ಸಿಂದಗಿ | ದಲಿತ ವ್ಯಕ್ತಿ ಮಹದೇವಪ್ಪ ಹರಿಜನ ಹತ್ಯೆ ಖಂಡಿಸಿ ಕಾಲ್ನಡಿಗೆ ಜಾಥಾ ಆರಂಭಿಸಿದ ದಸಂಸ

Date:

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನ್ನೆಟ್ಟಿ ಗ್ರಾಮದಲ್ಲಿ ಕೃಷಿ ಜಮೀನು ವಿಚಾರವಾಗಿ ನಡೆದ ಹತ್ಯೆಯನ್ನು ಖಂಡಿಸಿ, ದಲಿತ ಸಂಘರ್ಷ ಸಮಿತಿ ಕಾಲ್ನಡಿಗೆ ಜಾಥಾ ಆರಂಭಿಸಿದೆ. ದಲಿತ ಸಮುದಾಯದ ಮಹದೇವಪ್ಪ ಹರಿಜನ ಪೂಜಾರಿ ಕೊಲೆಯ ವಿರುದ್ಧ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಈ ಹೋರಾಟ ಆರಂಭವಾಗಿದೆ.

ದಸಂಸ ಜಿಲ್ಲಾ ಸಂಚಾಲಕ ಶರಣು ಶಿಂಧೆ ಮಾತನಾಡಿ, “ಜಾಥಾ ಶನಿವಾರ ಸಿಂದಗಿ ಪಟ್ಟಣಕ್ಕೆ ಪ್ರವೇಶಿಸಿ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ತಾಲೂಕು ಆಡಳಿತ ಸೌಧ ತಲುಪಲಿದೆ. ನಂತರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ, ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು” ಎಂದರು.

ಇನ್ನೋರ್ವ ಸಂಚಾಲಕ ಚಂದ್ರಕಾಂತ ಸಿಂಗೆ ಮಾತನಾಡಿ, “ಕೊಲೆಗೈದು ನಾಲ್ಕು ತಿಂಗಳು (ಮೇ.31) ಗತಿಸಿದರೂ ಆರೋಪಿಗಳನ್ನು ಹಿಡಿಯುವಲ್ಲಿ ಪೊಲೀಸ್‌ ಇಲಾಖೆ ವಿಫಲವಾಗಿದೆ. ಯಾರನ್ನಾದರೂ ರಕ್ಷಿಸೋಕೆ ಇಲಾಖೆ ನಿಂತಂತಿದೆ ಎನ್ನುವ ಗುಮಾನಿ ಮೂಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಸಿಂದಗಿ | ಮುಂದುವರೆದ ಸೂರಿಲ್ಲದವರ ಸತ್ಯಾಗ್ರಹ

ಪ್ರತಿಭಟನೆಯಲ್ಲಿ ಶ್ರೀನಿವಾಸ ಓಲೆಕಾರ, ಪರಶುರಾಮ ದಂಡಿವಾರ, ಲಕ್ಕಪ್ಪ ಬಡಿಗೇರ, ಪ್ರಕಾಶ್ ಗುಡಿಮನಿ, ಮಂಜುನಾಥ ಎಂಟಮಾನ, ಪರಶುರಾಮ ಕಾಂಬಳೆ, ರವಿ ಆಲಹಳ್ಳಿ, ಧರ್ಮಣ್ಣ ಎಂಟಮಾನ, ಬಸು ತಳಕೆರಿ, ಶಬ್ಬೀರ್ ಪಟೇಲ, ರಾಜು ಸಿಂದಗೇರಿ, ಶಿವು ವಾಲಿಕಾರ, ಶ್ರೀಶೈಲ ಬೂದಿಹಾಳ ಜಾಥಾ ನೇತೃತ್ವ ವಹಿಸಿದ್ದರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಪೊಲೀಸ್‌ ಇಲಾಖೆ ವಿರುದ್ಧ ಘೋಷಣೆ ಕೂಗಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...