ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸಿಂಧನೂರು ತಾಲ್ಲೂಕು ಕುರಕುಂದಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿನಿ ಕುರುಕುಂದ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ತನುಶ್ರೀ ಶ್ಯಾಮಣ್ಣ ಭಜಂತ್ರಿ ಎಂದು ತಿಳಿದುಬಂದಿದೆ.
ಶಾಲೆಯಲ್ಲಿ ವಿರಾಮಕ್ಕೆ ಬಿಟ್ಟಾಗ ನೀರು ತರಲು ಹೋಗಿ ವಿದ್ಯುತ್ ತಂತಿ ತಗುಲಿದ ಪರಿಣಾಮ ದುರ್ಘಟನೆ ಸಂಭವಿಸಿದೆ. ತಕ್ಷಣವೇ ವಿದ್ಯಾರ್ಥಿನಿಯನ್ನು ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ ಎಂದು ಮೂಲಗಳಿಂದ ಕೇಳಿಬಂದಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಕತ್ತು ಕೊಯ್ದು ಸೊಸೆಯನ್ನು ಕೊಂದ ಮಾವ
ಘಟನಾ ಸ್ಥಳಕ್ಕೆ ತುರ್ವಿಹಾಳ ಪಿಎಸ್ಐ ಸುಜಾತಾ ಭೇಟಿ ನೀಡಿ ಪರಿಶೀಲನೆ ನಡೆಸಿ, ಶಿಕ್ಷಕರಿಂದ ಮಾಹಿತಿ ಪಡೆದರು.
ವಿದ್ಯಾರ್ಥಿನಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ ಎನ್ನಲಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.





