ಶಿರಸಿ | ಕೆಡಿಸಿಸಿ ಬ್ಯಾಂಕ್ ಚುನಾವಣೆ: ಮಂಕಾಳ ವೈದ್ಯರ ಅವಿರೋಧ ಆಯ್ಕೆ ಬಹುತೇಕ ಖಚಿತ

Date:

ಶಿರಸಿ: ಉತ್ತರ ಕನ್ನಡ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (ಕೆಡಿಸಿಸಿ) ಆಡಳಿತ ಮಂಡಳಿ ಚುನಾವಣೆಗೆ ಸಂಬಂಧಿಸಿದ ನಾಮಪತ್ರಗಳ ಪರಿಶೀಲನಾ ಪ್ರಕ್ರಿಯೆ ಪೂರ್ಣಗೊಂಡಿದೆ. ಒಟ್ಟು 46 ಅಭ್ಯರ್ಥಿಗಳು ಸಲ್ಲಿಸಿದ್ದ 87 ನಾಮಪತ್ರಗಳಲ್ಲಿ 44 ನಾಮಪತ್ರಗಳು ಅಂಗೀಕಾರಗೊಂಡಿದ್ದು, ಎರಡು ನಾಮಪತ್ರಗಳು ತಿರಸ್ಕೃತಗೊಂಡಿವೆ. ನಾಮಪತ್ರ ವಾಪಸ್ ಪಡೆಯಲು ಅಕ್ಟೋಬರ್ 19 ಕೊನೆಯ ದಿನವಾಗಿತ್ತು.

ಚುನಾವಣಾಧಿಕಾರಿ ಹಾಗೂ ಸಹಾಯಕ ಆಯುಕ್ತ ಕೆ.ವಿ.ಕಾವ್ಯಾರಾಣಿ ಅವರು ಈ ಕೆಳಗಿನ ಎರಡು ನಾಮಪತ್ರಗಳನ್ನು ತಿರಸ್ಕರಿಸಿದ್ದಾರೆ: ಮಾದೇವ ಗೋವಿಂದ ನಾಯ್ಕ (ಭಟ್ಕಳ): ಇವರ ನಾಮಪತ್ರ ತಿರಸ್ಕೃತಗೊಂಡ ಕಾರಣ, ಭಟ್ಕಳ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮತಕ್ಷೇತ್ರದಿಂದ ಕಣದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರ ಅವಿರೋಧ ಆಯ್ಕೆ ಬಹುತೇಕ ಖಚಿತವಾಗಿದೆ. ಸೂಚಕರು ಮತದಾರರಾಗಿಲ್ಲದ ಕಾರಣ ಮಾದೇವ ಗೋವಿಂದ ನಾಯ್ಕ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ವಿವೇಕ ಹೆಗಡೆ ಗಡಿಹಿತ್ಲು (ಸಿದ್ದಾಪುರ): ಕರ್ನಾಟಕ ಉಚ್ಚ ನ್ಯಾಯಾಲಯದ ರಿಟ್ ಪಿಟಿಶನ್ ಆದೇಶದ ಹಿನ್ನೆಲೆಯಲ್ಲಿ ಸಿದ್ದಾಪುರ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮತಕ್ಷೇತ್ರದಿಂದ ಸ್ಪರ್ಧಿಸಿದ್ದ ವಿವೇಕ ಹೆಗಡೆ ಗಡಿಹಿತ್ಲು ಅವರ ನಾಮಪತ್ರವೂ ತಿರಸ್ಕೃತಗೊಂಡಿದೆ.

ಪ್ರಮುಖ ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ: ಶಾಸಕ ಸತೀಶ ಸೈಲ್ (ಕಾರವಾರ), ಶಾಸಕ ಶಿವರಾಮ ಹೆಬ್ಬಾರ (ಯಲ್ಲಾಪುರ), ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ (ಭಟ್ಕಳ) ಅವರ ನಾಮಪತ್ರಗಳು ಅಂಗೀಕಾರಗೊಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕುಮಟಾ | ‘ಅಂದರ್-ಬಾಹರ್’ ಆಟಕ್ಕೆ ಅನುಮತಿ ನೀಡುವಂತೆ ಬೇಡಿಕೆ; ನೀಡದಿದ್ದರೆ ಹೋರಾಟದ ಎಚ್ಚರಿಕೆ!

ಇತರ ಪ್ರಮುಖರು: ಕಾರವಾರದಿಂದ ನಂದಕಿಶೋರ ನಾಯ್ಕ, ಸುರೇಶ ರಾಮ ಪೆಡೇಕರ, ಶಿರಸಿಯಿಂದ ಜಿ.ಆರ್.ಹೆಗಡೆ ಬೆಳ್ಳೇಕೇರಿ, ಗಣಪತಿ ಜೋಶಿ ಕೊಪ್ಪಲತೋಟ, ಸಿದ್ದಾಪುರದಿಂದ ಬಾಲಚಂದ್ರ ಹೆಗಡೆ ಹಳದೋಟ, ರಾಘವೇಂದ್ರ ಶಾಸ್ತ್ರಿ, ಯಲ್ಲಾಪುರದಿಂದ ರಾಮಕೃಷ್ಣ ಹೆಗಡೆ ಗೋರ್ಸಗದ್ದೆ, ಮುಂಡಗೋಡದಿಂದ ಎಲ್.ಟಿ.ಪಾಟೀಲ್, ಹಳಿಯಾಳದಿಂದ ಎಸ್.ಎಲ್.ಘೋಟೆಕರ, ಅಂಕೋಲಾದಿಂದ ಬೀರಣ್ಣ ನಾಯಕ, ಕುಮಟಾದಿಂದ ಗಜಾನನ ಪೈ, ರಾಜಗೋಪಾಲ ಅಡಿ, ಹೊನ್ನಾವರದಿಂದ ಶಿವಾನಂದ ಹೆಗಡೆ ಕಡತೋಕ, ಜೊಯ್ದಾದಿಂದ ಕೃಷ್ಣ ದೇಸಾಯಿ, ಹಾಗೂ ಒಕ್ಕಲುತನ, ಗ್ರಾಹಕರ, ಅರ್ಬನ್ ಬ್ಯಾಂಕ್ ಸೇರಿದಂತೆ ಇತರೆ ಕ್ಷೇತ್ರಗಳಿಂದ ಗೋಪಾಲಕೃಷ್ಣ ವೈದ್ಯ, ಆರ್.ಎಂ.ಹೆಗಡೆ ಬಾಳೇಸರ, ತಿಮ್ಮಯ್ಯ ಹೆಗಡೆ ಉಲ್ಲಾಳ, ಮೋಹನದಾಸ ನಾಯಕ ಮುಂತಾದವರ ನಾಮಪತ್ರಗಳು ಸ್ವೀಕೃತಗೊಂಡಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...