ರಾಯಚೂರು | 10ನೇ ದಿನಕ್ಕೆ ಕಾಲಿಟ್ಟ ಸಿಂಧನೂರು ಭೂಮಿ ಹೋರಾಟ

Date:

ಸಿಂಧನೂರು ತಾಲೂಕಿನ ಜವಳಗೇರಾ ನಾಡಗೌಡ ಎಂಬವರು ಅಕ್ರಮವಾಗಿ ವಶಪಡಿಸಿಕೊಂಡಿರುವ 62 ಎಕರೆ ಹೆಚ್ಚುವರಿ ಭೂಮಿಯನ್ನು ಕೂಡಲೇ ಭೂಹೀನರಿಗೆ ವಿತರಿಸಬೇಕು ಎಂದು ಒತ್ತಾಯಿಸಿ ಸಿಪಿಐ(ಎಂಎಲ್) ರೆಡ್ ಸ್ಟಾರ್ ಮತ್ತು ಕರ್ನಾಟಕ ರೈತ ಸಂಘ ನಡೆಸುತ್ತಿರುವ ಪ್ರತಿಭಟನೆ ಹತ್ತನೇ ದಿನಕ್ಕೆ ಕಾಲಿಟ್ಟಿದೆ. ಮಂಗಳವಾರ ರಸ್ತೆ ತಡೆದು ಪ್ರತಿಭಟಿಸುತ್ತಿದ್ದ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ.

ಸಿಂಧನೂರು ಸರ್ವೆ ನಂ. 419 ಮತ್ತು ಸುಲ್ತಾನಪೂರ ಸರ್ವೆ ನಂ.186ರಲ್ಲಿರುವ ನಾಡಗೌಡರ ಹೆಚ್ಚುವರಿ ಭೂಮಿಯನ್ನು ಎಲ್ಲಾ ಜಾತೀಯ ಭೂಹಿನರಿಗೆ ಹಂಚಿಕೆ ಮಾಡಬೇಕು. ಸರ್ಕಾರದ ಹೆಚ್ಚುವರಿ ಭೂಮಿಯನ್ನು ಕಬಳಿಸಿ ಸಾಗುವಳಿ ಮಾಡಿದವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿ, ಅಹೋರಾತ್ರಿ ಅನಿರ್ದಾಷ್ಟಾವಧಿ ಧರಣಿ ನಡೆಸುತ್ತಿದ್ದಾರೆ.

ರೆಡ್ ಸ್ಟಾರ್ ಕಾರ್ಯಕರ್ತರು, ನಗರ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿ ಹೋರಾಟಗಾರರನ್ನು ಬಿಡಬೇಕು ಎಂದು ಆಗ್ರಹಿಸಿದರು. ನಂತರ ಪೊಲೀಸರು ಹೋರಾಟಗಾರರನ್ನು ಬಿಡುಗಡೆಗೊಳಿಸಿದರು. ತಾತ್ಕಾಲಿಕವಾಗಿ ಧರಣಿನಿರತರು ಪ್ರತಿಭಟನೆ ಹಿಂಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನಾ ಉದ್ದೇಶಿಸಿ, ರಾಜ್ಯ ಮುಖಂಡ ಆರ್. ಮಾನಸಯ್ಯ ಮಾತನಾಡಿ, ಜವಳಗೇರಾ ನಾಡಗೌಡರ ಭೂಮಿಯನ್ನು, ಭೂಹೀನರಿಗೆ ಹಂಚಿಕೆ ಮಾಡಬೇಕು. ಬಡ ಜನರು ಭೂಮಿ ಇಲ್ಲದೆ ಪರದಾಡುತ್ತಿದ್ದಾರೆ. ಸರ್ಕಾರಿ ಭೂಮಿಯನ್ನು ಕಬಳಿಸಿ ಸಾಗುವಳಿ ಮಾಡಿದವರ ಮೇಲೆ, ಕ್ರಿಮಿನಲ್ ಪ್ರಕರಣ ದಾಖಲಿಸಬೇಕು . ನಮ್ಮ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಹತ್ತು ದಿನವಾದರೂ, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ. ಅವರು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ರಾಜ್ಯ ಮಟ್ಟದ ಹೋರಾಟಕ್ಕೆ ಕರೆ ನೀಡಲಾಗುವುದು ಎಂದರು.

ಈ ವೇಳೆ ಸಿಪಿಐ(ಎಂಎಲ್)ರೆಡ್ ಸ್ಟಾರ್‌ ಪಕ್ಷದ ಎಂ.ಡಿ.ಅಮೀರ ಅಲಿ, ಎಂ.ಗಂಗಾಧರ, ಜಿ.ಅಮರೇಶ, ಮಾಬುಸಾಬ ಬೆಳ್ಳಟ್ಟಿ, ಅಜೀಜ್ ಜಾಗೀರದಾರ, ಕರ್ನಾಟಕ ರೈತ ಸಂಘ-ಎಐಕೆಕೆಎಸ್‌ನ ಕಂದೇಗಾಲ ಶ್ರೀನಿವಾಸ, ಮಲ್ಲಯ್ಯ ಕಟ್ಟಿಮನಿ, ಸಂತೋಷ ಹಿರೇದಿನ್ನಿ, ಹನುಮಂತಪ್ಪ ಗೋಡ್ಯಾಳ, ಮಾರುತಿ ಜಿನ್ನಾಪೂರ, ಯಲ್ಲಪ್ಪ ಉಟಕನೂರು, ಗಿರಿಲಿಂಗಸ್ವಾಮಿ, ಆದೇಶ ನಗನೂರು, ಪ್ರಕಾಶ, ರಾಮಕೃಷ್ಣ, ಶೇಖರಪ್ಪ, ಅಂಬಮ್ಮ ಬಸಾಪೂರ, ಹಂಪಮ್ಮ, ಉಷಾ, ಚೈತ್ರಾ, ರೇಣುಕಮ್ಮ, ಸುಮಂಗಲಾ, ರುಕ್ಮಿಣೇಮ್ಮಾ, ಜುಲೇಖಾಬೇಗಂ,ಸಂಗಮ್ಮಾ,ಭಿಬೀ ಪಾತಿಮಾ ಸೇರಿದಂತೆ ಭೂಹೀನರು ಮೌನೇಶ, ಹಾಗೂ ಇತರೆ ನೂರಾರು ಜನರು, ಭೂ ಸಂಘರ್ಷ ರಸ್ತೆ ತಡೆ ಹೋರಾಟದಲ್ಲಿ ಪಾಲ್ಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...