ಶಿರಸಿ | ಪ್ರಯಾಣಿಕರ ಗಮನಕ್ಕೆ: ಮಾರಿಕಾಂಬಾ ಜಾತ್ರೆ ಹಿನ್ನೆಲೆ ಬಸ್ ಸಂಚಾರ ಮಾರ್ಗ ಬದಲಾವಣೆ

Date:

ಶಿರಸಿ: ದಕ್ಷಿಣ ಭಾರತದ ಪ್ರಸಿದ್ಧಿಯಾದ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 24 ರಿಂದ ಮಾರ್ಚ್ 4 ರವರೆಗೆ ನಡೆಯಲಿರುವ ಈ ಭವ್ಯ ಉತ್ಸವಕ್ಕೆ ಲಕ್ಷಾಂತರ ಭಕ್ತರು ಸಾಗರೋಪಾದಿಯಲ್ಲಿ ಹರಿದುಬರುವ ನಿರೀಕ್ಷೆಯಿದೆ.

ಈ ಹಿನ್ನೆಲೆಯಲ್ಲಿ ನಗರದ ಸಂಚಾರ ದಟ್ಟಣೆಯನ್ನು ಸುಗಮಗೊಳಿಸಲು ಕೆಎಸ್‌ಆರ್‌ಟಿಸಿ (KSRTC) ಇಂದಿನಿಂದಲೇ ಅನ್ವಯವಾಗುವಂತೆ ಬಸ್ ನಿಲ್ದಾಣ ಮತ್ತು ಸಂಚಾರ ಮಾರ್ಗಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದೆ.

ನಗರದ ಒಳಭಾಗದಲ್ಲಿ ಜನದಟ್ಟಣೆ ತಪ್ಪಿಸಲು ಹಾಲಿ ಇರುವ ‘ಕೇಂದ್ರ ಬಸ್ ನಿಲ್ದಾಣ’ವನ್ನು ತಾತ್ಕಾಲಿಕವಾಗಿ ಗಣೇಶ ನಗರದ ಬಸ್ ನಿಲ್ದಾಣಕ್ಕೆ(ಹೊಸ ಬಸ್ ನಿಲ್ದಾಣ) ಸ್ಥಳಾಂತರಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜ ಅಮ್ಮನವರ್ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬದಲಾದ ಸಂಚಾರ ವ್ಯವಸ್ಥೆಯ ಸಂಪೂರ್ಣ ವಿವರ ಇಲ್ಲಿದೆ: ಕುಮಟಾ ಮತ್ತು ಸಿದ್ದಾಪುರ ಮಾರ್ಗದಿಂದ ಬರುವ ಬಸ್‌ಗಳು ಹನುಮಾನ್ ವ್ಯಾಯಾಮ ಶಾಲೆ ಬಳಿ ಪ್ರಯಾಣಿಕರನ್ನು ಇಳಿಸಿ, ನಂತರ ಗಣೇಶ ನಗರದ ತಾತ್ಕಾಲಿಕ ನಿಲ್ದಾಣಕ್ಕೆ ತೆರಳಲಿವೆ. ಮರಳಿ ಹೋಗುವಾಗ ಅಂಬೇಡ್ಕರ್ ಸರ್ಕಲ್ ಮೂಲಕ ಸಾಗಲಿವೆ.

ಹುಬ್ಬಳ್ಳಿ ಮಾರ್ಗ: ಹುಬ್ಬಳ್ಳಿ ಕಡೆಯಿಂದ ಬರುವ ಬಸ್‌ಗಳು ಎಪಿಎಂಸಿ (APMC) ದ್ವಾರ ಅಥವಾ ಅಯ್ಯಪ್ಪ ನಗರ ಕ್ರಾಸ್ ಮೂಲಕ ಸಂಚರಿಸಲಿವೆ. ಬನವಾಸಿ ಮಾರ್ಗ: ಬನವಾಸಿ ಕಡೆಯಿಂದ ಬರುವ ಮತ್ತು ಹೋಗುವ ಬಸ್‌ಗಳಿಗೆ ‘ಬನವಾಸಿ ನಾಖಾ’ ಬಳಿಯೇ ತಾತ್ಕಾಲಿಕ ನಿಲ್ದಾಣದ ವ್ಯವಸ್ಥೆ ಮಾಡಲಾಗಿದೆ.

ಯಲ್ಲಾಪುರ ಹಾಗೂ ಬೆಂಗಳೂರು ಮಾರ್ಗ: ಈ ಮಾರ್ಗದ ಬಸ್‌ಗಳು ಕೋಟೆಕೆರೆ ರಸ್ತೆ ಮತ್ತು ಖಾನ್ ಸಾಮಿಲ್ ಮೂಲಕ ಬನವಾಸಿ ನಾಖಾ ತಲುಪಿ ತಮ್ಮ ಪ್ರಯಾಣ ಮುಂದುವರಿಸಲಿವೆ. ಫೆಬ್ರವರಿ 24 ರಂದು ಕಲಶ ಪ್ರತಿಷ್ಠಾಪನೆ ಹಾಗೂ 25 ರಂದು ಅದ್ಧೂರಿ ರಥೋತ್ಸವ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಲೋಕಾಯುಕ್ತ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲ್ಲ; ಶಾಸಕರ ಬಹಿರಂಗ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಗರಂ

ಈ ಸಂದರ್ಭದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಇರುವುದರಿಂದ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸಲು ಕೋರಲಾಗಿದೆ. ಸಂಚಾರ ವ್ಯವಸ್ಥೆಯಲ್ಲಿನ ಈ ಬದಲಾವಣೆಯು ಮಾರ್ಚ್ 4 ರವರೆಗೆ ಜಾರಿಯಲ್ಲಿರಲಿದ್ದು, ಪ್ರಯಾಣಿಕರು ಸಾರಿಗೆ ಸಿಬ್ಬಂದಿಯೊಂದಿಗೆ ಸಹಕರಿಸಬೇಕೆಂದು ಇಲಾಖೆ ಮನವಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...