ಸಿಂಧನೂರು | ನಗರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 69ನೇ ಮಹಾಪರಿನಿರ್ವಾಣ ದಿನಾಚರಣೆ

Date:

ನಗರದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನವನ್ನು ಭಾವಪೂರ್ಣವಾಗಿ ಆಚರಿಸಲಾಯಿತು. ಈ ಹಿನ್ನೆಲೆಯಲ್ಲಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು ಮತ್ತು ನಾಗರಿಕರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನಗರದ ಪ್ರವಾಸಿ ಮಂದಿರದಿಂದ ಕೋರ್ಟ್ ಸರ್ಕಲ್ ವರೆಗೆ ನೂರಾರು ವಿದ್ಯಾರ್ಥಿಗಳು ಕೈಯಲ್ಲಿ ಮೇಣದ ಬತ್ತಿ ಹಿಡಿದು ಮೆರವಣಿಗೆ ಜರುಗಿತು.

ಈ ವೇಳೆ ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಮೌನೇಶ ಜಾಲವಾಡಗಿ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು, ಶಿಕ್ಷಣದಿಂದಲೇ ಸಮಾಜದಲ್ಲಿ ಬದಲಾವಣೆ ತರುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ ಎಂದು ಸ್ಮರಿಸಿದರು.

ಶಿಕ್ಷಣವೇ ಶೋಷಿತರ ಪರಿವರ್ತನೆಯ ಶಕ್ತಿಯಾಗಿತ್ತು. ಶಿಕ್ಷಣದ ಮೂಲಕವೇ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಾಧ್ಯವಾಯಿತು. ಆದ್ದರಿಂದ ನಾವು ಎಲ್ಲರೂ ಶಿಕ್ಷಣ ಪಡೆದು ಸಮಾನತೆಯ ಸಮಾಜ ನಿರ್ಮಾಣ ಮಾಡುವ ಮೂಲಕ ಅಂಬೇಡ್ಕರ್ ಅವರ ಆಶಯಗಳನ್ನು ನೆರವೇರಿಸಬೇಕು ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಇ-ಖಾತಾ ವಿಳಂಬ, ಲಂಚ ಬೇಡಿಕೆ ಆರೋಪ; ಜಂಟಿ ಸಂಘಟನೆಗಳ ಪ್ರತಿಭಟನೆ

ಈ ವೇಳೆ ಕರ್ನಾಟಕ ಜನಶಕ್ತಿ ಮುಖಂಡ ಬಸವರಾಜ ಬಾದರ್ಲಿ, ಹೆಚ್ ಎನ್ ಬಡಿಗೇರ್, ನಾರಾಯಣ ಬೆಳಗುರ್ಕಿ, ಕಾಲೇಜು ವಿದ್ಯಾರ್ಥಿಗಳು ಇನ್ನಿತರರು ಹಾಜರಿದ್ದರು.



WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...