ಶಿರಸಿ | 13 ವರ್ಷಗಳಿಂದ ತಲೆಮೆರೆಸಿಕೊಂಡಿದ್ದ ಅಂತರ್ ಜಿಲ್ಲಾ ಆರೋಪಿ ಬಂಧನ

Date:

ಸುಮಾರು 13 ವರ್ಷಗಳಿಂದ ತಲೆಮೆರೆಸಿಕೊಂಡಿದ್ದ ಅಂತರ್ ಜಿಲ್ಲಾ ಆರೋಪಿಯೊಬ್ಬನನ್ನು ಶಿರಸಿಯ ಹೊಸ ಮಾರುಕಟ್ಟೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಗಳೂರಿನ ಮಂಗಳಾದೇವಿ ದೇವಸ್ಥಾನ ವ್ಯಾಪ್ತಿಯ ನಿವಾಸಿ ನಿತೀನ್ @ ಮಾದೇಶ @ ಗುಂಡ @ ಅನಿಲ್ ಬಂಧಿತ ಆರೋಪಿ.

2012ರ ಮಾ.14ರಂದು ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡು ಹೋದವನು ಕಳೆದ 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಧಾರವಾಡ, ಮಂಗಳೂರು, ಶಿವಮೊಗ್ಗ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಓಡಾಡಿಕೊಂಡಿದ್ದ. ಆಧಾರ್ ಕಾರ್ಡಿನಲ್ಲಿ ಹೆಸರು, ವಿಳಾಸವನ್ನು ಬದಲಾಯಿಸಿಕೊಂಡು ತಲೆಮರೆಸಿಕೊಂಡಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿತೀನ್‌ ಮೇಲೆ ಶಿವಮೊಗ್ಗ ಜಿಲ್ಲೆ ದೊಡ್ಡಪೇಟೆ ಪೊಲೀಸ್ ಠಾಣೆ, ಧಾರವಾಡ ಜಿಲ್ಲಾ ಸಬ್ ಅರ್ಬನ್ ಪೊಲೀಸ್ ಠಾಣೆ, ಬೆಂಗಳೂರು ದೇವನಳ್ಳಿ ಪೊಲೀಸ್ ಠಾಣೆ‌ ಸೇರಿದಂತೆ ರಾಜ್ಯದ ವಿವಿಧ ಠಾಣೆಗಳಲ್ಲಿ ಹಲವು ಸೆಕ್ಷನ್‌ ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಖಚಿತ ಮಾಹಿತಿ ಮೇರೆಗೆ ನಿನ್ನೆ (ಮೇ.14) ರಾತ್ರಿ 1 ಗಂಟೆ ಸುಮಾರಿಗೆ ಬೆಂಗಳೂರಿನ ಜ್ಞಾನ ಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಶ್ವೇಶ್ವರ ಲೇಔಟ್‌ನಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇದನ್ನೂ ಓದಿ: ಶಿರಸಿ | ಬಾಲಕಿ ಮೇಲೆ ಅತ್ಯಾಚಾರ; ಆರೋಪಿ ಪರಾರಿ

ಆರೋಪಿ ಪತ್ತೆಗೆ ಉತ್ತರ ಕನ್ನಡದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ ಹಾಗೂ ಜಗದೀಶ ಎಂ., ಪೊಲೀಸ್ ಉಪಾಧೀಕ್ಷಕ ಗಣೇಶ ಕೆ. ಎಲ್ ಅವರ ನೇತೃತ್ವದಲ್ಲಿ ಅಪರಾಧ ವಿಭಾಗದ ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡವು ಯಶಸ್ವೀ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...