ಶಿರಸಿ | ಅಂತರ ಜಿಲ್ಲಾ ಜಾನುವಾರು ಕಳ್ಳರ ಬಂಧನ; ಆರು ಆರೋಪಿಗಳು ಪೊಲೀಸರ ವಶಕ್ಕೆ

Date:

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿ ನಡೆದಿದ್ದ ಜಾನುವಾರು ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ತಂಡ ಯಶಸ್ವಿಯಾಗಿದೆ.

ಜಾನುವಾರುಗಳನ್ನು ಕಳ್ಳತನ ಮಾಡುತ್ತಿದ್ದ ಅಂತರ ಜಿಲ್ಲಾ ಗ್ಯಾಂಗ್‌ನ ಆರು ಜನರನ್ನು ಬಂಧಿಸಲಾಗಿದ್ದು, ಅವರಿಂದ ಮೂರು ಜಾನುವಾರುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಳಗೇರಿ ಗ್ರಾಮದ ನಿವಾಸಿ ರಾಮಚಂದ್ರ ಗೌಡ ಮತ್ತು ಅವರ ಸಹೋದರರ ಹೊಲದಲ್ಲಿದ್ದ ಕೊಟ್ಟಿಗೆಯಿಂದ ನಾಲ್ಕು ಎತ್ತುಗಳು ಹಾಗೂ ಮೂರು ಹೊರಿಗಳನ್ನು ಜನವರಿ 9 ಮತ್ತು 10 ರ ನಡುವಿನ ಅವಧಿಯಲ್ಲಿ ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾದ ಬೆನ್ನಲ್ಲೇ, ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆಯಂತೆ ಆರೋಪಿಗಳ ಪತ್ತೆಗಾಗಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000452584
ಬಂಧಿತ ಆರೋಪಿಗಳು

ಜನವರಿ 15 ರಂದು ಕಾರ್ಯಾಚರಣೆ ನಡೆಸಿದ ಪೊಲೀಸರು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಿರೂರ ಮತ್ತು ಅಕ್ಕಿ ಆಲೂರ ಮೂಲದ ಮೋಹನ ಶೇಖಪ್ಪ ಗೊಲ್ಲರ (25), ಬಸವರಾಜ ಅಮ್ಮಣಪ್ಪ ಗೊಲ್ಲರ (39), ಅವಿನಾಶ @ ಅಭೀಲಾಷ ರುದ್ದಪ್ಪ ಗೊಲ್ಲರ (22), ಸುರೇಶ ಫಕೀರಪ್ಪ ಗೊಲ್ಲರ (38), ಬಸವರಾಜ ಫಕೀರಪ್ಪ ಗೊಲ್ಲರ (47) ಮತ್ತು ಅಯೂಬ ಅನೀಮ್ ಸಾಬ (54) ಎಂಬುವವರನ್ನು ದಸ್ತಗಿರಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಆರ್‌ಸಿಬಿ ಪಾಲಾದ ಗೋಕರ್ಣದ ಕುವರಿ: ಪ್ರತ್ಯೂಷಾ ಕುಮಾರ್ ಡಬ್ಲ್ಯೂಪಿಎಲ್‌ಗೆ ಆಯ್ಕೆ

ಈ ಪ್ರಕರಣದಲ್ಲಿ ಇನ್ನೂ ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ಮುಂದುವರಿದಿದೆ. ಬಂಧಿತರಿಂದ ಸುಮಾರು 3 ಲಕ್ಷ ರೂಪಾಯಿ ಬೆಲೆಬಾಳುವ ಮಹಿಂದ್ರಾ ಪಿಕ್ ಅಪ್ ವಾಹನ, ಒಂದು ಮೋಟಾರ್ ಸೈಕಲ್ ಮತ್ತು ಮೂರು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ಶ್ರೀ ದೀಪನ್ ಎಂ.ಎನ್. ಹಾಗೂ ಇತರ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ, ಶಿರಸಿ ಗ್ರಾಮೀಣ ಪೊಲೀಸ್ ನಿರೀಕ್ಷಕ ರಮೇಶ್ ಶಂ. ಹೂಗಾರ ನೇತೃತ್ವದ ತಂಡವು ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ.

ಈ ತಂಡದಲ್ಲಿ ಪಿ.ಎಸ್.ಐ ಗಳಾದ ಸಂತೋಷಕುಮಾರ ಎಮ್, ಅಶೋಕ ಆರ್ ರಾಠೋಡ, ಎ.ಎಸ್.ಐ ಗಳಾದ ಸಂತೋಷ ಕಮಟಗೇರಿ, ಪ್ರದೀಪ ಟಿ. ರೇವಣಕರ ಸೇರಿದಂತೆ ಸಿಬ್ಬಂದಿಗಳು ಹಾಗೂ ತಾಂತ್ರಿಕ ವಿಭಾಗದ ಸದಸ್ಯರು ಭಾಗವಹಿಸಿದ್ದರು. ಸಮಯೋಚಿತವಾಗಿ ಕಾರ್ಯನಿರ್ವಹಿಸಿ ಆರೋಪಿಗಳನ್ನು ಪತ್ತೆ ಹಚ್ಚಿದ ಇಡೀ ತಂಡಕ್ಕೆ ಪೊಲೀಸ್ ಅಧೀಕ್ಷಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...