ಶಿರಸಿ | ಸೈಬರ್ ವಂಚನೆ; ಮುಂಬೈ ಪೊಲೀಸರ ಸೋಗಿನಲ್ಲಿ ₹89.90 ಲಕ್ಷ ಹಣ ಲೂಟಿ

Date:

ಸೈಬರ್ ವಂಚಕರ ಜಾಲಕ್ಕೆ ಸಿಕ್ಕಿಹಾಕಿಕೊಂಡ ಶಿರಸಿಯ ಪ್ರಗತಿ ನಗರದ ನಿವಾಸಿಯೊಬ್ಬರು ಬರೋಬ್ಬರಿ ₹89.90 ಲಕ್ಷ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಶಿರಸಿಯ ಹೊಸಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರವೀಂದ್ರ ಕೃಷ್ಣ ಹೆಗಡೆ ಎಂಬುವವರಿಗೆ ಅಪರಿಚಿತ ವ್ಯಕ್ತಿಗಳಿಂದ ವಾಟ್ಸ್‌ಪ್ ವೀಡಿಯೊ ಕರೆ ಬಂದಿದೆ ಕರೆ ಮಾಡಿದವರು ತಮ್ಮನ್ನು ಮುಂಬೈ ಕೊಲಾಬಾ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಎಂದು ಪರಿಚಯಿಸಿಕೊಂಡಿದ್ದಾರೆ. ಹೆಗಡೆ ಅವರ ಖಾತೆಗೆ ಕಪ್ಪು ಹಣದ ವ್ಯವಹಾರ ನಡೆದಿದೆ, ನಿರ್ದಿಷ್ಟವಾಗಿ ಜೆಟ್ ಏರ್‌ವೇಸ್‌ನ ಮನೀಶ್ ಗೋಯಲ್ ಅವರ ಖಾತೆಯಿಂದ ಹಣ ವರ್ಗಾವಣೆಯಾಗಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಅವರ ಮೇಲೆ ಕಪ್ಪು ಹಣ ಮತ್ತು ಮನಿ ಲಾಂಡರಿಂಗ್ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಈ ಬೆದರಿಕೆಗಳಿಗೆ ಹೆದರಿದ ರವೀಂದ್ರ ಹೆಗಡೆ, ಸೈಬರ್ ವಂಚಕರ ಸೂಚನೆಗಳಿಗೆ ಮಣಿದು ತಮ್ಮ ವಿವಿಧ ಬ್ಯಾಂಕ್ ಖಾತೆಗಳಿಂದ ಹಣವನ್ನು ವರ್ಗಾಯಿಸಿದ್ದಾರೆ. ಶಿರಸಿ ನಗರದ ಕೆನರಾ ಬ್ಯಾಂಕ್, ಅಶ್ವಿನಿ ಸರ್ಕಲ್‌ನಲ್ಲಿರುವ ಎಸ್‌ಬಿಐ ಬ್ಯಾಂಕ್ ಮತ್ತು ಕರ್ನಾಟಕ ಬ್ಯಾಂಕ್ ಖಾತೆಗಳಿಂದ ಒಟ್ಟು ₹89,90,000 ಹಣವನ್ನು ಸೈಬರ್ ವಂಚಕರು ಮೋಸದಿಂದ ವರ್ಗಾಯಿಸಿಕೊಂಡಿದ್ದಾರೆ.
ವಂಚನೆಗೆ ಒಳಗಾದ ನಂತರ ರವೀಂದ್ರ ಹೆಗಡೆ ಅವರು ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿ, ತಡವಾಗಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ಮಾಹಿತಿ ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಈ ವಂಚನೆ ನಡೆಸಿದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಂಡು ತಮ್ಮ ಹಣವನ್ನು ಮರಳಿಸುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಅಮೆರಿಕದಲ್ಲಿ ನಡೆಯುವ ಅಂತಾರಾಷ್ಟ್ರೀಯ ಶೃಂಗಸಭೆಗೆ ಶಿರಸಿ ಶಾಸಕ ಭೀಮಣ್ಣ ನಾಯ್ಕ್ ಆಯ್ಕೆ

ಸೈಬರ್ ಅಪರಾಧಗಳಿಂದ ಜಾಗರೂಕರಾಗಿರಿ: ಯಾವುದೇ ಬ್ಯಾಂಕ್ ಅಥವಾ ಸರ್ಕಾರಿ ಸಂಸ್ಥೆಗಳು ದೂರವಾಣಿ ಕರೆ, SMS ಅಥವಾ ವೀಡಿಯೊ ಕರೆ ಮೂಲಕ ನಿಮ್ಮ ವೈಯಕ್ತಿಕ ಮಾಹಿತಿ, ಬ್ಯಾಂಕ್ ಖಾತೆ ವಿವರಗಳು, OTP ಅಥವಾ ಪಾಸ್‌ವರ್ಡ್‌ಗಳನ್ನು ಕೇಳುವುದಿಲ್ಲ. ಇಂತಹ ಕರೆಗಳು ಬಂದಾಗ ತಕ್ಷಣವೇ ಸಂಪರ್ಕ ಕಡಿತಗೊಳಿಸಿ, ಯಾವುದೇ ಕಾರಣಕ್ಕೂ ಹಣ ವರ್ಗಾವಣೆ ಮಾಡಬೇಡಿ ಮತ್ತು ತಕ್ಷಣವೇ 1930 ಸಂಖ್ಯೆಗೆ ಕರೆ ಮಾಡಿ ಅಥವಾ www.cybercrime.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ದೂರು ದಾಖಲಿಸಿ ನಿಮ್ಮನ್ನು ಮತ್ತು ನಿಮ್ಮ ಹಣವನ್ನು ಸುರಕ್ಷಿತವಾಗಿರಿಸಿಕೊಳ್ಳಿ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...