ಶಿರಸಿ | ಕೆಡಿಸಿಸಿ ಮಂಡಳಿ ಆಯ್ಕೆ ವಿಳಂಬದಿಂದ ರೈತರಿಗೆ ಹಿನ್ನಡೆ; ಬೇಡ್ತಿ–ವರದಾ ಯೋಜನೆಗೆ ತಡೆ ಅಗತ್ಯ: ಶಿವರಾಮ ಹೆಬ್ಬಾರ್

Date:

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಸಹಕಾರಿ ಕ್ಷೇತ್ರದ ಬೆನ್ನೆಲುಬಾದ ಕೆಡಿಸಿಸಿ ಬ್ಯಾಂಕ್‌ನ ನಿರ್ದೇಶಕರ ಚುನಾವಣೆ ಮುಗಿದು ತಿಂಗಳುಗಳೇ ಕಳೆದರೂ, ಆಡಳಿತ ಮಂಡಳಿ ಅಧಿಕಾರ ಸ್ವೀಕರಿಸಲು ಎದುರಾಗಿರುವ ಕಾನೂನು ಅಡೆತಡೆಗಳ ಬಗ್ಗೆ ಶಾಸಕ ಹಾಗೂ ಮಾಜಿ ಸಚಿವ ಶಿವರಾಮ ಹೆಬ್ಬಾರ್ ಕಳವಳ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬ್ಯಾಂಕಿನ ಸರ್ವತೋಮುಖ ಅಭಿವೃದ್ಧಿಗೆ ಆಡಳಿತ ಮಂಡಳಿಯ ಅಸ್ತಿತ್ವ ಅತೀ ಅಗತ್ಯವಾಗಿದೆ ಎಂದು ಪ್ರತಿಪಾದಿಸಿದರು. ಸದ್ಯದ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ ಅವರು, “ಇನ್ನು ಕೇವಲ ಎರಡು ನಿರ್ದೇಶಕ ಸ್ಥಾನಗಳ ಆಯ್ಕೆ ಬಾಕಿ ಇದೆ. ಈ ಕುರಿತು ನ್ಯಾಯಾಲಯಕ್ಕೆ ಮನವಿ ಮಾಡಲಾಗಿದ್ದು, ಮುಂದಿನ ಎರಡು ವಾರಗಳಲ್ಲಿ ಮತ ಎಣಿಕೆಗೆ ಅವಕಾಶ ಸಿಗುವ ಆಶಾವಾದವಿದೆ.

ಆರ್ಥಿಕ ವರ್ಷ ಮುಗಿಯಲು ಕೇವಲ 94 ದಿನಗಳಷ್ಟೇ ಬಾಕಿ ಇದ್ದು, ಆಡಳಿತ ಮಂಡಳಿ ರಚನೆ ವಿಳಂಬವಾಗುತ್ತಿರುವುದರಿಂದ ರೈತರಿಗೆ ನೀಡಬೇಕಾದ ಸಾಲ ವಿತರಣೆಯಲ್ಲಿ ಹಿನ್ನಡೆಯಾಗುತ್ತಿದೆ. ಇದು ನೇರವಾಗಿ ಬ್ಯಾಂಕಿನ ಲಾಭಾಂಶದ ಮೇಲೆ ಪರಿಣಾಮ ಬೀರಲಿದೆ,” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000404265

ರಾಜ್ಯಮಟ್ಟದಲ್ಲಿ 3ನೇ ಸ್ಥಾನದಲ್ಲಿರುವ ಕೆಡಿಸಿಸಿ ಬ್ಯಾಂಕನ್ನು 2ನೇ ಸ್ಥಾನಕ್ಕೆ ಏರಿಸುವ ಗುರಿ ಹೊಂದಿದ್ದೇವೆ. ಚುನಾವಣೆಯಲ್ಲಿ ಸ್ಪರ್ಧೆ ಸಹಜ, ಆದರೆ ಗೆದ್ದ ನಂತರ ನಾವೆಲ್ಲರೂ ಒಟ್ಟಾಗಿ ಪಕ್ಷಾತೀತವಾಗಿ ರೈತರ ಹಿತರಕ್ಷಣೆಗಾಗಿ ಶ್ರಮಿಸುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಬೇಡ್ತಿ-ವರದಾ ನದಿ ಜೋಡಣೆ: ಶ್ರೀಗಳ ನಿರ್ಣಯಕ್ಕೆ ಬದ್ಧ ಇದೇ ಸಂದರ್ಭದಲ್ಲಿ ವಿವಾದಿತ ಬೇಡ್ತಿ-ವರದಾ ನದಿ ಜೋಡಣೆ ಯೋಜನೆಯ ಬಗ್ಗೆಯೂ ಹೆಬ್ಬಾರ್ ತಮ್ಮ ಸ್ಪಷ್ಟ ನಿಲುವನ್ನು ತಿಳಿಸಿದರು. ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರು ಈ ಯೋಜನೆಗಾಗಿ ಕೇಂದ್ರದ ಮೇಲೆ ಒತ್ತಡ ಹೇರುತ್ತಿರುವುದನ್ನು ಉಲ್ಲೇಖಿಸಿದ ಅವರು,

ಈ ಸುದ್ದಿ ಓದಿದ್ದೀರಾ ? ಮುಂಡಗೋಡ-ಹಳಿಯಾಳದ ಮದ್ಯ-ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್ ದಾಳಿ; ಪಾಳಾ ಭಾಗದ ಮಟ್ಕಾ ದಂಧೆಗೆ ಬೀಳುತ್ತಾ ಬ್ರೇಕ್?

ಪರಿಸರಕ್ಕೆ ಪೂರಕವಲ್ಲದ ಈ ಯೋಜನೆಗೆ ತಡೆ ಬೀಳಲೇಬೇಕು ಎಂದರು. “ನದಿ ಜೋಡಣೆ ವಿಷಯದಲ್ಲಿ ನಾನು ಸ್ವರ್ಣವಲ್ಲೀ ಶ್ರೀಗಳ ನಿರ್ಣಯಕ್ಕೆ ಸಂಪೂರ್ಣವಾಗಿ ಬದ್ಧನಾಗಿದ್ದೇನೆ. ಈ ಯೋಜನೆಯಿಂದ ಆಗುವ ಅನಾಹುತಗಳ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೇಂದ್ರ ಸರ್ಕಾರಕ್ಕೆ ಹಾಗೂ ಬಸವರಾಜ ಬೊಮ್ಮಾಯಿ ಅವರಿಗೆ ಮನವರಿಕೆ ಮಾಡಿಕೊಡಬೇಕಿದೆ.

ಶಾಸಕರಾಗಿ ನಾವು ಈ ಯೋಜನೆ ಜಾರಿಯಾಗದಂತೆ ಕಾನೂನುಬದ್ಧವಾಗಿ ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇವೆ,” ಎಂದು ಅವರು ಎಚ್ಚರಿಸಿದರು. ಕೇಂದ್ರ ಸರ್ಕಾರವು ಈ ಯೋಜನೆಯನ್ನು ಕೈಬಿಡುವ ಮೂಲಕ ಮಲೆನಾಡಿನ ಪರಿಸರ ಹಾಗೂ ಜನರ ಹಿತವನ್ನು ಕಾಯಬೇಕು ಎಂದು ಅವರು ಇದೇ ವೇಳೆ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...