ಶಿರಸಿ | ಕೆಡಿಸಿಸಿ ಬ್ಯಾಂಕ್ ಚುನಾವಣೆ; ಮತಗಟ್ಟೆ ಸುತ್ತ ನಿಷೇಧಾಜ್ಞೆ

Date:

ಶಿರಸಿಯ ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ–ಆಪರೇಟಿವ್ ಬ್ಯಾಂಕ್ ಲಿಮಿಟೆಡ್‌ (ಕೆಡಿಸಿಸಿ) ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ, ಮತಗಟ್ಟೆ ಸುತ್ತ ನಿಷೇಧಾಜ್ಞೆ ಜಾರಿ ಮಾಡಿ ಉತ್ತರ ಕನ್ನಡ ಡಿಸಿ ಕೆ ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ.

ಈ ಆದೇಶವು ಅಕ್ಟೋಬರ್ 25ರಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಶಿರಸಿಯ ನ್ಯೂ ಮಾರ್ಕೆಟ್ ಯಾರ್ಡ್‌ನ ಮತಗಟ್ಟೆ ಸುತ್ತಲಿನ 100 ಮೀಟರ್ ವ್ಯಾಪ್ತಿಯಲ್ಲಿ ಜಾರಿಯಲ್ಲಿರಲಿದೆ.

ಆದೇಶದ ಪ್ರಕಾರ, ಜಿಲ್ಲೆಯಲ್ಲಿ ಐದು ಜನಕ್ಕಿಂತ ಹೆಚ್ಚು ಮಂದಿ ಗುಂಪು ಸೇರಿ ಮೆರವಣಿಗೆ, ಸಭೆ, ಸಮಾರಂಭ ನಡೆಸುವುದು ನಿಷೇಧಿಸಲಾಗಿದೆ. ಶಸ್ತ್ರಾಸ್ತ್ರಗಳು– ಖಡ್ಗಗಳು, ಬಂದೂಕುಗಳು, ಚಾಕು, ಲಾಠಿ, ದೊಣ್ಣೆ, ಬರ್ಚಿ, ಗದೆಗಳು ಅಥವಾ ಯಾವುದೇ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ತಿರುಗಾಡುವುದು ನಿಷಿದ್ಧ. ಮತಗಟ್ಟೆಗಳಿಂದ 100 ಮೀಟರ್ ವ್ಯಾಪ್ತಿಯೊಳಗೆ ಚುನಾವಣಾ ಪ್ರಚಾರ ಸಂಪೂರ್ಣ ನಿಷೇಧಿಸಲಾಗಿದೆ. ಚಿತ್ರ, ದೂರದರ್ಶನ ಅಥವಾ ಇತರ ಸಾಧನಗಳ ಮೂಲಕ ಚುನಾವಣೆ ಪ್ರಚಾರ ಮಾಡುವಂತಿಲ್ಲ. ಈ ಪ್ರದೇಶದ ವ್ಯಾಪ್ತಿಯೊಳಗಿನ ಝೆರಾಕ್ಸ್ ಅಂಗಡಿ, ಬುಕ್ ಸ್ಟಾಲ್, ಸೈಬರ್ ಕೆಫೆ ಮುಂತಾದವುಗಳಿಗೂ ನಿರ್ಬಂಧ ವಿಧಿಸಲಾಗಿದೆ. ಕಲ್ಲು, ಕ್ಷಾರ ಪದಾರ್ಥ, ಸ್ಫೋಟಕ ವಸ್ತುಗಳು ಅಥವಾ ಹಾನಿಕಾರಕ ವಸ್ತುಗಳನ್ನು ಸ್ಥಳಕ್ಕೆ ಕೊಂಡೊಯ್ಯುವುದೂ ಶೇಖರಿಸುವುದೂ ನಿಷಿದ್ಧ. ಅದೇ ರೀತಿ, ಮನುಷ್ಯ ಶವದ ಆಕೃತಿಯ ಪ್ರದರ್ಶನ ಅಥವಾ ದಹನ ಮಾಡುವುದು, ಘೋಷಣೆ ಕೂಗುವುದು, ಪದಹಾಡುವುದು, ವಾದ್ಯಬಾರಿಸುವುದು, ವ್ಯಾಖ್ಯಾನ ನೀಡುವುದು ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆಯಾಗುವ ಕ್ರಿಯೆಗಳು ಸಂಪೂರ್ಣ ನಿಷೇಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳ ಸೂಚನೆ.

