ಚಾಮುಂಡೇಶ್ವರಿಗೆ ಹರಕೆ ತೀರಿಸಿದ ಸಿಎಂ-ಡಿಸಿಎಂ: ನಾಳೆ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಚಾಲನೆ

Date:

  • ಚಾಮುಂಡೇಶ್ವರಿಗೆ ಗೃಹಲಕ್ಷ್ಮೀ ಯೋಜನೆಯ 2000 ರೂ. ಕಾಣಿಕೆ
  • ನಾಳೆ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮಕ್ಕೆ ಮೈಸೂರಿನಲ್ಲಿ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಸೇರಿ ಮೈಸೂರಿನ ಚಾಮುಂಡೇಶ್ವರಿ ದೇವಿಗೆ ಮಂಗಳವಾರ ಹಸಿರು ಮತ್ತು ಕೆಂಪು ಸೀರೆ, ಕನಕಾಂಬರ, ಮಲ್ಲಿಗೆ, ಗುಲಾಬಿ ಹೂವಿನ ಹಾರ ಹಾಗೂ ಫಲ ಸಮರ್ಪಣೆ ಮಾಡುವ ಮೂಲಕ ಹೊತ್ತುಕೊಂಡಿದ್ದ ಹರಕೆ ತೀರಿಸಿದ್ದಾರೆ.

ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಸರ್ಕಾರ ಅಧಿಕಾರಿಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮಾಡುವುದಾಗಿ ಮೇ 9ರಂದು ಚಾಮುಂಡೇಶ್ವರಿ ಎದುರು ಇಬ್ಬರು ನಾಯಕರು ವಾಗ್ದಾನ ಮಾಡಿದ್ದರು. ಇದೀಗ ಆ ಬೇಡಿಕೆ ಈಡೇರಿದ್ದರಿಂದ ಹರಕೆ ತೀರಿಸಿದ್ದಾರೆ.

ಚಾಮುಂಡೇಶ್ವರಿಗೆ ಮೊದಲ ಗೃಹಲಕ್ಷ್ಮೀ ಯೋಜನೆಯ 2000 ರೂಪಾಯಿಯನ್ನು ಕಾಣಿಕೆ ಸಂದಾಯ ಮಾಡಿದರು. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಅವರು ತಲಾ 2 ಸಾವಿರ ರೂ. ಕಾಣಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಾಮುಂಡೇಶ್ವರಿ ದರ್ಶನ ಬಳಿಕೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಮೇ 9ರಂದು ನಾನು ಮತ್ತು ಡಿಕೆ ಶಿವಕುಮಾರ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದೆವು. 5 ಗ್ಯಾರಂಟಿ ಜಾರಿಗೊಳಿಸುವುದಾಗಿ ಹರಕೆ ಹೊತ್ತಿದ್ದೆವು. ಅದರಂತೆ ಇದೀಗ ಇಂದು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದ್ದೇವೆ. ನಾಳೆ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದೇವೆ” ಎಂದರು.‌

ಈ ಸುದ್ದಿ ಓದಿದ್ದೀರಾ? ಸಂಗೀತ ನಿರ್ದೇಶಕ ಹಂಸಲೇಖರಿಂದ ಈ ಬಾರಿ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

“ಚಾಮುಂಡೇಶ್ವರಿ ದೇವಿ ಮುಂದೆ ಗ್ಯಾರಂಟಿ ಕಾರ್ಡ್​ ಇಟ್ಟು ಬೇಡಿಕೊಂಡಿದ್ದೆವು. ಗೃಹಲಕ್ಷ್ಮೀ ಯೋಜನೆ ಅನುಷ್ಠಾನಕ್ಕೆ ಶಕ್ತಿ ಕೊಡುವಂತೆ ಬೇಡಿಕೊಂಡಿದ್ದೆವು. ಈಗ ಗೃಹಲಕ್ಷ್ಮೀ ಯೋಜನೆ ಜಾರಿಯಾಗುತ್ತಿದೆ. ಹೀಗಾಗಿ ಇಂದು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದೇವೆ” ಎಂದು ಡಿಕೆ ಶಿವಕುಮಾರ್ ತಿಳಿಸಿದರು.

“ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಚಾಮುಂಡೇಶ್ವರಿಯ ನೆಲದಲ್ಲೇ ಕಾರ್ಯಕ್ರಮ ಮಾಡುತ್ತಿದ್ದೇವೆ. ವಿಶೇಷ ರೀತಿಯಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ನಡೆಯುತ್ತಿದ್ದು, 12,600 ಕಡೆ ನೇರ ಪ್ರಸಾರದ ಮೂಲಕ‌ ಕಾರ್ಯಕ್ರಮ ನಡೆಯಲಿದೆ” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...