ಶಿರಸಿ | ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಪ್ರಶಂಸಿಸಿದ ಶಾಸಕ ಶಿವರಾಮ ಹೆಬ್ಬಾರ

Date:

ನಿಸಾರ್ ಅಹಮದ್ ದಸರಾ ಉದ್ಘಾಟನೆ ಮಾಡಲಿಲ್ಲವಾ? ನಾಡದೇವಿ ಪೂಜೆಗೆ ಜಾತಿ, ಧರ್ಮ ಬೇಡ. ಅಬ್ದುಲ್ ಕಲಾಂ ರಾಷ್ಟ್ರಪತಿ ಆದಾಗ ನಾವು ಹೆಮ್ಮೆ ಪಟ್ಟಿದ್ದೇವೆ. ಹಾಗಿದ್ದರೆ ಈಗ ಕನ್ನಡಕ್ಕೆ ಬೂಕರ್ ಪ್ರಶಸ್ತಿ ಪಡೆದು ರಾಜ್ಯಕ್ಕೆ ಗೌರವ ತಂದ ಬಾನು ಮುಷ್ತಾಕ್ ಅವರ ಬಗ್ಗೆ ಅಪಚಾರ ಏಕೆ? ಎಂದು ಪ್ರಶ್ನಿಸಿದ ಬಿಜೆಪಿ ಉಚ್ಚಾಟಿತ ಶಾಸಕ ಶಿವರಾಮ ಹೆಬ್ಬಾರ ಅವರು ಧರ್ಮ ಯಾವ ಪಕ್ಷದ ಗುತ್ತಿಗೆಯಲ್ಲ ಎಂದು ಬಿಜೆಪಿ ಅವರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಶಿರಸಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿ ನೀಡಿದ ಅವರು, “ನಾನೀಗ ಫ್ರೀ ಬರ್ಡ್. ಒಳ್ಳೆಯ ಕೆಲಸಕ್ಕೆ ಯಾವತ್ತೂ ಸರ್ಕಾರಕ್ಕೆ ಬೆಂಬಲ ನೀಡುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನಾಯಕತ್ವದಲ್ಲಿ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ” ಎಂದು ಪ್ರಶಂಸಿಸಿದ ಅವರು, ಬಾನು ಮುಷ್ತಾಕ್ ನಾಡದೇವಿ ಉತ್ಸವ ಉದ್ಘಾಟನೆಗೆ ವಿರೋಧ ವ್ಯಕ್ತವಾಗಿರುವುದನ್ನು ಟೀಕಿಸಿದರು.

ಕೆಡಿಸಿಸಿ ಬ್ಯಾಂಕ್ ಬಗ್ಗೆ ಮಾತನಾಡಿ, “ಇದು ಜಿಲ್ಲೆಯ ರೈತರ ಮಾತೃ ಸಂಸ್ಥೆ. 1.12 ಲಕ್ಷ ರೈತರಿಗೆ ₹1700 ಕೋಟಿ ಸಾಲ ನೀಡಿರುವ ಕಾಮಧೇನು. ನಾವು ಶಾಶ್ವತವಲ್ಲ. ಆದರೆ, ಇಂತಹ ಸಂಸ್ಥೆಗಳ ಶಾಶ್ವತತೆಗೆ ನಾವು ಶ್ರಮಿಸಬೇಕು,” ಎಂದರು.
ಧರ್ಮಸ್ಥಳ ಪ್ರಕರಣ ಕುರಿತು ಪ್ರತಿಕ್ರಿಯಿಸುತ್ತಾ, “ಇದುವರೆಗೆ ಕೇವಲ ಶೇಕಡಾ 30ರಷ್ಟೇ ಸತ್ಯಾಂಶ ಬಹಿರಂಗವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸತ್ಯ ಹೊರಬರುತ್ತದೆ” ಎಂದು ಪ್ರತಿಕ್ರಿಯೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಶಿರಸಿ | 35 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಆರೋಪಿ ಕೊನೆಗೂ ಬಂಧನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...