ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚು ಅನುದಾನಕ್ಕೆ ಪ್ರಾಮಾಣಿಕ ಪ್ರಯತ್ನ: ಸಚಿವ ಝಮೀರ್ ಭರವಸೆ

Date:

ಕಾಂಗ್ರೆಸ್ ಸರ್ಕಾರ ಎಲ್ಲ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ ಬದ್ಧವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜತೆ ಚರ್ಚಿಸಿ ಸಮುದಾಯದ ಬೇಡಿಕೆಗೆ ಸ್ಪಂದಿಸಲಾಗುವುದು. ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚು ಅನುದಾನ ಸಿಗುವಂತಾಗಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಝಮೀರ್ ಅಹ್ಮದ್ ಖಾನ್ ಭರವಸೆ ನೀಡಿದರು.

ಬೆಂಗಳೂರಿನ ವಸಂತ ನಗರದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಝಾದ್ ಭವನದಲ್ಲಿ ಇಂದು ಸಚಿವರು ಇಲಾಖೆಯ ಉನ್ನತಮಟ್ಟದ ಅಧಿಕಾರಿಗಳ ಜೊತೆಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಿದರು. ಆ ಬಳಿಕ ತಮ್ಮನ್ನು ಭೇಟಿಯಾದ ಕ್ರೈಸ್ತ, ಸಿಖ್, ಬೌದ್ಧ ಹಾಗೂ ಜೈನ, ಮುಸ್ಲಿಂ ಸಮುದಾಯದ ಮುಖಂಡರ ಜತೆ ಸಭೆ ನಡೆಸಿದರು.

zameer3

ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ನಿಗಮ ಸ್ಥಾಪನೆ ಮಾಡಿರುವಂತೆ ಜೈನ, ಬೌದ್ಧ ಹಾಗೂ ಸಿಖ್ ಸಮುದಾಯದ ಅಭಿವೃದ್ಧಿಗೆ ನಿಗಮ ಅಥವಾ ಮಂಡಳಿ ಸ್ಥಾಪನೆ ಮಾಡುವಂತೆ ಸಮುದಾಯದ ಮುಖಂಡರು ಮನವಿ ಮಾಡಿದರು. ಜತೆಗೆ ಬಜೆಟ್ ನಲ್ಲಿ ಸಮುದಾಯದ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡುವಂತೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ನಿರೀಕ್ಷೆ: ಡಿ ಕೆ ಶಿವಕುಮಾರ್

ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ಝಮೀರ್ ಅಹಮದ್ ಖಾನ್, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಲ್ಲ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ ಬದ್ಧವಾಗಿದೆ. ಮುಖ್ಯಮಂತ್ರಿಯವರ ಜತೆ ಚರ್ಚಿಸಿ ಎಲ್ಲ ಬೇಡಿಕೆಗೆ ಸ್ಪಂದಿಸಲಾಗುವುದು. ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚು ಅನುದಾನಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್ ಅಹಮದ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶಕ ಜೀಲಾನಿ ಹೆಚ್ ಮೊಕಾಶಿ ಸೇರಿದಂತೆ ಹಲವು ಉನ್ನತಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

zamm
zameer2
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...