ಉದ್ರೇಕಕಾರಿ ಹಾಡುಗಳು, ಪ್ರಚೋದನಾತ್ಮಕ ಕೂಗಾಟಗಳು, ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು ಅಥವಾ ಚಿಹ್ನೆಗಳನ್ನು ಪ್ರದರ್ಶಿಸುವುದಕ್ಕೆ ಅವಕಾಶವಿಲ್ಲ. ಯಾವುದೇ ವ್ಯಕ್ತಿ ಮಾರಕಾಸ್ತ್ರಗಳು, ಸ್ಪೋಟಕ ಅಥವಾ ವಿನಾಶಕಾರಿ ವಸ್ತುಗಳೊಂದಿಗೆ ಕಾಣಿಸಿಕೊಂಡರೆ, ಅವುಗಳನ್ನು ಪೊಲೀಸರು ವಶಪಡಿಸಿಕೊಳ್ಳಲಿದ್ದಾರೆ ಜೊತೆಗೆ ಅಂತವರ ಮೇಲೆ ಕಾನೂನು ಕ್ರಮವನ್ನು ಕೈಗೊಳ್ಳಲಾಗುತ್ತದೆ. ಮತಗಟ್ಟೆ ಸುತ್ತಲಿನ 100 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್, ಕಾರ್ಡಲೆಸ್ ಫೋನ್ ಅಥವಾ ಇನ್ನಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನೂ ನಿಷೇಧಿಸಲಾಗಿದೆ (ಚುನಾವಣಾ ಸಿಬ್ಬಂದಿ ಹೊರತುಪಡಿಸಿ). ಮತಗಟ್ಟೆ ವ್ಯಾಪ್ತಿಯೊಳಗೆ ಪ್ರಚಾರದ ಪೋಸ್ಟರ್, ಬ್ಯಾನರ್ ಮತ್ತು ಇತರ ವಸ್ತುಗಳನ್ನು ಬಳಸುವಂತಿಲ್ಲ. ಧ್ವನಿವರ್ಧಕಗಳ ಬಳಕೆ ನಿಷಿದ್ಧವಾಗಿದೆ. ಹಾಗೆಯೇ, ಕಲ್ಯಾಣ ಮಂಟಪ, ಸಮುದಾಯ ಭವನ, ಹೋಟೆಲ್ ಮತ್ತು ಅತಿಥಿಗೃಹಗಳಲ್ಲಿ ವಾಸ್ತವ್ಯ ಹೂಡಿದವರ ಪಟ್ಟಿಗಳನ್ನು ಪರಿಶೀಲಿಸಿ ಮತದಾರರಲ್ಲದವರನ್ನು ಕ್ಷೇತ್ರದಿಂದ ಹೊರಕ್ಕೆ ಕಳುಹಿಸಲು ಕ್ರಮ ಕೈಗೊಳ್ಳಬೇಕೆಂದು ಆದೇಶದಲ್ಲಿ ಸೂಚಿಸಲಾಗಿದೆ.

ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಆದರೆ ಈ ಆದೇಶವು ಚುನಾವಣಾ ಕರ್ತವ್ಯದಲ್ಲಿ ತೊಡಗಿರುವ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಹಾಗೂ ಮತದಾನಕ್ಕಾಗಿ ಮತಗಟ್ಟೆಗೆ ಬರುವ ಮತದಾರರಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...