ಐಪಿಎಲ್‌ ವೀಕ್ಷಿಸಿದ ಸಿದ್ದರಾಮಯ್ಯ | ‘ಕನ್ನಡಿಗನಾಗಿ ನನ್ನ ಬೆಂಬಲ‌ ಯಾವಾಗಲೂ ಆರ್‌ಸಿಬಿಗೆ’

Date:

  • ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ-ಎಂಐ ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ
  • ನಮ್ಮವರೂ ಕಪ್ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ

ಮೂರು ವರ್ಷದ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಪಂದ್ಯವನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವೀಕ್ಷಿಸಿದರು.

ಐಪಿಎಲ್‌ 16ನೇ ಆವೃತ್ತಿಯಲ್ಲಿ ಭಾನುವಾರ ರಾತ್ರಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾದವು.

ಕ್ರಿಕೆಟ್‌ ವೀಕ್ಷಿಸುತ್ತ ಟ್ವೀಟ್‌ ಮಾಡಿದ ಸಿದ್ದರಾಮಯ್ಯ, “ಕ್ರಿಕೆಟ್ ನನ್ನ ಇಷ್ಟದ ಆಟ, ಆರ್‌ಸಿಬಿ ನನ್ನ ಹೆಮ್ಮೆಯ ತಂಡ. ನನ್ನಂತಹ ಕೋಟ್ಯಾಂತರ ಅಭಿಮಾನಿಗಳ ಹಾರೈಕೆ ಆರ್‌ಸಿಬಿ ಹುಡುಗರ ಜೊತೆಗಿದೆ. ಇಂದಲ್ಲ ನಾಳೆ ನಮ್ಮವರೂ ಕಪ್ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ. ಓರ್ವ ಕನ್ನಡಿಗನಾಗಿ ನನ್ನ ಬೆಂಬಲ‌ ಯಾವಾಗಲೂ ನಮ್ಮ ಆರ್‌ಸಿಬಿಗೆ” ಎಂದು ಶುಭಹಾರೈಸಿದರು.

ರಾಜ್ಯ ವಿಧಾನಸಭಾ ಚುನಾವಣೆ ಕಾವು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ರಾಜ್ಯದ ಪ್ರಮುಖ ಮೂರು ಪಕ್ಷಗಳ ನಾಯಕರು ತಮ್ಮ ಪಕ್ಷಗಳ ಪರ ನಿರಂತರ ಪ್ರಚಾರ ನಡೆಸುತ್ತಿದ್ದಾರೆ. ಈ ಎಲ್ಲ ಒತ್ತಡಗಳ ನಡುವೆಯೂ ಸಿದ್ದರಾಮಯ್ಯ ಜೊತೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಸಚಿವ ಬಸವರಾಜ ರಾಯರೆಡ್ಡಿ, ಶಾಸಕ ಪ್ರಕಾಶ್‌ ರಾಥೋಡ್‌ ಪಂದ್ಯ ವೀಕ್ಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಐಪಿಎಲ್‌ 2023 | ತುಷಾರ್​ ದೇಶಪಾಂಡೆ ಐಪಿಎಲ್‌ನ ಮೊತ್ತಮೊದಲ ʻಇಂಪ್ಯಾಕ್ಟ್‌ ಪ್ಲೇಯರ್‌ʼ

ಆರ್‌ಸಿಬಿಗೆ ಜಯ

ಆತಿಥೇಯ ಆರ್​​ಸಿಬಿ ತಂಡ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು 8 ವಿಕೆಟ್‌ಗಳ ಅಂತರದಲ್ಲಿ ಮಣಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ, ತಿಲಕ್ ವರ್ಮಾ ಅವರ ಏಕಾಂಗಿ ಹೋರಾಟದ [84*] ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟದಲ್ಲಿ 171 ರನ್‌ ಗಳಿಸಿತ್ತು.

ಆದರೆ ಚೇಸಿಂಗ್ ವೇಳೆ ಆರ್​​ಸಿಬಿಗೆ 171 ರನ್ ಸವಾಲಾಗಲೇ ಇಲ್ಲ. ಆರಂಭಿಕರಾದ ವಿರಾಟ್ ಕೊಹ್ಲಿ ಮತ್ತು ನಾಯಕ ಫಾಫ್ ಡುಪ್ಲೆಸಿ ಮೊದಲ ವಿಕೆಟ್‌ಗೆ 15 ಓವರ್‌ಗಳಲ್ಲಿ 148 ರನ್‌ಗಳಿಸುವ ಮೂಲಕ ಮುಂಬೈ ಬೌಲಿಂಗ್ ದಾಳಿಯನ್ನು ಧೂಳಿಪಟ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...