ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಸಿಂಧನೂರು ತಾಲೂಕಿನ ಮೂಡಲಗಿರಿ ಕ್ಯಾಂಪ್ ಬಳಿ ಮಧ್ಯರಾತ್ರಿ ನಡೆದಿದೆ.
ಮೃತರನ್ನು ಗಾಂಧಿನಗರ ನಿವಾಸಿಗಳಾದ ಸಂತೋಷ (22) ಹಾಗೂ ಹನುಮಂತರಾಯ (22) ಎಂದು ಗುರುತಿಸಲಾಗಿದೆ. ಇವರು ಬೈಕ್‌ನಲ್ಲಿ ಗಾಂಧಿನಗರದಿಂದ ಸಿಂಧನೂರಿಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಂತರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಿಂಧನೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಯಿತು. ಆಸ್ಪತ್ರೆಯ ಆವರಣದಲ್ಲಿ ಮೃತರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತು.
ಈ ಸುದ್ದಿ ಓದಿದ್ದೀರಾ? ರಾಯಚೂರು | ವಿಷಪೂರಿತ ನೀರು ಸೇವನೆ; 50ಕ್ಕೂ ಹೆಚ್ಚು ಕುರಿಗಳು ಸಾವು
ಸಿಂಧನೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.





