ಸಿಂದಗಿ | ʼಬಸವ ಜಯಂತಿʼ ಆಚರಣೆಗೆ ಭರದ ಸಿದ್ಧತೆ; ಶಾಸಕ ಅಶೋಕ್‌ ಮನಗೂಳಿ ಮಾಹಿತಿ

Date:

ಈ ಬಾರಿಯ ಬಸವ ಜಯಂತಿಯ ಭವ್ಯ ಆಚರಣೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಏಪ್ರಿಲ್ 30 ರಂದು ಬೆಳಗ್ಗೆ 10 ಗಂಟೆಗೆ ಸಿಂದಗಿ ನಗರದ ಬಸವೇಶ್ವರ ವೃತ್ತದಲ್ಲಿ ಸಾರಂಗಮಠದ ಡಾ. ಪ್ರಭು ಸಾರಂಗ ದೇವ ಶಿವಾಚಾರ್ಯರ ಸಾನಿಧ್ಯದಲ್ಲಿ ಧ್ವಜಾರೋಹಣ ನಡೆಯಲಿದೆ ಎಂದು ಸಿಂದಗಿ ಶಾಸಕ ಅಶೋಕ್‌ ಮನಗೂಳಿ ಮಾಹಿತಿ ನೀಡಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಬಸವ ಮಂಟಪದಲ್ಲಿ ಬಸವ ಜಯಂತಿ ಪ್ರಯುಕ್ತ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಧ್ವಜಾರೋಹಣದ ಬಳಿಕ, ಬಸವೇಶ್ವರ ವೃತ್ತದಿಂದ ಭವ್ಯ ಮೆರವಣಿಗೆ ಆರಂಭವಾಗಲಿದೆ. ಈ ಮೆರವಣಿಗೆ ಸ್ವಾಮಿ ವಿವೇಕಾನಂದ ವೃತ್ತ, ಟಿಪ್ಪು ಸುಲ್ತಾನ್ ವೃತ್ತ, ಡಾ. ಬಿ. ಆರ್. ಅಂಬೇಡ್ಕರ್ ವೃತ್ತ ಮತ್ತು ಅಂಬಿಗರ ಚೌಡಯ್ಯ ವೃತ್ತಗಳ ಮೂಲಕ ಸಾಗುತ್ತಾ, ಬಸವ ಮಂಟಪದಲ್ಲಿ ಸಮಾಪ್ತಿಯಾಗಲಿದೆ. ಮೆರವಣಿಗೆ ನಂತರ, ಸಾಯಂಕಾಲ ಬಸವ ಮಂಟಪದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಸವ ತತ್ವಗಳ ಕುರಿತು ಉಪನ್ಯಾಸಗಳು ಮತ್ತು ಸ್ಮರಣಾರ್ಥ ಉತ್ಸವಗಳನ್ನೂ ಆಯೋಜಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ನೀರು ಮತ್ತು ಉಪಹಾರದ ವ್ಯವಸ್ಥೆ ಮಾಡಲಾಗುತ್ತದೆ. ಸಕಲ ರಾಜ್ಯ ವೈಭವಗಳೊಂದಿಗೆ ಹಾಗೂ ವಿವಿಧ ಕಲಾ ತಂಡಗಳೊಂದಿಗೆ ಭವ್ಯ ಮೆರವಣಿಗೆ ಜರುಗಲಿದೆ. ಎಲ್ಲ ಸಮಾಜದ ಬಾಂಧವರು ಬಸವ ಜಯಂತಿಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ:ವಿಜಯಪುರ | ನರ್ಸಿಂಗ್ ವಿದ್ಯಾರ್ಥಿಗಳಿಂದ ಹಣ ವಸೂಲಿ; ಕ್ರಮಕ್ಕೆ ಒತ್ತಾಯ

ಈ ವೇಳೆ ಬಸವದಳದ ಅಧ್ಯಕ್ಷ ಮಲ್ಲಿಕಾರ್ಜುನ ಅರ್ಜುನಗಿ, ಗುರುಪಾದ ತಾರಾಪುರ, ಶಿವಾನಂದ ಕಲಬುರಗಿ, ವಿಶ್ವನಾಥ ಜೋಗುರ, ಮುತ್ತು ಮುಂಡೆವಾಡಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಆರ್ ಡಿ ದೇಸಾಯಿ, ಎಂಎಂ ಹಂಗರಗಿ, ಬಸವರಾಜ ಗೊಗ್ಗರಿ, ಆರ್ ಆರ್ ಪಾಟೀಲ, ಡಾ. ಮಹಾಂತೇಶ್ ಹಿರೇಮಠ, ರಾಜು ನರಗೋಧಿ, ಶರಣು ಲಂಗೋಟಿ, ಸಂಗನಗೌಡ ಪಾಟೀಲ ಅಗಸಬಾಳ, ಮಲ್ಲನಗೌಡ ಪಾಟೀಲ ಇಬ್ರಾಹಿಂಪುರ, ಶಿವಾನಂದ್ ಬಡಾನೂರ, ಅಂಬರೀಶ ಚೌಗಲೆ, ಸಾಯಬಣ್ಣ ಪುರದಳ, ಶೈಲಜಾ ಸ್ಥಾವರ ಮಠ, ಅನುಸೂಯ ಪರಗೊಂಡ, ಶಾಂತು ರಾಣ ಗೋಳ ಸೇರಿದಂತೆ ಸಾರ್ವಜನಿಕರು ಬಸವ ಅಭಿಮಾನಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...