆಯನ್ನು ಅರಿತು ರಸ್ತೆಗೆ ಮಣ್ಣು ಹಾಗೂ ನೀರನ್ನು ಸಿಂಪಡಿಸಿ, ಜಾರುತ್ತಿದ್ದ ರಸ್ತೆಯನ್ನು ಸ್ವಚ್ಛಗೊಳಿಸಿ ಸವಾರರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಸುದ್ದಿ ಓದಿದ್ದೀರಾ? ಯಲ್ಲಾಪುರ | ಗ್ರಾಮದೇವಿ ಜಾತ್ರೆ: ಭಕ್ತರ ಪಾಲಿಗೆ ‘ಆಪತ್ಬಾಂಧವ’ರಾದ ಪೊಲೀಸರು; ಜನಸ್ನೇಹಿ ಕಾರ್ಯಕ್ಕೆ ಸಾರ್ವಜನಿಕ ಪ್ರಶಂಸೆ

ಪೊಲೀಸ್ ಸಿಬ್ಬಂದಿಯ ಈ ತ್ವರಿತ ಸ್ಪಂದನೆ ಮತ್ತು ಜನಸ್ನೇಹಿ ಕಾರ್ಯಕ್ಕೆ ಸಾರ್ವಜನಿಕ ವಲಯ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...