ಸಿಂದಗಿ | ಮುಂದುವರೆದ ಸೂರಿಲ್ಲದವರ ಸತ್ಯಾಗ್ರಹ

Date:

ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಸೋಮಾಪುರ ರಸ್ತೆಯಲ್ಲಿನ ಸ.ನಂ. 842/2×2 ರಲ್ಲಿನ 2 ಎಕರೆ 10 ಗುಂಟೆ ಜಾಗದಲ್ಲಿ ವಾಸವಿದ್ದ 84 ಕುಟುಂಬಗಳ ಮನೆಗಳನ್ನು ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪುರಸಭೆ ಅಧಿಕಾರಿಗಳು ತೆರವುಗೊಳಿಸಿದ್ದರು. ಇದರಿಂದಾಗಿ ಮನೆ ಕಳೆದುಕೊಂಡ ಕುಟುಂಬಗಳು ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬಿಸಿಲಿನಲ್ಲಿ ಕುಳಿತು ಧರಣಿ ನಡೆಸಿದರು.

ಧರಣಿಗೆ ಬೆಂಬಲವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಿಚಾರವಾದ) ಕಾರ್ಯಕರ್ತರು ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸಿದರು. “ಹಂತ ಹಂತವಾಗಿ ಈ ಹೋರಾಟ ಉಗ್ರ ಸ್ವರೂಪ ಪಡೆಯುವುದು ಶತಸಿದ್ಧ” ಎಂದು ಜಿಲ್ಲಾ ಸಂಚಾಲಕ ಶರಣು ಶಿಂದೆ ಎಚ್ಚರಿಸಿದರು.

ಸ್ಥಳೀಯ ಶಾಸಕ ಅಶೋಕ ಮನಗೂಳಿ ಮಾತನಾಡಿ, “84 ಕುಟುಂಬಗಳಿಗೆ ಪುರಸಭೆಯ ಮಾಲೀಕತ್ವದ ಮೂರು ಎಕರೆ ಜಮೀನಿನಲ್ಲಿ ತಲಾ 25×35 ಅಳತೆಯ ನಿವೇಶನ ಹಕ್ಕುಪತ್ರ ನೀಡಲಾಗುವುದು. ಜೊತೆಗೆ ನೀರು, ರಸ್ತೆ, ವಿದ್ಯುತ್, ಉದ್ಯಾನವನದ ಮೂಲಸೌಕರ್ಯ ಒದಗಿಸಲಾಗುವುದು. ಮನೆ ಕಟ್ಟಲು ಸರ್ಕಾರದಿಂದ ಸಹಾಯಧನ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪುರಸಭೆ ಅಧ್ಯಕ್ಷ ಶಾಂತವೀರ ಮನಗೂಳಿ ಮಾತನಾಡಿ, “ಕುಟುಂಬಗಳಿಗೆ ಜಾಗ ಉಳಿಸಿಕೊಡಲು ಪುರಸಭೆ ಕಚೇರಿಯಿಂದಲೇ 10 ಲಕ್ಷ ರೂಪಾಯಿ ವೆಚ್ಚ ಮಾಡಿ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರೂ ಫಲಕಾರಿಯಾಗಲಿಲ್ಲ. ನಿವಾಸಿಗಳಿಗೆ ಆದಷ್ಟು ದುಃಖ ನಮಗೂ ಆಗಿದೆ. ಈಗ ಎಲ್ಲಾ ಕುಟುಂಬಗಳಿಗೆ ನಿವೇಶನ ಕಲ್ಪಿಸಿಕೊಡುವುದು ನಮ್ಮ ಧರ್ಮ ಎಂದು ಭಾವಿಸಿ, ಸ. ನಂ. 24ರ 13 ಎಕರೆ ಭೂಮಿಯನ್ನು 84 ಕುಟುಂಬಗಳ ಮನೆಗಳಿಗೆ ಕಾಯ್ದಿರಿಸಲು ವ್ಯವಸ್ಥೆ ಮಾಡಲಾಗುವುದು. ನಿವೇಶನದ ಜೊತೆಗೆ ಪುರಸಭೆ ಕಾರ್ಯಾಲಯದಲ್ಲಿರುವ ಆಶ್ರಯ ವಸತಿ ಯೋಜನೆ ಅಡಿ ಮನೆ ಕಟ್ಟಲು ಆರ್ಥಿಕ ವ್ಯವಸ್ಥೆ ಮಾಡಿಕೊಡಲಾಗುವುದು. ಈ ಕಾರ್ಯಕರ್ತಾಗಿ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಇದನ್ನೂ ಓದಿ: ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿ; ಪಿಜಿ ಕೋರ್ಸ್‌ಗಳ ಪ್ರವೇಶಾತಿ ದಿನಾಂಕ ವಿಸ್ತರಣೆ

ಧರಣಿ ಸತ್ಯಾಗ್ರಹದ ನೇತೃತ್ವ ವಹಿಸಿರುವ ಭೀಮಶಂಕರ ರತ್ನಾಕರ ಮಾತನಾಡಿ, “ನಿರಾಶ್ರಿತರಿಗೆ ಸೂರು ದೊರಕುವ ತನಕ ಹೋರಾಟ ನಿರಂತರವಾಗಿರುತ್ತದೆ” ಎಂದರು.

ಧರಣಿಯಲ್ಲಿ ಸಿದ್ದು ತಮದೊಡ್ಡಿ, ಮಹಾದೇವಪ್ಪ ಜಮಾದಾರ, ಶ್ರೀಶೈಲ ಧವಳಾರ, ಎಂಕೆ ಕಟ್ಟಿಮನಿ, ಫಾತಿಮಾ ಆಳಂದ, ಜಯಶ್ರೀ ಇರಕಲ್ಲ, ಯಮುನಾ ಬಾಯಿ ಬಂಕಲಗಿ, ಶಾಂತಾಬಾಯಿ ಗಾಣಿಗೇರಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...