ಸಿಂದಗಿ | ʼವೈದ್ಯಕೀಯ ಸಂಸ್ಥೆಯನ್ನು ಬಂಡವಾಳಿಗರಿಗೆ ಕೊಡುವ ಸರ್ಕಾರದ ನಡೆ ಖಂಡನೀಯʼ

Date:

ವಿಜಯಪುರದಲ್ಲಿ ಸಂಪೂರ್ಣ ಸರ್ಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜು ಸ್ಥಾಪಿಸುವ ಬದಲು ಬಂಡವಾಳ ಶಾಹಿಗಳಿಗೆ ಕಾಲೇಜನ್ನು ತೆರೆಯಲು ಅವಕಾಶ ಮಾಡಿಕೊಡಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ ಎಂದು ಜಿಲ್ಲೆಯ ಸಿಂದಗಿ ತಾಲೂಕು ಸ್ವಸಹಾಯ ಸಂಘಗಳ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಂತರ ಪ್ರತಿಭಟನಾಕಾರರು ಶಿರಸ್ತೆದಾರ್ ಎಂ ಎಂ ಚಟ್ಟರಿಕೆ ಅವರಿಗೆ ಮನವಿ ಸಲ್ಲಿಸಿದರು.‌ “ಈಗಾಗಲೇ ವಿಜಯಪುರ ನಗರದಲ್ಲಿ ಎರಡು ಖಾಸಗಿ ವೈದ್ಯಕೀಯ ಕಾಲೇಜುಗಳಿವೆ. ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕು. ಪ್ರಸ್ತುತ ದಿನಗಳಲ್ಲಿ ಖಾಸಗಿ ಆರೋಗ್ಯ ಸೇವೆಗಳು ತುಂಬಾ ದುಬಾರಿಯಾಗಿದೆ. ಜಿಲ್ಲೆಯ ಅಭಿವೃದ್ಧಿ ಆಗಬೇಕಾದರೆ 500 ಕೋಟಿ ರೂ ದೊಡ್ಡದಲ್ಲ. ಅದನ್ನು ಸರ್ಕಾರ ಕೊಡಬೇಕು. ಸರ್ಕಾರಿ ಕಾಲೇಜು ಬರುವುದರಿಂದ ಕಡುಬಡವರಿಗೆ ಅನುಕೂಲವಾಗುತ್ತದೆ. ಸರಕಾರಿ ಆಸ್ಪತ್ರೆಗೆ ಸೂಕ್ತವಾದ ಸುಮಾರು 150 ಎಕರೆಗೂ ಹೆಚ್ಚು ಸ್ಥಳಾವಕಾಶ ಸರ್ಕಾರಿ ಆಸ್ಪತ್ರೆ ಆವರಣದಲ್ಲಿದೆ. ತಾಯಿ ಮತ್ತು ಮಕ್ಕಳ ವಿಶೇಷ ಆಸ್ಪತ್ರೆಯೂ ಇದೆ. ಆದ್ದರಿಂದ ಸರಕಾರಿ ಆಸ್ಪತ್ರೆ ಉಳಿಸುವ ಜೊತೆಗೆ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು” ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇದನ್ನೂ ಓದಿ: ವಿಜಯಪುರ | ಪ್ರವಾಹದಲ್ಲಿ ಕೊಚ್ಚಿಹೋದ ಬದುಕು, ಕಣ್ಣೀರೊರೆಸುವುದೇ ಸರ್ಕಾರ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಂದಗಿ ತಾಲೂಕು ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳು, ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನ ಹೋರಾಟ ಸಮಿತಿಯ ಅಣ್ಣಾರಾಯ ಇಳಿಗೇರಾ, ಮಹಾದೇವಿ ಧರ್ಮಶೆಟ್ಟಿ, ಲಕ್ಷ್ಮಣ ಕಂಬಾಗಿ, ಅಕ್ರಮ ಮಾಶಾಳಕರ, ಸಿದ್ದರಾಮ ಹಳ್ಳೂರ, ಅಬ್ದುಲ್ ರೆಹಮಾನ್ ನಾಸಿರ್, ರೈತ ಸಂಘಟನೆಯ ಬಸನಗೌಡ ಧರ್ಮಗೊಂಡ, ಮಾಜಿ ಸೈನಿಕ ಸಂಘದ ಅಧ್ಯಕ್ಷ ಸಬೀರ ಪಟೇಲ, ಎಮ್ ಎಚ್ ಪಟೇಲ್, ಟಿಪ್ಪು ಕ್ರಾಂತಿ ಸಂಘಟನೆ ರಾಜ್ಯ ಕಾರ್ಯದರ್ಶಿ ದಸ್ತಗಿರಿ ಮುಲ್ಲಾ, ಡಿಎಸ್ಎಸ್ ಜಿಲ್ಲಾ ಸಂಚಾಲಕ ವೈ ಸಿ ಮಯೂರ ಸೇರಿದಂತೆ ಮಹಿಳೆಯರು ಪ್ರತಿಭಟನೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...