ಶಿರಸಿ | ಹುಬ್ಬಳ್ಳಿ ‘ಮರ್ಯಾದಾ ಹತ್ಯೆ’ ಪ್ರಕರಣ; ಆರೋಪಿಗಳ ಮರಣ ದಂಡನೆಗೆ ಭೀಮಘರ್ಜನೆ ಆಗ್ರಹ

Date:

ಹುಬ್ಬಳ್ಳಿಯಲ್ಲಿ ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದಾಳೆ ಎಂಬ ಏಕೈಕ ಕಾರಣಕ್ಕೆ, ಸ್ವಂತ ತಂದೆಯೇ ತನ್ನ ಗರ್ಭಿಣಿ ಮಗಳನ್ನು ಕ್ರೂರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ದಲಿತ ಯುವಕನನ್ನು ಮದುವೆಯಾದ ಮಗಳ ಮೇಲಿನ ಈ ‘ಮರ್ಯಾದಾ ಹತ್ಯೆ’ಯನ್ನು ಭೀಮಘರ್ಜನೆ ಸಂಘಟನೆಯ ಜಿಲ್ಲಾ ಅಧ್ಯಕ್ಷ ಅರ್ಜುನ್ ಮಿಂಟಿ ಅವರು ತೀವ್ರವಾಗಿ ಖಂಡಿಸಿದ್ದಾರೆ.

1000392765

ಈ ಕುರಿತು ಮಾತನಾಡಿರುವ ಅವರು, “ದೇಶಕ್ಕೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಸಮಾಜದಲ್ಲಿ ಜಾತಿ ಎಂಬ ಪಿಡುಗು ಇಂದಿಗೂ ಜೀವಂತವಾಗಿದೆ ಎಂಬುದಕ್ಕೆ ಈ ಕ್ರೂರ ಘಟನೆಯೇ ಸಾಕ್ಷಿ. ಧರ್ಮದ ಹೆಸರಿನಲ್ಲಿ ಕಾಶ್ಮೀರದಲ್ಲಿ ಅಮಾಯಕರನ್ನು ಕೊಲ್ಲುವ ಉಗ್ರರಿಗೂ ಮತ್ತು ಜಾತಿಯ ಹೆಸರಿನಲ್ಲಿ ಸ್ವಂತ ಮಗಳನ್ನೇ ಕೊಲ್ಲುವವರಿಗೂ ಯಾವುದೇ ವ್ಯತ್ಯಾಸವಿಲ್ಲ. ಇಬ್ಬರೂ ದೇಶಕ್ಕೆ ಅಂಟಿದ ಅಪಾಯಕಾರಿ ರೋಗಗ್ರಸ್ತರು. ಹುಟ್ಟಿಸಿದ ಮಾತ್ರಕ್ಕೆ ಜೀವ ತೆಗೆಯುವ ಹಕ್ಕು ಯಾರಿಗೂ ಇಲ್ಲ,” ಎಂದು ಆಕ್ರೋಶ ವ್ಯಕ್ತಪಡಿಸಿದರು

“ಹಿಂದೂಗಳೆಲ್ಲಾ ಒಂದೇ ಎಂದು ಘೋಷಿಸುವ ಸಂಘಟನೆಗಳು ಇಂತಹ ಘೋರ ಅನ್ಯಾಯ ನಡೆದಾಗ ಮೌನಕ್ಕೆ ಶರಣಾಗಿರುವುದು ಖೇದಕರ. ಒಬ್ಬ ದಲಿತ ಯುವಕನನ್ನು ಮದುವೆಯಾದ ಕಾರಣಕ್ಕೆ ಒಬ್ಬ ಗರ್ಭಿಣಿ ಹೆಣ್ಣುಮಗಳ ಹತ್ಯೆಯಾದಾಗ ಯಾವೊಂದು ಸಂಘಟನೆಯೂ ಪ್ರತಿಭಟನೆಗೆ ಮುಂದಾಗದಿರುವುದು ಅವರ ಇಬ್ಬಗೆಯ ನೀತಿಯನ್ನು ತೋರಿಸುತ್ತದೆ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿರುವ ಭೀಮಘರ್ಜನೆ ಸಂಘಟನೆಯು ತನ್ನ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ: ಮಗಳನ್ನು ಕೊಂದ ಆರೋಪಿ ತಂದೆ ಹಾಗೂ ಈ ಕೃತ್ಯಕ್ಕೆ ಸಹಕರಿಸಿದವರನ್ನು ಕೂಡಲೇ ಬಂಧಿಸಿ, ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ (ಅಟ್ರಾಸಿಟಿ) ಹಾಗೂ ಭಾರತೀಯ ನ್ಯಾಯ ಸಂಹಿತೆಯಡಿ ಕಠಿಣ ಕಾನೂನು ಕ್ರಮ ಜರುಗಿಸಿ ಮರಣದಂಡನೆ ಶಿಕ್ಷೆ ವಿಧಿಸಬೇಕು ಎಂದು ಮನವಿ ಮಾಡಿದೆ.

ಈ ಸುದ್ದಿ ಓದಿದ್ದೀರಾ ? ಯಲ್ಲಾಪುರ | ಪಟ್ಟಣ ಪಂಚಾಯತ ನಲ್ಲಿ ₹35 ಲಕ್ಷ ಅಕ್ರಮ ಆರೋಪ; ನ್ಯಾಯಾಂಗ ತನಿಖೆಗೆ ಕರವೇ (ಗಜಸೇನೆ) ಆಗ್ರಹ

ನೊಂದ ಕುಟುಂಬಕ್ಕೆ ಹಾಗೂ ಮೃತಳ ಪತಿಗೆ ಸರ್ಕಾರ ಕೂಡಲೇ ಒಂದು ಕೋಟಿ ರೂಪಾಯಿಗಳ ಆರ್ಥಿಕ ನೆರವು ಘೋಷಿಸಬೇಕು. ಜಾತಿ ವ್ಯವಸ್ಥೆಯ ವಿರುದ್ಧ ಮತ್ತು ನೊಂದ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಸಂಘಟನೆಯು ಹೋರಾಟ ಮುಂದುವರಿಸಲಿದೆ ಎಂದು ಜಿಲ್ಲಾ ಅಧ್ಯಕ್ಷ ಅರ್ಜುನ್ ಮಿಂಟಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...