ಶಿರಸಿ | ಸ್ವಂತ ಖರ್ಚಿನಲ್ಲಿ ಹೊಂಡ ಮುಚ್ಚಿದ ನಗರಸಭೆ ಸದಸ್ಯ ನಾಗರಾಜ್ ನಾಯ್ಕ್

Date:

ಶಿರಸಿ: ನಗರದ ಮಧ್ಯಭಾಗದ ಪ್ರಮುಖ ರಸ್ತೆಯಲ್ಲಿದ್ದ ಬೃಹತ್ ಹೊಂಡವೊಂದನ್ನು ನಗರಸಭೆ ಸದಸ್ಯರು ಸ್ವತಃ ತಮ್ಮ ಖರ್ಚಿನಲ್ಲಿ ಸಾಮಗ್ರಿ ತರಿಸಿ, ತಾವೇ ಕಾಂಕ್ರೀಟ್ ಕಲಸಿ ಮುಚ್ಚುವ ಮೂಲಕ ಮಾದರಿ ಕೆಲಸ ಮಾಡಿದ್ದಾರೆ. ನಗರಸಭೆಯ ಸದಸ್ಯರಾದ ನಾಗರಾಜ್ ನಾಯ್ಕ್ (ಜಿಮ್ ನಾಗ) ಅವರು ಈ ಕಾರ್ಯವನ್ನು ಸ್ವಯಂ ಪ್ರೇರಣೆಯಿಂದ ಕೈಗೊಂಡಿದ್ದಾರೆ. ಶಿರಸಿಯ ಐದು ರಸ್ತೆ ಸರ್ಕಲ್ ಬಳಿಯ ರಸ್ತೆ ಭಾಗದಲ್ಲಿ ಬಿದ್ದಿದ್ದ “ಯಮಸ್ವರೂಪದ” ಹೊಂಡದಿಂದಾಗಿ ವಾಹನ ಸವಾರರು ಪ್ರತಿದಿನ ತೊಂದರೆ ಅನುಭವಿಸುತ್ತಿದ್ದರು.

ಈ ವಿಷಯವನ್ನು ಗಮನಿಸಿದ ಸದಸ್ಯ ನಾಗರಾಜ್ ನಾಯ್ಕ್ ಅವರು ಇಂದು ಬೆಳಗ್ಗೆ ತಮ್ಮ ಸಂಗಡಿಗರೊಂದಿಗೆ ಸ್ಥಳಕ್ಕೆ ಬಂದು, ಸ್ವಂತ ಹಣದಲ್ಲಿ ಸಿಮೆಂಟ್ ಮತ್ತು ಜಲ್ಲಿಯನ್ನು ತರಿಸಿ, ತಾವೇ ಸ್ವತಃ ಕಾಂಕ್ರೀಟ್ ಕಲಸಿ ಹೊಂಡವನ್ನು ಸಂಪೂರ್ಣವಾಗಿ ಮುಚ್ಚಿದರು. ಸಾರ್ವಜನಿಕ ಹಿತದೃಷ್ಟಿಯಿಂದ ಮಾಡಿದ ಈ ಕಾರ್ಯಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಇವರು ಮಾಡಿದ ಕೆಲಸಕ್ಕೆ ಹಲವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಸಣ್ಣವರ ಬಂಧನ, ದೊಡ್ಡವರಿಗೆ ರಕ್ಷಣೆ: ಮಟ್ಕಾ, ಇಸ್ಪಿಟ್ ದಂಧೆಯ ಹಿಂದಿರುವ ಕಾಣದ ಕೈ ಯಾವುದು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಲಾಖೆ ಎಚ್ಚೆತ್ತುಕೊಳ್ಳಲಿ ಎಂಬ ಆಗ್ರಹ : ಸದಸ್ಯರ ಈ ಜನಪರ ಕಾರ್ಯಕ್ಕೆ ಸಾಮಾಜಿಕ ವಲಯದಲ್ಲೂ ಶ್ಲಾಘನೆ ವ್ಯಕ್ತವಾಗುತ್ತಿದ್ದರೆ, ಇನ್ನೊಂದೆಡೆ ನಗರದಾದ್ಯಂತ ಬಿದ್ದಿರುವ ನೂರಾರು ಹೊಂಡಗಳ ಕುರಿತು ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದಾರೆ.

“ನಗರದ ಅನೇಕ ರಸ್ತೆಗಳಲ್ಲಿ ಗುಂಡಿಗಳು ತುಂಬಿಕೊಂಡಿವೆ. ಈಗ ಮಳೆ ಪ್ರಮಾಣ ಕಡಿಮೆಯಾದ ಕಾರಣ ಹೊಂಡ ಮುಚ್ಚಲು ಇದು ಸರಿಯಾದ ಸಮಯ. ಸಂಬಂಧಿತ ಇಲಾಖೆ ಈ ಸದಸ್ಯರ ಕೆಲಸವನ್ನು ನೋಡಿ ಕೇವಲ ಚಪ್ಪಾಳೆ ತಟ್ಟದೇ, ನಗರದ ಇತರ ಹೊಂಡಗಳನ್ನೂ ಶೀಘ್ರವಾಗಿ ಮುಚ್ಚುವ ಕಾರ್ಯ ಕೈಗೊಳ್ಳಬೇಕು. ಅನಾಹುತ ಅಥವಾ ಜೀವಹಾನಿ ಸಂಭವಿಸುವ ಮುನ್ನ ಕ್ರಮವಹಿಸಬೇಕು,” ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...