ಶಿರಸಿ | ಸರಕಾರಿ ಬೆಟ್ಟಗಳ ಅತಿಕ್ರಮಣ: ಅಧಿಕಾರಿಗಳ ಮೌನಕ್ಕೆ ಭೀಮಘರ್ಜನೆ ಸಂಘಟನೆ ಆಕ್ರೋಶ, ಪ್ರತಿಭಟನೆಯ ಎಚ್ಚರಿಕೆ

Date:

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸರಕಾರಿ ಬೆಟ್ಟ ಹಾಗೂ ಅರಣ್ಯ ಭೂಮಿಯನ್ನು ಅಕ್ರಮವಾಗಿ ಅತಿಕ್ರಮಣ ಮಾಡಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಭೀಮಘರ್ಜನೆ ಸಂಘಟನೆಯ ಜಿಲ್ಲಾಧ್ಯಕ್ಷ ಅರ್ಜುನ್ ಮಿಂಟಿ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

ಅತಿಕ್ರಮಣದಾರರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ಅವರು ಎಚ್ಚರಿಸಿದ್ದಾರೆ. ಶಿರಸಿಯ ಯಲ್ಲಾಪುರ ರಸ್ತೆ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಸರಕಾರಿ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಗೇಟ್ ಅಳವಡಿಸಿ, ಬೇಲಿ ಹಾಕಿ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

ಅಷ್ಟೇ ಅಲ್ಲದೆ, ಅರಣ್ಯ ಭೂಮಿಯಲ್ಲಿ ಕಾನೂನುಬಾಹಿರವಾಗಿ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆ ಮತ್ತು ತಹಶೀಲ್ದಾರರಿಗೆ ಮಾಹಿತಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾರತಮ್ಯದ ಆರೋಪ: ಇದೇ ಸಂದರ್ಭದಲ್ಲಿ ಅಧಿಕಾರಿಗಳ ದ್ವಂದ್ವ ನೀತಿಯ ವಿರುದ್ಧ ಗುಡುಗಿದ ಅರ್ಜುನ್ ಮಿಂಟಿ, “ಮೇಲ್ವರ್ಗದವರು ಅಥವಾ ಪ್ರಭಾವಿಗಳು ಎಕರೆಗಟ್ಟಲೆ ಸರಕಾರಿ ಭೂಮಿಯನ್ನು ಅತಿಕ್ರಮಣ ಮಾಡಿ ತೋಟ, ಮನೆ ನಿರ್ಮಿಸಿಕೊಂಡರೆ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತುಕೊಳ್ಳುತ್ತಾರೆ.

ಆದರೆ, ಅದೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಥವಾ ಹಿಂದುಳಿದ ವರ್ಗದ ಬಡವರು ಒಂದು ಗುಂಟೆ ಜಾಗದಲ್ಲಿ ಸಣ್ಣ ಮನೆ ಕಟ್ಟಿಕೊಂಡರೂ ತಕ್ಷಣವೇ ಸ್ಥಳಕ್ಕೆ ಧಾವಿಸುವ ಅಧಿಕಾರಿಗಳು ಅದನ್ನು ತೆರವುಗೊಳಿಸುತ್ತಾರೆ.

ಬಡವರ ಮೇಲೆ ಪ್ರತಾಪ ತೋರಿಸುವ ಅಧಿಕಾರಿಗಳು, ಬಲಾಢ್ಯ ಭೂಗಳ್ಳರ ಮುಂದೆ ರಾಜಕಾರಣಿಗಳ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ” ಎಂದು ಗಂಭೀರವಾಗಿ ಆರೋಪಿಸಿದರು.

ಅತಿಕ್ರಮಣದ ವಿವರಗಳು: ಕಳೆದ 15 ದಿನಗಳ ಹಿಂದೆಯೇ ಇಟಗುಳಿ ಪಂಚಾಯತ್ ವ್ಯಾಪ್ತಿಯ ಸರ್ವೇ ನಂಬರ್ 44ರ ಸರಕಾರಿ ಬೆಟ್ಟದ ಅತಿಕ್ರಮಣ ತೆರವಿಗೆ ಮನವಿ ಮಾಡಲಾಗಿತ್ತು. ಇದಲ್ಲದೆ, ಚಿಪಗಿ ಗ್ರಾಮದ ಸರ್ವೇ ನಂಬರ್ 121, 117, ಪುಟ್ಟನಮನೆಯ ಸರ್ವೇ ನಂಬರ್ 67/ಬ/7,

ಸದಾಶಿವಳ್ಳಿಯ ಸರ್ವೇ ನಂಬರ್ 126 ಬ/1, 128 ಅ 1, 125 ಹಾಗೂ ದಾಸನಗದ್ದೆಯ ಸರ್ವೇ ನಂಬರ್ 11 ಅ ಸೇರಿದಂತೆ ಹಲವೆಡೆ ಸರಕಾರಿ ಜಂಗಲ್ ಮತ್ತು ಬೆಟ್ಟಗಳನ್ನು ಅಕ್ರಮವಾಗಿ ವಶಪಡಿಸಿಕೊಳ್ಳಲಾಗಿದೆ. ಇಲ್ಲಿನ ಮರಗಿಡಗಳನ್ನು ಕಡಿದು ಹೊಸ ತೋಟಗಳನ್ನು ಮಾಡಲಾಗುತ್ತಿದ್ದರೂ ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಒಳಗಾಗಿ ಮೌನಕ್ಕೆ ಶರಣಾಗಿದ್ದಾರೆ ಎಂದು ಅವರು ದೂರಿದ್ದಾರೆ.

ಕಾನೂನಿನ ಪ್ರಕಾರ ಸರಕಾರಿ ಭೂಮಿಯಲ್ಲಿ ಬೇಲಿ ಹಾಕುವುದು ಅಥವಾ ಗೇಟ್ ಅಳವಡಿಸುವುದು ಶಿಕ್ಷಾರ್ಹ ಅಪರಾಧ. ಹೀಗಿದ್ದರೂ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವುದು ಅವರ ಕರ್ತವ್ಯ ಲೋಪವನ್ನು ಎತ್ತಿ ತೋರಿಸುತ್ತಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಮಂಕಾಳ ವೈದ್ಯ ಭರವಸೆ

ಇನ್ನೆರಡು ದಿನಗಳಲ್ಲಿ ಅಕ್ರಮವಾಗಿ ಹಾಕಲಾದ ಗೇಟ್ ಮತ್ತು ಬೇಲಿಗಳನ್ನು ತೆರವುಗೊಳಿಸಿ, ಸರಕಾರಿ ಬೆಟ್ಟಗಳನ್ನು ಉಳಿಸದಿದ್ದರೆ ಸಂಬಂಧಪಟ್ಟ ಕಚೇರಿಗಳ ಮುಂದೆ ಭೀಮಘರ್ಜನೆ ಸಂಘಟನೆಯ ವತಿಯಿಂದ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಅರ್ಜುನ್ ಮಿಂಟಿ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...